ETV Bharat / state

ಶಿಕ್ಷಣ ಸಚಿವರ ನಿವಾಸದ ಮೇಲೆ ದಾಳಿ: ಗೂಂಡಾ ವರ್ತನೆಗೆ  ಡಿ.ಎಸ್ ಅರುಣ್ ಖಂಡನೆ

ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ತಿಪಟೂರಿನ ಮನೆಗೆ ಎನ್.ಎಸ್.ಯು.ಐ ಕಾರ್ಯಕರ್ತರು ಮುತ್ತಿಗೆ ಹಾಕಿ ಬೆಂಕಿ ಹಚ್ಚುವ ಪ್ರಯತ್ನ ನಡೆಸಿದ್ದು,ಇಂತಹ ಗೂಂಡಾ ಪ್ರವೃತ್ತಿಯನ್ನು ಖಂಡಿಸುವುದಾಗಿ ಬಿಜೆಪಿ ಎಂಲ್​ಸಿ ಡಿ.ಎಸ್ ಅರುಣ್ ಹೇಳಿದ್ದಾರೆ.

bjp-mlc-arun-condemns-attack-on-education-ministers-home
ಶಿಕ್ಷಣ ಸಚಿವರ ನಿವಾಸಕ್ಕೆ ದಾಳಿ : ಗೂಂಡಾ ವರ್ತನೆಗೆ ಎಂಎಲ್ ಸಿ ಡಿ.ಎಸ್ ಅರುಣ್ ಖಂಡನೆ
author img

By

Published : Jun 2, 2022, 5:41 PM IST

ಬೆಂಗಳೂರು : ಶಾಲಾ ಮಕ್ಕಳ ಪಠ್ಯ ಪುಸ್ತಕಗಳನ್ನು ಪರಿಷ್ಕರಣೆ ಮಾಡಿರುವ ಸಂಬಂಧ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ತಿಪಟೂರಿನ ಮನೆಗೆ ಎನ್.ಎಸ್.ಯು.ಐ ಕಾರ್ಯಕರ್ತರು ಮುತ್ತಿಗೆ ಹಾಕಿ ಬೆಂಕಿ ಹಚ್ಚುವ ಪ್ರಯತ್ನ ನಡೆಸಿದ್ದು, ಇಂತಹ ಗೂಂಡಾ ಪ್ರವೃತ್ತಿಯ ವರ್ತನೆಗಳನ್ನು ತೀವ್ರವಾಗಿ ಖಂಡಿಸುವುದಾಗಿ ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್ ಹೇಳಿದ್ದಾರೆ. ಈ ರೀತಿಯಲ್ಲಿ ಏಕಾಏಕಿ ಸಚಿವರ ಮನೆಯ ಮುಂದೆ ಗಲಾಟೆ ಮಾಡುವುದು ಉತ್ತಮ ಬೆಳವಣಿಗೆಯಲ್ಲ ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರು ನಾಡಿನ ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಪಠ್ಯ ಪುಸ್ತಕ ರೂಪಿಸಲು ಶ್ರಮಿಸುತ್ತಿದ್ದು, ಶಿಕ್ಷಣ ಇಲಾಖೆಯಲ್ಲಿ ಹಲವಾರು ಬದಲಾವಣೆಗಳನ್ನು ತಂದಿದ್ದಾರೆ. ಅವರು ಶಿಕ್ಷಣ ಸಚಿವರಾಗಿ ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅದಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ ಎಂದು ಹೇಳಿದ್ದಾರೆ.

ನಾಡಿನ ಖ್ಯಾತ ಕವಿಗಳು ಮತ್ತು ಲೇಖಕರಿಗೆ ಅವಮಾನಕರ ರೀತಿಯಲ್ಲಿ ಮಾತನಾಡಿರುವುದು, ಅವರುಗಳು ರಚಿಸಿದ ಕವನಗಳು (ಕವಿತೆಗಳು) ಮತ್ತು ಗದ್ಯ ಪಾಠಗಳ ಬಗ್ಗೆ ಆಕ್ಷೇಪಾರ್ಹ ಮತ್ತು ಅಸಂಬದ್ಧ ಹೇಳಿಕೆಗಳನ್ನು ನೀಡುತ್ತಿರುವುದು ಉತ್ತಮ ಬೆಳವಣಿಗೆಯಲ್ಲ. ಎಳೆಯ ವಯಸ್ಸಿನ ಶಾಲಾ ಮಕ್ಕಳ ಮೇಲೆ ಇದು ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪಠ್ಯಪುಸ್ತಕದಲ್ಲಿ ಏನಾದರೂ ಲೋಪ ದೋಷಗಳು ಅಥವಾ ವ್ಯತ್ಯಾಸಗಳು ಕಂಡು ಬಂದರೆ ಆ ಬಗ್ಗೆ ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿಯವರು, ಶಿಕ್ಷಣ ತಜ್ಞರು ಹಾಗೂ ನಾಡಿನ ಸಾಹಿತಿಗಳು ಹಾಗೂ ಲೇಖಕರುಗಳು ಸರ್ಕಾರದೊಂದಿಗೆ ಕೈಜೋಡಿಸಿ ಒಂದೆಡೆ ಕುಳಿತು ಚರ್ಚಿಸಿ, ವಿಮರ್ಶೆ ನಡೆಸಿ ಪರಸ್ಪರ ಅಭಿಪ್ರಾಯಗಳನ್ನು ಹಂಚಿಕೊಂಡು ಸರಿಪಡಿಸಬಹುದಾಗಿದೆ. ಈ ವಿಷಯವಾಗಿ ಕೆಲವು ಶಿಕ್ಷಣ ತಜ್ಞರು, ಕವಿಗಳು, ಲೇಖಕರುಗಳು ಮತ್ತು ಕೆಲವು ಜನಪ್ರತಿನಿಧಿಗಳು ಮಾಧ್ಯಮಗಳಿಗೆ ದಿನಕ್ಕೊಂದು ವ್ಯತಿರಿಕ್ತ ಹೇಳಿಕೆಗಳನ್ನು ನೀಡುತ್ತಾ, ಜನಸಾಮಾನ್ಯರನ್ನು ಗೊಂದಲಕ್ಕೀಡು ಮಾಡುತ್ತಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಓದಿ : ಪೊಲೀಸ್ ಇಲ್ಲದಿದ್ದರೆ ನಾಗೇಶ್ ಮನೆ ಸುಟ್ಟು ಹೋಗುತ್ತಿತ್ತು: ಹಿರಿಯ ಸಾಹಿತಿ ಎಸ್ಎಲ್ ಭೈರಪ್ಪ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.