ಬೆಂಗಳೂರು: ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಹಾಗೂ ಪರಿಷತ್ನ 4 ಸ್ಥಾನಕ್ಕೆ ಚುನಾವಣೆ ದಿನಾಂಕ ಘೋಷಣೆಯಾದ ಹಿನ್ನೆಲೆ ನಾಳೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಕರೆದಿದ್ದು, ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆಸಲಾಗುತ್ತಿದೆ.
ನಾಳೆ ಸಂಜೆ 5 ಗಂಟೆಗೆ ಮಲ್ಲೇಶ್ವರಂ ನಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಜಗದೀಶ್ ಶೆಟ್ಟರ್, ಆರ್.ಅಶೋಕ್,ಕೆ.ಎಸ್.ಈಶ್ವರಪ್ಪ, ಸಿ.ಟಿ ರವಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಭಾಗಿಯಾಗಲಿದ್ದಾರೆ.
ಆರ್.ಆರ್ ನಗರ ಹಾಗು ಶಿರಾ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕುರಿತು ಮಹತ್ವದ ಚರ್ಚೆ ನಡೆಯಲಿದೆ. ಆರ್.ಆರ್. ನಗರದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಂದಿರುವ ಮುನಿರತ್ನ ಹಾಗೂ ಕಳೆದ ಬಾರಿಯ ಪರಾಜಿತ ಅಭ್ಯರ್ಥಿ ಮುನಿರಾಜುಗೌಡ ನಡುವೆ ತೀವ್ರ ಪೈಪೋಟಿ ಇದೆ. ಆದರೆ, ಸರ್ಕಾರ ರಚನೆಗೆ ಕಾರಣರಾದವರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕಾದ ಜವಾಬ್ದಾರಿ ಸಿಎಂ ಮೇಲಿದ್ದು, ಅಭ್ಯರ್ಥಿ ಆಯ್ಕೆ ಜಟಿಲವಾಗಿದೆ. ಈ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಿ ನಿರ್ಧಾರಕ್ಕೆ ಬರಲಾಗುತ್ತೆ. ಇನ್ನು ಶಿರಾದಲ್ಲಿ ಈ ಬಾರಿ ಗೆಲ್ಲಲೇಬೇಕು ಎನ್ನುವ ಪಣ ತೊಟ್ಟಿರುವ ಬಿಜೆಪಿ ಎಚ್ಚರಿಕೆಯಿಂದ ಅಭ್ಯರ್ಥಿ ಆಯ್ಕೆ ಮಾಡಲಿದೆ.
ಇದರ ಜೊತೆಗೆ ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಸುಶೀಲ್ ನಮೋಶಿ ಮತ್ತು ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಎಸ್.ವಿ ಸಂಕನೂರ್ ಹೆಸರನ್ನು ಅಂತಿಮಗೊಳಿಸಿ ಎರಡೂ ಕ್ಷೇತ್ರದಿಂದ ಒಂದೊಂದೇ ಹೆಸರನ್ನು ಈಗಾಗಲೇ ಪಕ್ಷದ ಕೇಂದ್ರ ಚುನಾವಣಾ ಮಂಡಳಿಗೆ ಕಳುಹಿಸಿಕೊಡಲಾಗಿದೆ. ಇನ್ನು ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಜೆಡಿಎಸ್ ತೊರೆದು ಬಿಜೆಪಿ ಸೇರಿರುವ ಪುಟ್ಟಣ್ಣಗೆ ಟಿಕೆಟ್ ನೀಡುವುದಾಗಿ ಪ್ರಕಟಿಸಿದೆ. ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಶಿರಾದ ಚಿದಾನಂದಗೌಡಗೆ ಟಿಕೆಟ್ ನೀಡಲು ನಿರ್ಧರಿಸಿದ್ದು, ಈ ಬಗ್ಗೆ ಮತ್ತೊಮ್ಮೆ ನಿರ್ಣಯ ಕೈಗೊಂಡು ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್ಗೆ ಕಳುಹಿಸಲಿದೆ.
ಉಪ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸರ್ಕಸ್; ನಾಳೆ ಬಿಜೆಪಿ ಕೋರ್ ಕಮಿಟಿ ಸಭೆ - ಉಪಚುನಾವಣೆ ಲೇಟೆಸ್ಟ್ ಸುದ್ದಿ
ನಾಳೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಕರೆದಿದ್ದು,ಆರ್.ಆರ್ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕುರಿತು ಮಹತ್ವದ ಚರ್ಚೆ ನಡೆಯಲಿದೆ.