ETV Bharat / state

ಬೆಂಗಳೂರಲ್ಲಿ ಶಾಸಕ ಸುನಿಲ್​ ಕುಮಾರ್ ಏಕಾಂಗಿ ಪ್ರತಿಭಟನೆ; ಪೊಲೀಸ್​ ವಶಕ್ಕೆ - ಬೆಂಗಳೂರು

ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಬಂಧನ ವಿರೋಧಿಸಿ ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್​ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

MLA Sunil Kumar in police custody
ಶಾಸಕ ಸುನಿಲ್​ ಕುಮಾರ್ ಪೊಲೀಸ್​ ವಶಕ್ಕೆ
author img

By ETV Bharat Karnataka Team

Published : Jan 4, 2024, 10:51 AM IST

Updated : Jan 4, 2024, 1:06 PM IST

ಶಾಸಕ ಸುನಿಲ್​ ಕುಮಾರ್ ಪೊಲೀಸ್​ ವಶಕ್ಕೆ

ಬೆಂಗಳೂರು: ಹುಬ್ಬಳ್ಳಿಯಲ್ಲಿ ಹಿಂದೂ ಕಾರ್ಯಕರ್ತ ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಇಲ್ಲಿನ ಸದಾಶಿವನಗರ ಪೊಲೀಸ್​ ಠಾಣೆ ಎದುರು ಏಕಾಂಗಿಯಾಗಿ ಪ್ರತಿಭಟನೆ ನಡೆಸುತ್ತಿದ್ದ ಶಾಸಕ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಅವ​ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 'ಅಯೋಧ್ಯೆ ರಾಮಮಂದಿರದ ಕರಸೇವಕ ನಾನು. ನನ್ನನ್ನೂ ಬಂಧಿಸಿ' ಎಂಬ ಬರಹವುಳ್ಳ ಕರಪತ್ರ ಹಿಡಿದು, ರಾಜ್ಯ ಸರ್ಕಾರದ ವಿರುದ್ಧ ಸುನಿಲ್​ ಕುಮಾರ್ ಪ್ರತಿಭಟನೆ ನಡೆಸುತ್ತಿದ್ದರು.

ಪೊಲೀಸರು ವಶಕ್ಕೆ ಪಡೆಯುವ ಸಂಧರ್ಭದಲ್ಲಿ ಮಾತನಾಡಿದ ಅವರು, 'ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿಂದೂ ವಿರೋಧಿ ವರ್ತನೆ ಮುಂದುವರೆಸಿದ್ದಾರೆ' ಎಂದು ಆಕ್ರೋಶ ಹೊರಹಾಕಿದರು. ಈ ಸಂದರ್ಭದಲ್ಲಿ ಕೆಲ ಕಾರ್ಯಕರ್ತರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರು.

ಇದನ್ನೂ ಓದಿ: ನಮ್ಮ ಹೋರಾಟ ನಿಂತಿಲ್ಲ, ಜ.9ಕ್ಕೆ ಹುಬ್ಬಳ್ಳಿಯಲ್ಲಿ ಮತ್ತೆ ಬೃಹತ್ ಪ್ರತಿಭಟನೆ: ಆರ್ ಅಶೋಕ್​

Last Updated : Jan 4, 2024, 1:06 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.