ETV Bharat / state

ಹುಲಿ ಉಗುರು ಮಾದರಿ ಪೆಂಡೆಂಟ್‌ ಪ್ರಕರಣ: ತಲೆತಗ್ಗಿಸುವ ಯಾವ ಕೆಲಸವನ್ನೂ ಮಾಡಿಲ್ಲ, ಮಾಡುವುದೂ ಇಲ್ಲ ಎಂದ ನಟ ಜಗ್ಗೇಶ್ - ವನ್ಯಜೀವಿ ರಕ್ಷಣಾ ಕಾಯ್ದೆ

Tiger claw pendants: ಹುಲಿ ಉಗುರಿನ ಮಾದರಿ ಪೆಂಡೆಂಟ್‌ ಧರಿಸಿರುವ ಆರೋಪದ ಮೇಲೆ ಬಿಗ್​ಬಾಸ್ ಮನೆಯಿಂದ ವರ್ತೂರು ಸಂತೋಷ್ ಬಂಧನದ ಬೆನ್ನಲ್ಲೇ ಸೆಲಿಬ್ರೆಟಿಗಳಿಗೆ ಸಂಕಷ್ಟ ಎದುರಾಗಿದೆ. ಈ ಪ್ರಕರಣ ಬಗ್ಗೆ ನಟ ಹಾಗೂ ಬಿಜೆಪಿ ರಾಜ್ಯಸಭಾ ಸದಸ್ಯ ಜಗ್ಗೇಶ್ ಸ್ಪಷ್ಟನೆ ನೀಡಿದ್ದಾರೆ.

Tiger claw pendants
ಹುಲಿ ಉಗುರಿನ ಮಾದರಿ ಪೆಂಡೆಂಟ್‌ ಧರಿಸಿರುವ ಆರೋಪದ ಬಗ್ಗೆ ನಟ ಜಗ್ಗೇಶ್
author img

By ETV Bharat Karnataka Team

Published : Oct 26, 2023, 11:21 AM IST

Updated : Oct 26, 2023, 11:27 AM IST

ಬೆಂಗಳೂರು: ಹುಲಿ ಉಗುರಿನ ಮಾದರಿ ಪೆಂಡೆಂಟ್‌ ಹೊಂದಿರುವ ಆರೋಪದ ಮೇಲೆ ನಟ ದರ್ಶನ್, ರಾಜ್ಯಸಭಾ ಸದಸ್ಯ ಹಾಗೂ ನಟ ಜಗ್ಗೇಶ್, ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ ಮತ್ತು ನಟ ನಿಖಿಲ್ ಕುಮಾರಸ್ವಾಮಿ ನಿವಾಸಗಳಲ್ಲಿ ಅರಣ್ಯ ಅಧಿಕಾರಿಗಳು ಬುಧವಾರ ಶೋಧ ಕಾರ್ಯಾಚರಣೆ ನಡೆಸಿದರು.

ಆ ಬಳಿಕ ಪ್ರಕರಣ ಕುರಿತು ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಸ್ಪಷ್ಟನೆ ನೀಡಿದ್ದಾರೆ. ತಾವು ಧರಿಸುವ ಲಾಕೆಟ್ ನಮ್ಮ ತಾಯಿ ಕೊಟ್ಟಿರುವ ಕಾಣಿಕೆಯಾಗಿದ್ದು, ಅದನ್ನು ಅಧಿಕಾರಿಗಳಿಗೆ ಒಪ್ಪಿಸಿರುವುದಾಗಿ ಬರೆದುಕೊಂಡಿದ್ದಾರೆ.

  • ಕಾನೂನು ದೊಡ್ಡದು🙏
    ಅಧಿಕಾರಿಗಳು ಕೇಳಿದವಸ್ತು ಒಪ್ಪಿಸಲಾಗಿದೆ!
    ಅಮ್ಮ ನೀಡಿದ ಬಹಳ ಹಳೆಯ ಲಾಕೆಟ್ ಎಂದು ತಿಳಿಸಿರುವೆ!
    ಎಷ್ಟೋ ದೋಚುವ ಮನುಷ್ಯರು,
    ಕೊಲೆ ಪಾತಕರು,
    ದೇಶದ್ರೋಹಿಗಳು,ಸಮಾಜ ಘಾತಕರಿಗಿಂತ ನನ್ನತಾಯಿ ಕಾಣಿಕೆ ಬಗ್ಗೆ ನೆನ್ನೆಯಿಂದ ತಲೆಕೆಡಿಸಿಕೊಂಡ ದೇವರುಗಳಿಗೆ ಧನ್ಯವಾದ🙏ತಲೆತಗ್ಗಿಸುವ ಯಾವ ಕೆಲಸ ಮಾಡಿಲ್ಲಾ ಮಾಡೋದಿಲ್ಲಾ!ಪಾಚ್ಕೊಳಿ. pic.twitter.com/mWu5aXpXmp

    — ನವರಸನಾಯಕ ಜಗ್ಗೇಶ್ (@Jaggesh2) October 25, 2023 " class="align-text-top noRightClick twitterSection" data=" ">

"ಕಾನೂನು ದೊಡ್ಡದು, ಅಧಿಕಾರಿಗಳು ಕೇಳಿದ ವಸ್ತುವನ್ನು ಒಪ್ಪಿಸಲಾಗಿದೆ. ಅಮ್ಮ ನೀಡಿದ ಬಹಳ ಹಳೆಯ ಲಾಕೆಟ್ ಎಂದು ತಿಳಿಸಿರುವೆ. ಎಷ್ಟೋ ದೋಚುವ ಮನುಷ್ಯರು, ಕೊಲೆ ಪಾತಕರು, ದೇಶದ್ರೋಹಿಗಳು, ಸಮಾಜ ಘಾತಕರಿಗಿಂತ ನನ್ನ ತಾಯಿ ಕಾಣಿಕೆ ಬಗ್ಗೆ ತಲೆಕೆಡಿಸಿಕೊಂಡ ದೇವರುಗಳಿಗೆ ಧನ್ಯವಾದಗಳು. ತಲೆತಗ್ಗಿಸುವ ಯಾವ ಕೆಲಸ ಮಾಡಿಲ್ಲ ಮಾಡೋದು ಇಲ್ಲ" ಎಂದು ಜಗ್ಗೇಶ್ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

"ಒಂದು ವಿಷಯ ಅದ್ಭುತವಾಗಿ ಅರಿತೆ ಪ್ರೀತಿಸುವವರು 1000 ಜನ ಇದ್ದರೆ, ವಿಷಯವಿಲ್ಲದೆ ದ್ವೇಷ ಮಾಡುವ 100 ಜನರೂ ಇದ್ದೆ ಇರುತ್ತಾರೆ. But remember one thing ಒಳ್ಳೆಯ ಗುಣ ನಡತೆ ಇದ್ದಾಗ ಕೊಲ್ಲೋಕೆ ಸಾವಿರ ಮಂದಿ ಬಂದರು ಕಾಯಲು ದೇವರು ಒಬ್ಬ ಬರುತ್ತಾನೆ. ಬದುಕಲ್ಲಿ ಸಾಧ್ಯವಾದರೆ ಒಬ್ಬರಿಗೆ ಒಳ್ಳೆಯದನ್ನು ಮಾಡಿ. ಅನ್ಯರಿಗೆ ಕೆಡುಕು ಬಯಸಿ ಬಾಳಿದರೆ ನಾಶವಾಗುತ್ತಾರೆ" ಎಂದು ಜಗ್ಗೇಶ್​ ಬರೆದುಕೊಂಡಿದ್ದಾರೆ.

  • ಒಂದು ವಿಷಯ ಅದ್ಭುತವಾಗಿ ಅರಿತೆ ಪ್ರೀತಿಸುವವರು 1000ಜನ ಇದ್ದರು ವಿಷಯವಿಲ್ಲದೆ ದ್ವೇಷ ಮಾಡುವ 100ಜನರು ಇದ್ದೆ ಇರುತ್ತಾರೆ!
    But remember one thing
    ಒಳ್ಳೆಗುಣನಡತೆ ಇದ್ದಾಗ ಕೊಲ್ಲೋಕೆ ಸಾವಿರಮಂದಿ ಬಂದರು ಕಾಯಲು ಒಬ್ಬ ಬರುತ್ತಾನೆ ಅವನೆ ದೇವರು🙏
    ಬದುಕಲ್ಲಿ ಸಾಧ್ಯವಾದರೆ ಒಬ್ಬರಿಗೆ ಒಳ್ಳೆದುಮಾಡಿ
    ಅನ್ಯರಿಗೆ ಕೆಡುಕುಬಯಸಿ ಬಾಳಿದರೆ ನಾಶ!

ಹುಲಿ ಉಗುರು ಮಾದರಿ ಪೆಂಡೆಂಟ್‌ ಧರಿಸಿದ ಪ್ರಕರಣದಲ್ಲಿ ಇತ್ತೀಚೆಗಷ್ಟೇ ಬಿಗ್​ಬಾಸ್ ಸ್ಫರ್ಧಿ ವರ್ತೂರು ಸಂತೋಷ್ ಬಂಧನವಾಗಿದೆ. ಈ ಬೆನ್ನಲ್ಲೇ ಹುಲಿ ಉಗುರು ಧರಿಸಿದ ಆರೋಪದಡಿ ನಟ ಜಗ್ಗೇಶ್, ನಟ ತೂಗುದೀಪ್ ದರ್ಶನ್, ವಿನಯ್ ಗುರೂಜಿ, ಬಿದನಗೆರೆಯ ಶನೇಶ್ವರ ದೇವಾಲಯದ ಅರ್ಚಕ ಧನಂಜಯ್ ಗುರೂಜಿ ಸೇರಿದಂತೆ ಹಲವರ ವಿರುದ್ಧ ಅರಣ್ಯಾಧಿಕಾರಿಗಳಿಗೆ ದೂರು ನೀಡಲಾಗಿದೆ. ಸೋಷಿಯಲ್ ಮೀಡಿಯಾಗಳಲ್ಲಿ ಸೆಲೆಬ್ರಿಟಿಗಳ ಫೋಟೋ ವೈರಲ್ ಆಗುತ್ತಿದ್ದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆಗೆ ಇಳಿದಿದ್ದಾರೆ.

ಇದನ್ನೂ ಓದಿ: ಹುಲಿ ಉಗುರಿನ ಪೆಂಡೆಂಟ್ ಧರಿಸಿದ ಆರೋಪ : ನಟ ದರ್ಶನ್, ಜಗ್ಗೇಶ್ ಸೇರಿ ಹಲವರ ವಿರುದ್ಧ ದೂರು..

ಹುಲಿ ಉಗುರು ಪೆಂಡೆಂಟ್ ಹೊಂದಿರುವ ಆರೋಪ: ದರ್ಶನ್, ರಾಕ್​ಲೈನ್ ವೆಂಕಟೇಶ್‌ ಮನೆಯಲ್ಲಿ ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

ಹುಲಿಯ ಉಗುರು ರೀತಿಯ ಪೆಂಡೆಂಟ್ ಧರಿಸಿರುವ ಆರೋಪದ ಮೇಲೆ ನಟ ದರ್ಶನ್, ಜಗ್ಗೇಶ್ ಹಾಗೂ ವಿನಯ್ ಗುರೂಜಿ ಅವರ ವಿರುದ್ಧ ಅರಣ್ಯಾಧಿಕಾರಿಗಳಿಗೆ ಸರ್ವ ಸಂಘಟನೆಗಳ ಒಕ್ಕೂಟ ಅಧ್ಯಕ್ಷ ಶಿವಕುಮಾರ್ ದೂರು ನೀಡಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು

ಹುಲಿ ಉಗುರು ಡಾಲರ್ ಧರಿಸಿದ ಆರೋಪ‌ ಕೇಳಿ ಬರುತ್ತಿದ್ದಂತೆ ನಿಖಿಲ್ ಕುಮಾರಸ್ವಾಮಿ ಅವರು ಕೂಡ ಸ್ಪಷ್ಟನೆ ನೀಡಿದ್ದಾರೆ. ''ನಾನು ಧರಿಸಿದ ಪೆಂಡೆಂಟ್ ಕೃತಕವಾದದ್ದೇ ಹೊರತು ನೈಜವಾದುದ್ದಲ್ಲ. ನನ್ನ ಮದುವೆಯಲ್ಲಿ ಅದು ಉಡುಗೊರೆ ಬಂದಿದೆ'' ಎಂದು ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದರು

Last Updated : Oct 26, 2023, 11:27 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.