ETV Bharat / state

ಶಾಸಕರ ಮನೆ ಕಾರಿಗೆ ಬೆಂಕಿ ಇಟ್ಟ ಪ್ರಕರಣ: ಇಬ್ಬರನ್ನು ವಶಕ್ಕೆ ಪಡೆದು ಅಜ್ಞಾತ ಸ್ಥಳದಲ್ಲಿ ತನಿಖೆ - ಬೆಂಗಳೂರು ಕ್ರೈಂ

ಶಾಸಕ ಸತೀಶ್ ರೆಡ್ಡಿಗೆ ಸೇರಿದ ಕಾರುಗಳಿಗೆ ಬೆಂಕಿ ಇಡಲು ಸಂಚು ರೂಪಿಸಿದ ಆರೋಪಿಗಳು ಎಲ್ಲ ರೀತಿಯ ಪ್ಲ್ಯಾನ್ ಮಾಡಿಕೊಂಡಿದ್ದರು. ಬೇಗೂರು ಬಳಿಯ ಪೆಟ್ರೋಲ್ ಬಂಕ್ ವೊಂದರಲ್ಲಿ ಇಬ್ಬರು ದುಷ್ಕರ್ಮಿಗಳು ಬಂದು ಬೈಕ್​​ನ ಜೊತೆಗೆ ಬಾಟಲ್​​ನಲ್ಲಿ ಪೆಟ್ರೋಲ್ ತುಂಬಿಸಿಕೊಂಡಿದ್ದಾರೆ. ಬಳಿಕ ಸತೀಶ್ ರೆಡ್ಡಿ ಮನೆ ಹಿಂಭಾಗದ ಗೇಟ್ ಹಾರಿ ಎರಡು ಕಾರುಗಳಿಗೆ ಪೆಟ್ರೋಲ್​ ಎರಚಿ, ಬೆಂಕಿ ಇಟ್ಟು ಕ್ಷಣಾರ್ಧದಲ್ಲಿ ಪರಾರಿಯಾಗಿದ್ದರು.

bjp-mla-satish-reddys-cars-set-on-fire-in-bengaluru-two-accused-arrest
ಶಾಸಕರ ಕಾರಿಗೆ ಬೆಂಕಿ
author img

By

Published : Aug 12, 2021, 10:10 PM IST

Updated : Aug 12, 2021, 10:35 PM IST

ಬೆಂಗಳೂರು: ಶಾಸಕ ಸತೀಶ್ ರೆಡ್ಡಿ ಮನೆಗೆ ನುಗ್ಗಿ ಕಾರಿಗೆ ಬೆಂಕಿ ಇಟ್ಟ ಪ್ರಕರಣ ಸಂಬಂಧ ತನಿಖೆ ಬಿಗಿಗೊಳಿಸಿರುವ ನಗರ ಆಗ್ನೇಯ ವಿಭಾಗ ಪೊಲೀಸರು ಕೃತ್ಯದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಮೂವರು ಆರೋಪಿಗಳ ಪೈಕಿ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇಬ್ಬರು ಆರೋಪಿಗಳನ್ನು ಅಜ್ಞಾತ ಸ್ಥಳದಲ್ಲಿರಿಸಿ ಬೊಮ್ಮನಹಳ್ಳಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆಯಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ. ಘಟನೆ ಎಸಗಲು ನಿಖರ ಕಾರಣಗಳೇನು? ಎಂಬುದರ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಘಟನೆ ಬೆಳಕಿಗೆ ಬರುತ್ತಿದ್ದಂತೆ ಪೊಲೀಸರ ಪ್ರಾಥಮಿಕ ತನಿಖೆ ವೇಳೆ ಇಬ್ಬರು ಕಿಡಿಗೇಡಿಗಳು ಕೃತ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿತ್ತು. ತನಿಖೆಯ ಆಳಕ್ಕಿಳಿದ ಪೊಲೀಸರು ಇಬ್ಬರ ಬದಲು ಮೂವರು ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ದೃಢಪಡಿಸಿಕೊಂಡಿದ್ದಾರೆ. ಸದ್ಯ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಬೇಗೂರು ಕೆರೆ ಮಧ್ಯೆ ಕೃತಕವಾಗಿ ನಿರ್ಮಿಸಿದ್ದ ಶಿವನಮೂರ್ತಿ ಪ್ರತಿಷ್ಠಾಪನೆ ಹಾಗೂ ಪೂಜೆ ವಿಚಾರದಲ್ಲಿ ಸತೀಶ್ ರೆಡ್ಡಿ ಮಧ್ಯಪ್ರವೇಶಿಸಿದ್ದೇ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ. ಮನೆಗೆ ನುಗ್ಗಿ ಕಾರಿಗೆ ಬೆಂಕಿ ಇಟ್ಟ ಕೃತ್ಯದಲ್ಲಿ ತಮಿಳುನಾಡು ಮೂಲದ ಆರೋಪಿಗಳು ಭಾಗಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ಘಟನೆಯ ಬಗ್ಗೆ ಮಾಹಿತಿ: ಸತೀಶ್ ರೆಡ್ಡಿಗೆ ಸೇರಿದ ಕಾರುಗಳನ್ನು ಬೆಂಕಿ ಇಡಲು ಸಂಚು ರೂಪಿಸಿದ ಆರೋಪಿಗಳು ಎಲ್ಲ ರೀತಿಯ ಪ್ಲ್ಯಾನ್ ಮಾಡಿಕೊಂಡಿದ್ದರು. ಬೇಗೂರು ಬಳಿಯ ಪೆಟ್ರೋಲ್ ಬಂಕ್ ವೊಂದರಲ್ಲಿ ಇಬ್ಬರು ದುಷ್ಕರ್ಮಿಗಳು ಬಂದು ಬೈಕ್​ನ ಜೊತೆಗೆ ಬಾಟಲಿಯಲ್ಲಿ ಪೆಟ್ರೋಲ್ ತುಂಬಿಸಿಕೊಂಡಿದ್ದಾರೆ. ಬಳಿಕ ಸತೀಶ್ ರೆಡ್ಡಿ ಮನೆ ಹಿಂಭಾಗದ ಗೇಟ್ ಹಾರಿ ಎರಡು ಕಾರುಗಳಿಗೆ ಪೆಟ್ರೋಲ್​​ ಎರಚಿ, ಬೆಂಕಿ ಇಟ್ಟು ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾರೆ. ತಮ್ಮ ಬೈಕ್​​ ಬಗ್ಗೆ ಪೊಲೀಸರಿಗೆ ಗೊತ್ತಾಗದಂತೆ ಮನೆಗೆ ಬರುವ ಮುನ್ನ ಒಂದು ಕೀ.ಮೀ. ದೂರದಲ್ಲಿ ಬೈಕ್ ನಿಲ್ಲಿಸಿ ಎಸ್ಕೇಪ್ ಆಗಿರುವುದು ಕಂಡುಬಂದಿದೆ.

ಪ್ರಕರಣದ ತನಿಖೆಗೆ 5 ತಂಡ ರಚನೆ.. 200ಕ್ಕೂ ಹೆಚ್ಚು ಸಿಸಿಟಿವಿ ಪರಿಶೀಲನೆ

ಪ್ರಕರಣದ ಆರೋಪಿಗಳ ಪತ್ತೆಗಾಗಿ ಪ್ರತ್ಯೇಕ ಐದು ಪೊಲೀಸ್ ತಂಡ ರಚನೆ ಮಾಡಲಾಗಿತ್ತು. ಬೇಗೂರು ಸುತ್ತಮುತ್ತಲಿನ ಸುಮಾರು 200ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮರಾಗಳಲ್ಲಿ ಸೆರೆಯಾಗಿರುವ ದೃಶ್ಯಾವಳಿ ವಶಕ್ಕೆ ಪಡೆದುಕೊಂಡು ತಾಂತ್ರಿಕ ತನಿಖೆ ನಡೆಸಿ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಕೃತ್ಯದಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಎಷ್ಟು ಮಂದಿ ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಸಿದ ಬಳಿಕವಷ್ಟೇ ಸಂಪೂರ್ಣ ಮಾಹಿತಿ ಗೊತ್ತಾಗಲಿದೆ.

ಓದಿ: ಬೆಂಗಳೂರು: ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ದುಷ್ಕರ್ಮಿಗಳಿಂದ ಬೆಂಕಿ

Last Updated : Aug 12, 2021, 10:35 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.