ETV Bharat / state

ಮೋದಿ ಕಡೆ ಬೆರಳು ಮಾಡದೆ ಅಕ್ಕಿ ಕೊಡಿ, ಇಲ್ಲವೇ ಅಕ್ಕಿ ಮೌಲ್ಯದ ಹಣ ನೀಡಿ: ಸಿ ಟಿ ರವಿ ಒತ್ತಾಯ - etv bharat kannada

ಅಕ್ಕಿ ಕೊಡುವ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಎಳೆದು ತರದೇ, ಆಹಾರದ ಅಗತ್ಯವನ್ನು ಪೂರೈಸಲು ಸೂಕ್ತ ಹಾಗು ಅಗತ್ಯವಿರುವ ಆಹಾರವನ್ನು ಅಥವಾ ಅದರ ಮೌಲ್ಯದಷ್ಟು ಹಣವನ್ನು ನೀಡಲು ವ್ಯವಸ್ಥೆ ಮಾಡಬೇಕು ಎಂದು ಸಿ ಟಿ ರವಿ ಆಗ್ರಹಿಸಿದ್ದಾರೆ.

ravi
ಸಿ.ಟಿ ರವಿ
author img

By

Published : Jun 20, 2023, 12:08 PM IST

ಬೆಂಗಳೂರು: ಅಕ್ಕಿ ಕೊಡುವ ವಿಚಾರದಲ್ಲಿ ಕಾಂಗ್ರೆಸ್ ಪಾರ್ಟಿಯು ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಬಿಜೆಪಿಯನ್ನು, ಪ್ರಧಾನಿ ನರೇಂದ್ರ ಮೋದಿಯವರನ್ನು ಎಳೆದು ತರುವ ಹರಸಾಹಸ ಮಾಡುತ್ತಿದೆ. ಅಕ್ಕಿ ವಿತರಣೆಯ ಹೆಸರಲ್ಲಿ ರಾಜಕಾರಣ ಮಾಡದೆ ಮತ್ತು ಕೇಂದ್ರದ ಮೇಲೆ ಗೂಬೆ ಕೂರಿಸುವ ಸಣ್ಣತನ ತೋರದೆ ಬಡವರ ಆಹಾರದ ಅಗತ್ಯವನ್ನು ಪೂರೈಸಲು ಸೂಕ್ತ ಹಾಗು ಅಗತ್ಯವಿರುವ ಆಹಾರವನ್ನು ಅಥವಾ ಅದರ ಮೌಲ್ಯದಷ್ಟು ಹಣವನ್ನು ನೀಡಲು ವ್ಯವಸ್ಥೆ ಮಾಡಬೇಕು ಎಂದು ಪತ್ರಿಕಾ ಹೇಳಿಕೆ ಮೂಲಕ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಆಗ್ರಹಿಸಿದ್ದಾರೆ.

ಒಂದು ರಾಜ್ಯದ ಮುಖ್ಯಮಂತ್ರಿ ಎರಡು ಲಕ್ಷ ಟನ್ ಅಕ್ಕಿ ಬೇಡಿಕೆಗೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿಗಳಿಗಾಗಲಿ, ಕೇಂದ್ರ ಆಹಾರ ನಾಗರಿಕ ಸರಬರಾಜು ಸಚಿವರಾಗಲಿ ಬೇಡಿಕೆ ಇಡಲೇ ಇಲ್ಲ. ಅವರೊಂದಿಗೆ ಮಾತನಾಡುವ ಸೌಜನ್ಯವನ್ನೂ ತೋರಿಸಲಿಲ್ಲ. ರಾಜ್ಯ ಸರ್ಕಾರ 2 ಲಕ್ಷ ಟನ್ ಅಕ್ಕಿಗಾಗಿ ಎಫ್‍ಸಿಐ ವಿಭಾಗೀಯ ವ್ಯವಸ್ಥಾಪಕರಿಗೆ ಜೂನ್​ 6 ರಂದು ಪತ್ರ ಮುಖೇನ ವಿನಂತಿ ಮಾಡಿದ್ದರು. ಜೂನ್​ 12ರಂದು ವಿಭಾಗೀಯ ವ್ಯವಸ್ಥಾಪಕ ಇದಕ್ಕೆ ಅನುಮತಿ ನೀಡುತ್ತಾರೆ. ಆದರೆ ಈ ಅನುಮತಿ ನೀಡುವ ಮುನ್ನ ಅವರು ಕೇಂದ್ರ ಕಚೇರಿಯನ್ನು ಸಂಪರ್ಕಿಸದೇ ಪ್ರಾಯಶ: ಏಕಮುಖವಾಗಿ ತೀರ್ಮಾನ ಕೈಗೊಂಡ ಹಾಗೆ ಭಾಸವಾಗುತ್ತಿದೆ ಎಂದು ಹೇಳಿದ್ದಾರೆ.

ಜೂನ್​ 13 ರಂದು ಆಹಾರ ಮತ್ತು ನಾಗರಿಕ ಸರಬರಾಜು ಕಚೇರಿಯಿಂದ ಎಫ್‍ಸಿಐ ಕೇಂದ್ರ ಕಚೇರಿಗೆ ಒಎಂಎಸ್‍ಎಸ್ ಕೋಟಾದಡಿ ಅಕ್ಕಿ ಮಾರಾಟವನ್ನು ನಿರ್ಬಂಧಿಸಿರುವ ಬಗ್ಗೆ ಆದೇಶ ಬರುತ್ತದೆ. ಇದು ಜೂನ್​ 8ರಂದು ನಡೆದ ಸಭೆಯಲ್ಲಿ ತೀರ್ಮಾನವಾಗಿತ್ತು. ಈ ಪತ್ರವು ಕರ್ನಾಟಕ ಸರ್ಕಾರಕ್ಕೆ ಬರೆದ ಪತ್ರವಲ್ಲ, ಬದಲಿಗೆ ಎಫ್‍ಸಿಐ ಮುಖ್ಯಸ್ಥರಿಗೆ ಬರೆದಿರುವ ಪತ್ರವಿದು ಎಂದಿದ್ದಾರೆ. ಈ ನಿರ್ಧಾರ ರಾಜ್ಯ ಸರ್ಕಾರ ಎಫ್‍ಸಿಐಗೆ ಪತ್ರ ಬರೆಯುವ ಒಂದು ದಿನ ಮುಂಚಿತವಾಗಿ ತೆಗೆದುಕೊಂಡ ತೀರ್ಮಾನ ಎಂದು ಅವರು ನೆನಪಿಸಿದ್ದಾರೆ.

ಕೇಂದ್ರ ಸರ್ಕಾರ ಮುಂಗಾರು ಮಳೆ, ಬೆಳೆಯನ್ನು ಆಧರಿಸಿ ಕೇಂದ್ರದಲ್ಲಿರುವ ದಾಸ್ತಾನನ್ನು ಪರಿಗಣಿಸಿ ಫುಡ್ ಸೆಕ್ಯೂರಿಟಿ ಆಕ್ಟ್ ಪ್ರಕಾರ ಉಚಿತವಾಗಿ ಅಕ್ಕಿ ಕೊಡಬೇಕಾಗಿರುವ ಸರಬರಾಜಿಗೆ ಯಾವುದೇ ಭಂಗವಾಗದಂತೆ ಕಾಲಕಾಲಕ್ಕೆ ಇಂತಹ ನಿರ್ಣಯ ತೆಗೆದುಕೊಳ್ಳುವುದು ಸರ್ವೇಸಾಮಾನ್ಯ. ಈಗಾಗಲೇ ಪ್ರತಿ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೂ ಐದು ಕೆಜಿ ಉಚಿತ ಅಕ್ಕಿಯನ್ನು ನಿರಂತರವಾಗಿ ಕೇಂದ್ರ ಸರ್ಕಾರ ನೀಡುತ್ತಿದೆ (ಕೋವಿಡ್ ಸಂಕಷ್ಟದ 84 ಕೋಟಿ ಜನರಿಗೆ ಕಾಲದಲ್ಲಿ ಪ್ರತಿ ವ್ಯಕ್ತಿಗೆ ಹತ್ತು ಕೆಜಿ ಅಕ್ಕಿ ಯಂತೆ ನೀಡಿದೆ). ಪ್ರತಿ ಕುಟುಂಬದ ಅಕ್ಕಿಯ ಅವಶ್ಯಕತೆಯನ್ನು ಕೇಂದ್ರ ಸರ್ಕಾರವೇ ಪೂರೈಸುತ್ತಿದೆ. ಹಾಗಾಗಿ ರಾಜ್ಯ ಸರ್ಕಾರ ಬಡ ಕುಟುಂಬಗಳಿಗೆ ಕೇಂದ್ರ ಸರ್ಕಾರದ ಅಕ್ಕಿಯ ಜೊತೆಗೆ ರಾಗಿ, ಗೋಧಿ, ಬೆಳೆ ಮತ್ತು ರವೆಯನ್ನು ನೀಡಬಹುದಾಗಿದೆ. ತಾನು ವಾಗ್ದಾನ ಮಾಡಿರುವಂತೆ 10 ಕೆಜಿ ಅಕ್ಕಿಯ ಬದಲಾಗಿ ಅದಕ್ಕೆ ಸಮ ಮೊತ್ತದ ಹಣವನ್ನು ನೀಡಬಹುದಾಗಿದೆ ಎಂದು ಒತ್ತಾಯಿಸಿದ್ದಾರೆ.

ಈಗ ರಾಜ್ಯ ಸರ್ಕಾರಕ್ಕೆ ಬಡವರಿಗೆ ಸಹಾಯ ಮಾಡುವುದು ಮುಖ್ಯವಾಗಬೇಕೇ ಹೊರತು ರಾಜಕಾರಣವಲ್ಲ. ಇದು ಸಿದ್ದರಾಮಯ್ಯನವರಂತಹ ಅನುಭವಿ ರಾಜಕಾರಣಿಗೆ ತಿಳಿಯದ ಸಂಗತಿ ಅಲ್ಲ. ಅನಗತ್ಯವಾಗಿ ಕಾಂಗ್ರೆಸ್ ಪಾರ್ಟಿ ಮೋದಿಯವರು ಬಡವರ ಅನ್ನ ಕಸಿದುಕೊಳ್ಳುತ್ತಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನಿರಂತರವಾಗಿ ಮೋದಿ ಸರ್ಕಾರ ದೇಶದ ಯಾವೊಬ್ಬ ನಾಗರಿಕನೂ ಹಸಿವಿನಿಂದ ಇರಬಾರದು ಎಂದೇ ಪ್ರತಿ ಬಿಪಿಎಲ್ ಕುಟುಂಬದ ಪ್ರತಿ ವ್ಯಕ್ತಿಗೆ 5ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿರುವುದನ್ನು ಮರೆಮಾಚಿ ಟೀಕಿಸುತ್ತಿರುವುದು ಅತ್ಯಂತ ಖಂಡನೀಯ ಹಾಗು ಕೀಳು ಮಟ್ಟದ ರಾಜಕೀಯವಾಗಿದೆ ಎಂದು ಸಿ ಟಿ ರವಿ ಆಕ್ಷೇಪಿಸಿದ್ದಾರೆ.

ದೇಶದ ಯಾವುದೇ ಕುಟುಂಬವು ಅಕ್ಕಿ ಅಥವಾ ಗೋಧಿ ಇಲ್ಲ ಎಂದು ಹಸಿವಿನಿಂದ ಒಂದು ದಿನವೂ ಕಳೆದಿಲ್ಲ. ಹಾಗೆ ಅವರು ಕಳೆಯಬಾರದು ಎಂದೇ ಕೇಂದ್ರವು ಅವರಿಗೆ ಉಚಿತ ರೇಷನ್ ನೀಡುತ್ತಿರುವುದು. ಇವರ ರಾಜಕಾರಣಕ್ಕೆ ಮೋದಿಯವರ ವಿರುದ್ದ ಉತ್ಪ್ರೇಕ್ಷಿತ ಸುಳ್ಳಿನ ಕಂತೆಯ ಮೂಲಕ ನಡೆಯುತ್ತಿರುವ ದುರುದ್ದೇಶದ ಆರೋಪವನ್ನು ತೀವ್ರವಾಗಿ ಖಂಡಿಸುತ್ತೇನೆ. ಅತಿ ಮುಖ್ಯ ವಿಚಾರವೆಂದರೆ ಸನ್ಮಾನ್ಯ ಸಿದ್ದರಾಮಯ್ಯನವರೇ, ನೀವು ಕೊಡಲು ನೀಡಿರುವ 10 ಕೆಜಿ ಅಕ್ಕಿ ವಾಗ್ದಾನದಲ್ಲಿ ಕೇಂದ್ರ ಸರ್ಕಾರ ನೀಡುತ್ತಿರುವ ಐದು ಕೆಜಿ ಅಕ್ಕಿಯನ್ನು ಲೆಕ್ಕಕ್ಕೆ ಸೇರಿಸುವುದಿಲ್ಲ ಎಂದು ಭಾವಿಸುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: CM Siddaramaiah budget: ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಸಿದ್ಧತೆ.. ಆದಾಯ ಸಂಗ್ರಹಕ್ಕೆ ಆದ್ಯತೆ, ಹೀಗಿದೆ ಈವರೆಗಿನ ತೆರಿಗೆ ಸಂಗ್ರಹ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.