ಬೆಂಗಳೂರು: ನಾಳೆ ದಿಢೀರ್ ಬಿಜೆಪಿ ಸಂಸದರ ಸಭೆ ಕರೆದಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಡೆ ತೀವ್ರ ಕುತೂಹಲ ಮೂಡಿಸಿದೆ.
ಗೃಹ ಕಚೇರಿ ಕೃಷ್ಣಾದಲ್ಲಿ ನಾಳೆ ಸಂಜೆ 4 ಗಂಟೆಗೆ ಬಿಜೆಪಿ ಸಂಸದರ ಸಭೆ ಕರೆಯಲಾಗಿದ್ದು, ನಾಯಕತ್ವ ಬದಲಾವಣೆ ಹಿನ್ನೆಲೆ ಸಂಸದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಮೂಲಕ ಶಕ್ತಿ ಪ್ರದರ್ಶನಕ್ಕೆ ಸಿಎಂ ಮುಂದಾದರಾ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ನಾಳಿನ ಸಭೆ ಸಾಕಷ್ಟು ಕುತೂಹಲ ಮೂಡಿಸಿದೆ.
ಎಸ್ಸಿ-ಎಸ್ಟಿ ಮೀಸಲಾತಿ ಕುರಿತು ಪರಾಮರ್ಶೆಗೆ ಸಚಿವ ಸಂಪುಟ ಉಪ ಸಮಿತಿ ರಚನೆ: ಶ್ರೀರಾಮುಲು ಅಧ್ಯಕ್ಷ
ನಾಳೆ ಸಿಎಂ ಸಭೆ: ವಿಧಾನಸೌಧದಲ್ಲಿ ಇಂದು ಈ ಕುರಿತು ಮಾಧ್ಯಮದವರ ಜೊತೆ ಮಾತನಾಡಿದ ಬಿಜೆಪಿ ಸಂಸದ ಡಾ. ಉಮೇಶ್ ಜಾಧವ್, ನಾಳೆ ಮುಖ್ಯಮಂತ್ರಿಗಳು ಸಂಸದರ ಸಭೆ ಕರೆದಿದ್ದಾರೆ. ಸಿಎಂ ಕಚೇರಿಯಿಂದ ಸಭೆಗೆ ಆಹ್ವಾನಿಸಿದ್ದಾರೆ ಎಂದು ಹೇಳಿದರು. ನಾಳೆ ಸಂಜೆ 4ಕ್ಕೆ ಕೃಷ್ಣಾದಲ್ಲಿ ನಡೆಯಲಿರುವ ಸಭೆಯಲ್ಲಿ ಕೆಲವು ವಿಚಾರಗಳ ಬಗ್ಗೆ ಅನೌಪಚಾರಿಕ ಚರ್ಚೆ ನಡೆಯಲಿದೆ ಎಂದರು.