ETV Bharat / state

ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ಸಚಿವರ ಅಸಮಾಧಾನ?

ಸಂಪುಟ ಸಭೆ ತೀರ್ಮಾನವನ್ನು ನಾನು ಹೇಳಿದ್ದೇನೆ ಅಷ್ಟೇ. ‌ಇದರಲ್ಲಿ ನನ್ನದೇನಿದೆ. ಸುಮ್ಮನೆ ನನ್ನ ಬಗ್ಗೆ ಸೋಮಶೇಖರ್ ರೆಡ್ಡಿ ಮಾತನಾಡಿದ್ದಾರೆ ಎಂದು ಆನಂದ್ ಸಿಂಗ್ ಬಳಿ ಸಚಿವ ಜೆ.ಸಿ.ಮಾಧುಸ್ವಾಮಿ ಅಸಮಾಧಾನ ಹೊರಹಾಕಿದ್ದಾರೆ.

author img

By

Published : Nov 27, 2020, 7:20 PM IST

bjp-mlas-opposition-against-somashekar-reddy-over-his-statment
ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ಸಚಿವರಿಂದಲೇ ಅಸಮಾಧಾನ

ಬೆಂಗಳೂರು: ಬಳ್ಳಾರಿ ಜಿಲ್ಲೆ ವಿಭಜನೆಗೆ ಅಪಸ್ವರ ಎತ್ತಿರುವ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ಸಚಿವರಿಂದ ಅಸಮಾಧಾನ ವ್ಯಕ್ತವಾಗಿದೆ ಎನ್ನಲಾಗಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಿತು. ನಂತರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳ ಬಗ್ಗೆ ಮಾಹಿತಿ ನೀಡಲು ಸಜ್ಜಾಗಿದ್ದರು. ಅಲ್ಲೇ ಪಕ್ಕದಲ್ಲಿ ಕುಳಿತಿದ್ದ ಅರಣ್ಯ ಸಚಿವ ಆನಂದ್ ಸಿಂಗ್ ಅವರ ಬಳಿ ಚರ್ಚೆ ನಡೆಸಿದ ಮಾಧುಸ್ವಾಮಿ, ನನ್ನ ಬಗ್ಗೆ ಸೋಮಶೇಖರ್ ರೆಡ್ಡಿ ಏನು ಮಾತನಾಡುತ್ತಾರೆ ಎಂದು ಕಿಡಿಕಾರಿದ್ದಾರೆ.

ಸಂಪುಟ ಸಭೆ ತೀರ್ಮಾನವನ್ನು ನಾನು ಹೇಳಿದ್ದೇನೆ ಅಷ್ಟೇ. ‌ಇದರಲ್ಲಿ ನನ್ನದೇನಿದೆ. ಸುಮ್ಮನೆ ನನ್ನ ಬಗ್ಗೆ ಸೋಮಶೇಖರ್ ರೆಡ್ಡಿ ಮಾತನಾಡಿದ್ದಾರೆ ಎಂದು ಆನಂದ್ ಸಿಂಗ್ ಬಳಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಆಗ ಆನಂದ್ ಸಿಂಗ್ ಪ್ರತಿಕ್ರಿಯಿಸಿ, ಪ್ರತ್ಯೇಕ ಜಿಲ್ಲೆಗೆ ಸೋಮಶೇಖರ್ ರೆಡ್ಡಿ ಅಡ್ಡಗಾಲು ಹಾಕುತ್ತಿದ್ದಾರೆಂದು ಹೇಳಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಸಚಿವ ಜೆ.ಸಿ. ಮಾಧುಸ್ವಾಮಿ
ಸಚಿವ ಜೆ.ಸಿ.ಮಾಧುಸ್ವಾಮಿ

ಸಂಪುಟ ಸಭೆಗೂ ಹಲವು ಸಚಿವರ ಗೈರು:

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಗೆ ಹಲವು ಸಚಿವರು ಗೈರಾಗಿದ್ದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಬೆಳಗ್ಗೆ 10.30ಕ್ಕೆ ಸಂಪುಟ ಸಭೆ ನಿಗದಿಯಾಗಿತ್ತು. ಸಮಯಕ್ಕೆ ಸರಿಯಾಗಿ ಸಿಎಂ ಯಡಿಯೂರಪ್ಪ, ಡಿಸಿಎಂ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಸೋಮಣ್ಣ, ಪ್ರಭು ಚೌವ್ಹಾಣ್ ಸೇರಿದಂತೆ ಕೆಲವೇ ಮಂದಿ ಸಚಿವರು ಸಭೆಗೆ ಹಾಜರಾಗಿದ್ದರು.

ಇನ್ನು ಡಿಸಿಎಂ ಲಕ್ಷ್ಮಣ ಸವದಿ, ಸಚಿವರಾದ ರಮೇಶ್ ಜಾರಕಿಹೊಳಿ, ಆರ್.ಅಶೋಕ್ ದೆಹಲಿಯಲ್ಲಿ ಸಿ.ಟಿ.ರವಿ ಅವರ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಹೈದರಾಬಾದ್​ನಲ್ಲಿ ನಡೆಯುತ್ತಿರುವ ಪಾಲಿಕೆ ಚುನಾವಣಾ ಪ್ರಚಾರಕ್ಕೆ ತೆರಳಿದ್ದಾರೆ. ಸಚಿವ ಕೆ.ಎಸ್.ಈಶ್ವರಪ್ಪ ಸಹ ಖಾಸಗಿ ಕಾರ್ಯಕ್ರಮಕ್ಕೆ ತೆರಳಿದ್ದಾರೆ.

ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಶ್ರೀರಾಮುಲು, ಹೆಚ್.ನಾಗೇಶ್, ಕೋಟಾ ಶ್ರೀನಿವಾಸ್ ಪೂಜಾರಿ, ಡಿಸಿಎಂ ಡಾ. ಅಶ್ವತ್ಥ ನಾರಾಯಣ ಸೇರಿದಂತೆ ಸಂಪುಟ ಸಭೆಗೆ 10ಕ್ಕೂ ಹೆಚ್ಚು ಸಚಿವರು‌ ಗೈರಾಗಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.