ETV Bharat / state

ಬಿಜೆಪಿಯವರಿಗೆ ರಾಜಕೀಯ ಲಾಭ ಪಡೆಯುವುದೇ ಉದ್ದೇಶ: ಸಚಿವ ದಿನೇಶ್ ಗುಂಡೂರಾವ್ - ಅಂಗಾಂಗ ದಾನದ ಬಗ್ಗೆ ಜಾಗೃತಿ

ಬಿಜೆಪಿ ಸತ್ಯ ಶೋಧನಾ ಸಮಿತಿ ಶಿವಮೊಗ್ಗದ ರಾಗಿಗುಡ್ಡಕ್ಕೆ ಭೇಟಿ ನೀಡಿರುವುದನ್ನು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ಟೀಕಿಸಿದ್ದಾರೆ.

ಸಚಿವ ದಿನೇಶ್ ಗುಂಡೂರಾವ್ ಕಿಡಿ
ಸಚಿವ ದಿನೇಶ್ ಗುಂಡೂರಾವ್ ಕಿಡಿ
author img

By ETV Bharat Karnataka Team

Published : Oct 5, 2023, 4:38 PM IST

ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್ ಹೇಳಿಕೆ

ಬೆಂಗಳೂರು : ಶಿವಮೊಗ್ಗಕ್ಕೆ ಬಿಜೆಪಿ ಸತ್ಯ ಶೋಧನಾ ಸಮಿತಿ ಭೇಟಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, "ಬಿಜೆಪಿಯವರಿಗೆ ರಾಜಕೀಯ ಲಾಭ ಪಡೆದುಕೊಳ್ಳುವುದೇ ಉದ್ದೇಶ ಎಂದರು. ವಿಕಾಸಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅವರಿಗೆ ಗಲಾಟೆಗಳು ಆಗಬೇಕು, ಹಿಂಸಾತ್ಮಕ ಘಟನೆಗಳು ನಡೆಯಬೇಕು. ಇದರಿಂದ ಲಾಭ ಪಡೆಯಲು ಅವರು ಹೊರಟಿದ್ದಾರೆ. ಈಗಾಗಲೇ ನಮ್ಮ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ" ಎಂದರು.

"ಬಿಜೆಪಿಯವರಿಗೆ ಶಾಂತಿ ನೆಲೆಸುವುದು ಬೇಕಿಲ್ಲ. ಇಂತಹ ಘಟನೆಗಳಿಗಾಗಿಯೇ ಕಾಯುತ್ತಿರುತ್ತಾರೆ. ಬೆಂಕಿ ಹಚ್ಚಲು ಹೋಗುತ್ತಾರೆ" ಎಂದು ವಾಗ್ದಾಳಿ ನಡೆಸಿದರು. ಶಾಮನೂರು ಶಿವಶಂಕರಪ್ಪ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, "ಶಾಮನೂರು ಶಿವಶಂಕರಪ್ಪ ಹಿರಿಯ ನಾಯಕರು. ಅವರಿಗೆ ಮಾಹಿತಿ ಕೊರತೆ ಇರಬಹುದು. ನಮ್ಮ ಸರ್ಕಾರ ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುತ್ತಿದೆ. ಯಾವುದೇ ಒಂದು ಜಾತಿಗೆ ಸೀಮಿತವಾಗದೆ ಒಟ್ಟಿಗೆ ಹೋಗುತ್ತಿದ್ದೇವೆ" ಎಂದು ಹೇಳಿದರು.

"ಪಕ್ಷ ಹಾಗೂ ಸರ್ಕಾರದ ಹಂತದಲ್ಲಿ ಎಲ್ಲಾ ಸಮುದಾಯವರಿಗೂ ಆದ್ಯತೆ ನೀಡಲಾಗಿದೆ. ಆದರೆ ಅವರು ಯಾವ ದೃಷ್ಟಿಯಿಂದ ಹೇಳಿದ್ದಾರೋ ಗೊತ್ತಿಲ್ಲ. ಬಸವರಾಜ್ ರಾಯರೆಡ್ಡಿಯವರೇ ಪೂರ್ಣ ದಾಖಲೆ ಬಿಡುಗಡೆ ಮಾಡಿದ್ದಾರೆ" ಎಂದು ತಿಳಿಸಿದರು.

ಅಂಗಾಂಗ ದಾನದ ಬಗ್ಗೆ ಜಾಗೃತಿ: "ಅಂಗಾಂಗದ ಬೇಡಿಕೆ ಹೆಚ್ಚಿದೆ. ಆದರೆ, ಜನರು ಹಿಂದೇಟು ಹಾಕುತ್ತಾರೆ. ಹಾಗಾಗಿ, ಜಾಗೃತಿ ಆಗಬೇಕಿದೆ. ನಾನೂ ಸಹ ಅಂಗಾಂಗ ದಾನ ಮಾಡಲು ನಿರ್ಧರಿಸಿದ್ಧೇನೆ. ಅಧಿಕಾರಿಗಳಿಗೂ ಈ ಬಗ್ಗೆ ತಿಳಿಸಿದ್ದೇನೆ" ಎಂದು ಹೇಳಿದರು.

ರಾಗಿಗುಡ್ಡಕ್ಕೆ ಬಿಜೆಪಿ ಸತ್ಯ ಶೋಧನಾ ಸಮಿತಿ ಭೇಟಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ ಕುಮಾರ್ ಕಟೀಲ್​ ಅವರ ನೇತೃತ್ವದ ಸತ್ಯ ಶೋಧನಾ ಸಮಿತಿ ಇಂದು ಮೆಗ್ಗಾನ್ ಆಸ್ಪತ್ರೆಗೆ ಭೇಟಿ, ರಾಗಿಗುಡ್ಡ ಕಲ್ಲು ತೂರಾಟ ಪ್ರಕರಣದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಣೆ ನಡೆಸಿತು. ಬಳಿಕ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಕಟೀಲ್​, "ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಹಿಂದೂಗಳ ಮನೆ ಮೇಲೆ ದಾಳಿ ನಡೆದಿದೆ. ಇದು ಪೂರ್ವನಿಯೋಜಿತ ಕೃತ್ಯ. ಎರಡು ಗಂಟೆಗಳ ಕಾಲ ಕಲ್ಲು ತೂರಾಟ ನಡೆದಿತ್ತು" ಎಂದು ತಿಳಿಸಿದರು.

"ನಾನು ಇಂದು ಪ್ರತ್ಯಕ್ಷದರ್ಶಿಗಳು ಹಾಗೂ ಗಾಯಾಳುಗಳನ್ನು ಭೇಟಿ ಮಾಡಿದ್ದೇನೆ. ರಾಗಿಗುಡ್ಡದ ಜನರು ಸಂಪೂರ್ಣ ಮಾಹಿತಿ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಈ ರೀತಿಯ ಅನೇಕ ಘಟನೆಗಳು ನಡೆದಿವೆ. ಇವೆಲ್ಲವನ್ನೂ ತನಿಖೆಗೆ ಒಳಪಡಿಸಬೇಕು. ರಾಗಿಗುಡ್ಡ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಬೇಕು" ಎಂದು ಒತ್ತಾಯಿಸಿದರು.

"ಇದೇ ರಾಗಿಗುಡ್ಡದಲ್ಲಿ ಈ ಹಿಂದೆ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆಗಳು ನಡೆದಿವೆ. ಅವೆಲ್ಲವೂ ಶಾಂತಿಯುತವಾಗಿತ್ತು. ಆದರೆ ಈದ್ ಮಿಲಾದ್ ಮೆರವಣಿಗೆಯಲ್ಲಿ ಘಟನೆ ನಡೆದಿದೆ. ಸರ್ಕಾರ ಹಾಗೂ ಪೊಲೀಸರ ವೈಫಲ್ಯದಿಂದಾಗಿಯೇ ಕೃತ್ಯ ಸಂಭವಿಸಿದೆ. ಮೆರವಣಿಗೆಗೆ ಪೊಲೀಸರ ಅನುಮತಿ ಪಡೆದುಕೊಳ್ಳಬೇಕಿತ್ತು. ಆದರೆ ಆ ಕೆಲಸವಾಗಿಲ್ಲ" ಎಂದು ಆರೋಪಿಸಿದರು.

ಇದನ್ನೂ ಓದಿ: ಶಿವಮೊಗ್ಗ: ರಾಗಿಗುಡ್ಡಕ್ಕೆ ಭೇಟಿ ನೀಡಿದ ಕಟೀಲ್​ ನೇತೃತ್ವದ ಸತ್ಯ ಶೋಧನಾ ಸಮಿತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.