ETV Bharat / state

ಅಮಿತ್ ಶಾ ಬೆನ್ನಲ್ಲೇ ಜೆಪಿ ನಡ್ಡಾ ರಾಜ್ಯ ಪ್ರವಾಸ: ಬಿಜೆಪಿಯಲ್ಲಿ ಗರಿಗೆದರಿದ ಚುನಾವಣಾ ಚಟುವಟಿಕೆ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಕರ್ನಾಟಕ ರಾಜ್ಯ ಪ್ರವಾಸ - ಜ.5 ಮತ್ತು 6 ಭೇಟಿ - ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ರಾಜ್ಯ ಪ್ರವಾಸ

bjp-national-president-jp-nadda-karnataka-tour
ಅಮಿತ್ ಶಾ ಬೆನ್ನಲ್ಲೇ ಜೆಪಿ ನಡ್ಡಾ ರಾಜ್ಯ ಪ್ರವಾಸ: ಬಿಜೆಪಿಯಲ್ಲಿ ಗರಿಗೆದರಿದ ಚುನಾವಣಾ ಚಟುವಟಿಕೆ..!
author img

By

Published : Jan 3, 2023, 10:35 PM IST

Updated : Jan 3, 2023, 11:08 PM IST

ಬೆಂಗಳೂರು : ಮುಂಬರುವ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ ಈಗಿನಿಂದಲೇ ತಾಲೀಮು ಆರಂಭಿಸಿದೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರ ಎರಡು ದಿನಗಳ ರಾಜ್ಯ ಪ್ರವಾಸ ಮುಗಿಯುತ್ತಿದ್ದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಜ 5 ಮತ್ತು 6ರಂದು ಕರ್ನಾಟಕ ರಾಜ್ಯ ಪ್ರವಾಸ ಮಾಡಲಿದ್ದಾರೆ. ಹಳೆ ಮೈಸೂರು ಭಾಗಕ್ಕೆ ಅಮಿತ್ ಶಾ ಭೇಟಿ ನೀಡಿದ್ದರೆ ಮಧ್ಯ ಕರ್ನಾಟಕ ಭಾಗಕ್ಕೆ ನಡ್ಡಾ ಆದ್ಯತೆ ನೀಡುತ್ತಿದ್ದಾರೆ.

ಜ.5ರಂದು ಮಧ್ಯಾಹ್ನ ಅವರು ತುಮಕೂರಿನಲ್ಲಿ, ತುಮಕೂರು ಮತ್ತು ಮಧುಗಿರಿಯ ಶಕ್ತಿ ಕೇಂದ್ರಗಳ ಪ್ರಮುಖರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಸಿದ್ಧಗಂಗಾ ಮಠಕ್ಕೆ ಭೇಟಿ ಕೊಡಲಿದ್ದಾರೆ. ಸಂಜೆ ಚಿತ್ರದುರ್ಗದಲ್ಲಿ ವೀರ ಮದಕರಿ ನಾಯಕ, ಒನಕೆ ಓಬವ್ವ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಬಳಿಕ ಎಸ್‍ಸಿ, ಎಸ್‍ಟಿ, ಒಬಿಸಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಾದಾರ ಚೆನ್ನಯ್ಯ ಮಠ, ಸಿರಿಗೆರೆ ಶ್ರೀ ತರಳಬಾಳು ಮಠಕ್ಕೆ ಭೇಟಿ ನೀಡಿದ ನಂತರ ದಾವಣಗೆರೆ ವಿಭಾಗದ ಸಂಸದರು, ಶಾಸಕರು, ಎಂಎಲ್‍ಸಿಗಳು ಮತ್ತು ಜಿಲ್ಲಾ ಅಧ್ಯಕ್ಷರ ಸಭೆಯಲ್ಲಿ ನಡ್ಡಾ ಭಾಗವಹಿಸಲಿದ್ದಾರೆ.

ಜ.6ರಂದು ಬೆಳಗ್ಗೆ ಹರಿಹರದ ಪಂಚಮಸಾಲಿ ಮಠ, ಬೆಳ್ಳುಡಿಯ ಶ್ರೀ ಕನಕಗುರುಪೀಠ, ರಾಜನಹಳ್ಳಿಯ ವಾಲ್ಮೀಕಿ ಗುರು ಪೀಠಕ್ಕೆ ಭೇಟಿ ನೀಡಲಿದ್ದಾರೆ. ಬಳಿಕ ದಾವಣಗೆರೆ ದಕ್ಷಿಣದ ಬೂತ್ ವಿಜಯ ಅಭಿಯಾನ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಪಾಲ್ಗೊಳ್ಳಲಿದ್ದಾರೆ. ಅಂದು ಸಂಜೆ ಸಿರಾದಲ್ಲಿ ನಡೆಯುವ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಅರುಣ್ ಸಿಂಗ್ ರಾಜ್ಯ ಪ್ರವಾಸ : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಜನವರಿ ಬುಧವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. ಸಂಜೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ಬಳಿಕ ರಾಜ್ಯ ಬಿಜೆಪಿ ಕಚೇರಿಗೆ ಭೇಟಿ ಕೊಡಲಿದ್ದಾರೆ. ನಂತರ ಪೂರ್ವನಿಗದಿತ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಕುಮಾರಕೃಪ ಗೆಸ್ಟ್ ಹೌಸ್​ಗೆ ತೆರಳುತ್ತಾರೆ ಎಂದು ತಿಳಿದುಬಂದಿದೆ.

ಜ. 5ರಂದು ತುಮಕೂರಿನಲ್ಲಿ ತುಮಕೂರು ಮತ್ತು ಮಧುಗಿರಿಯ ಶಕ್ತಿ ಕೇಂದ್ರಗಳ ಪ್ರಮುಖರ ಸಭೆಯಲ್ಲಿ ಭಾಗವಹಿಸುವರು. ಸಂಜೆ ಚಿತ್ರದುರ್ಗದಲ್ಲಿ ಎಸ್‍ಸಿ, ಎಸ್‍ಟಿ, ಒಬಿಸಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.

ಜ. 6ರಂದು ಅವರು ದಾವಣಗೆರೆ ದಕ್ಷಿಣದ ಬೂತ್ ವಿಜಯ ಅಭಿಯಾನ ಕಾರ್ಯಕ್ರಮದಲ್ಲಿ ಜೆ ಪಿ ನಡ್ಡಾ ಪಾಲ್ಗೊಳ್ಳಲಿದ್ದಾರೆ. ಸಂಜೆ ಅವರು ತುಮಕೂರು ಜಿಲ್ಲೆಯ ಸಿರಾದಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿಲಿದ್ದು, ಬಳಿಕ ಬೆಂಗಳೂರಿನಿಂದ ವಿಮಾನದಲ್ಲಿ ದೆಹಲಿಗೆ ವಾಪಸ್​ ತೆರಳಿದ್ದಾರೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕಳೆದ ವಾರ ಸಕ್ಕರೆ ನಾಡು ಮಂಡ್ಯ ಜಿಲ್ಲೆಗೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು, ಮಂಡ್ಯದಲ್ಲಿ ಮೆಗಾ ಡೈರಿ ಉದ್ಘಾಟಿಸಿದ್ದರು. ಗುಜರಾತ್​ನ ಅಮುಲ್​ ಮತ್ತು ಕರ್ನಾಟಕ ಕೆಎಂಎಫ್​ ಸಹಕಾರದಿಂದ ಒಟ್ಟಾಗಿ ಕೆಲಸ ಮಾಡಿದಲ್ಲಿ ಹೈನೋದ್ಯಮದಲ್ಲಿ ರಾಜ್ಯ ಮತ್ತಷ್ಟು ಪ್ರಗತಿ ಸಾಧಿಸಲಿದೆ ಎಂದಿದ್ದರು. ಈ ಕಾರ್ಯಕ್ರಮದ ಬಳಿಕ ಒಕ್ಕಲಿಗರ ಪ್ರಸಿದ್ಧ ಮಠ ಆದಿಚುಂಚನಗಿರಿ ಮಠದ ಪೀಠಾಧಿಪತಿ ಡಾ. ನಿರ್ಮಲಾನಂದ ಶ್ರೀಗಳನ್ನು ಭೇಟಿ ಮಾಡಿದ್ದರು.

ರಾಜಕೀಯ ಲೆಕ್ಕಾಚಾರ.. ಹಳೆ ಮೈಸೂರು ಭಾಗದಲ್ಲಿ ಈ ಬಾರಿ ಬಿಜೆಪಿ ಶಕ್ತಿಯನ್ನು ಹೆಚ್ಚಿಸಲು ಪಕ್ಷದ ಹೈಕಮಾಂಡ್​ ಇಟ್ಟಿರುವ ಮೊದಲ ಹೆಜ್ಜೆ ಇದಾಗಿದೆ ಎಂಬ ರಾಜಕೀಯ ಲೆಕ್ಕಾಚಾರಗಳು ಶುರುವಾಗಿವೆ. ಹೀಗಾಗಿ ಪ್ರತಿಪಕ್ಷಗಳ ನಾಯಕರು ಅಮಿತ್​ ಶಾ ಅವರು ಅಮುಲ್​ ಮತ್ತು ಕೆಎಂಎಫ್​ ಡೈರಿಗಳನ್ನು ಒಂದುಗೂಡಿಸಲಿದ್ದಾರೆ. ರಾಜ್ಯದ ಕೆಎಂಎಫ್​ ಹೆಸರು ಇನ್ಮುಂದೆ ಮರೆಯಾಗಲಿದೆ ಎಂದು ಟೀಕಿಸಿದ್ದರು. ಆದ್ರೆ ಈ ಟೀಕೆಗೆ ಸಿಎಂ ಬೊಮ್ಮಾಯಿ, ಸಹಕಾರ ಸಚಿವ ಎಸ್​ ಟಿ ಸೋಮಶೇಖರ್​ ತಿರುಗೇಟು ನೀಡಿ, ಅಮಿತ್​ ಶಾ ಹೇಳಿದ್ದೇ ಬೇರೆ. ಪ್ರತಿಪಕ್ಷಗಳ ನಾಯಕರು ಕೇವಲ ರಾಜಕೀಯ ಗಿಮಿಕ್​ಗಾಗಿ ಆರೋಪ ಮಾಡುತ್ತಿದ್ದಾರೆ ಎಂದಿದ್ದರು.

ಇದನ್ನೂ ಓದಿ : ಕಾಂಗ್ರೆಸ್ ಬಸ್ ಯಾತ್ರೆ ಸಮನ್ವಯಕ್ಕೆ ಸಮಿತಿ ರಚಿಸಿದ ಡಿಕೆಶಿ

Last Updated : Jan 3, 2023, 11:08 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.