ETV Bharat / state

ಏ.8ಕ್ಕೆ ಬಿಜೆಪಿ ಸಂಸದೀಯ ಮಂಡಳಿ ಸಭೆ: ನಾಳೆ ಬಿಎಸ್​ವೈ, ಬೊಮ್ಮಾಯಿ ದೆಹಲಿಗೆ - BS Yedyurappa

ಎರಡು ದಿನಗಳವರೆಗೆ ನಡೆಯಲಿರುವ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಭಾಗವಹಿಸಲು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ನಾಳೆ ದೆಹಲಿಗೆ ಪ್ರಯಾಣ ಆರಂಭಿಸಲಿದ್ದಾರೆ.

BS Yedyurappa  CM Basavaraja Bommai
ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಬಿ.ಎಸ್.ಯಡಿಯೂರಪ್ಪ
author img

By

Published : Apr 6, 2023, 9:49 PM IST

ಬೆಂಗಳೂರು: ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಳ್ಳಲು ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ನವದೆಹಲಿಗೆ ತೆರಳುತ್ತಿದ್ದಾರೆ. ಎರಡು ದಿನಗಳ ಕಾಲ ನಡೆಯಲಿರುವ ಮಹತ್ವದ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಬೆಳಗ್ಗೆ 11.45ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನವದೆಹಲಿಗೆ ಪ್ರಯಾಣ ಬೆಳೆಸಲಿರುವ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ, ಮಧ್ಯಾಹ್ನ 2.35ಕ್ಕೆ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದ್ದಾರೆ. ನಾಳೆ ರಾತ್ರಿ ಕರ್ನಾಟಕ ಭವನದಲ್ಲೇ ವಾಸ್ತವ್ಯ ಹೂಡಲಿರುವ ಯಡಿಯೂರಪ್ಪ, ಶನಿವಾರ ಹಾಗೂ ಭಾನುವಾರ ದೆಹಲಿಯಲ್ಲಿಯೇ ಇರಲಿದ್ದಾರೆ. ವಾಪಸ್ ಬರುವುದನ್ನು ಕಾಯ್ದಿರಿಸಿದ್ದಾರೆ.

ನಾಳೆ ಶಿವಮೊಗ್ಗ ಹುಬ್ಬಳ್ಳಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಜೆ 5 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ನವದೆಹಲಿಗೆ ಪ್ರಯಾಣಿಸಲಿದ್ದಾರೆ. ಎರಡು ದಿನ ದೆಹಲಿಯಲ್ಲಿಯೇ ವಾಸ್ತವ್ಯ ಹೂಡಲಿದ್ದು ಕೇಂದ್ರ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ನಾಳೆ ರಾತ್ರಿಯೇ ಮೊದಲ ಹಂತದ ಸಭೆ ನಡೆಯಲಿದ್ದು, ಏಪ್ರಿಲ್ 8 ರಂದು ಅಧಿಕೃತವಾಗಿ ಸಂಸದೀಯ ಮಂಡಳಿ ಸಭೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಸಂಸದೀಯ ಮಂಡಳಿ ಸದಸ್ಯರು ಭಾಗಿಯಾಗಲಿದ್ದಾರೆ.

ಏಪ್ರಿಲ್ 8 ರಂದು ಮಹತ್ವದ ಸಭೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ತಮಿಳುನಾಡು, ಕರ್ನಾಟಕ ಪ್ರವಾಸದ ಹಿನ್ನೆಲೆಯಲ್ಲಿ ಏಪ್ರಿಲ್ 9ರ ರಾತ್ರಿ ಮತ್ತೊಮ್ಮೆ ಸಭೆ ನಡೆಯುವ ಸಾಧ್ಯತೆಯಿದೆ. ಹಾಗಾಗಿ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಎರಡೂ ದಿನ ದೆಹಲಿಯಲ್ಲಿಯೇ ವಾಸ್ತವ್ಯ ಹೂಡಲಿದ್ದು, ಮೊದಲ ಹಂತದ ಪಟ್ಟಿ ಬಿಡುಗಡೆಯಾದ ನಂತರ ರಾಜ್ಯಕ್ಕೆ ವಾಪಸಾಗಲಿದ್ದಾರೆ ಎನ್ನಲಾಗಿದೆ.

ಏಪ್ರಿಲ್ 10ರೊಳಗೆ ಮೊದಲ ಪಟ್ಟಿ: ಸಂಸದೀಯ ಮಂಡಳಿ ಸಭೆ ಕುರಿತು ಮಾಹಿತಿ ನೀಡಿರುವ ರಾಜ್ಯ ಬಿಜೆಪಿ ಕೋರ್ ಕಮಿಟಿ ಸದಸ್ಯ ಸಚಿವ ಡಾ.ಅಶ್ವಥ್ ನಾರಾಯಣ್, ''ಹಾಲಿ ಶಾಸಕರು ಸೇರಿದಂತೆ ಪ್ರತಿ ಕ್ಷೇತ್ರಗಳಿಗೂ ಮೂವರು ಹೆಸರು ಶಿಫಾರಸು ಮಾಡುವ ತೀರ್ಮಾನ ನಮ್ಮ ರಾಜ್ಯ ಸಮಿತಿಯಲ್ಲಿ ಆಗಿದೆ. ಎಬಿಸಿ ಮಾದರಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡಿ ಕೇಂದ್ರಕ್ಕೆ ಕಳುಹಿಸಿಕೊಡಲಾಗಿದೆ. ದೆಹಲಿಯಲ್ಲಿ ನಡೆಯಲಿರುವ ಸಂಸದೀಯ ಮಂಡಳಿ ಸಭೆಯಲ್ಲಿ ಎಲ್ಲ ಕ್ಷೇತ್ರಗಳಿಗೂ ಅಭ್ಯರ್ಥಿ ಯಾರಾಗಬೇಕೆಂದು ತೀರ್ಮಾನ ಆಗುತ್ತದೆ. ಮೊದಲ ಪಟ್ಟಿಯನ್ನು ಏಪ್ರಿಲ್ 10ರೊಳಗೆ ನಿರೀಕ್ಷಿಸಬಹುದು. ಎರಡನೇ ಪಟ್ಟಿಯನ್ನು ಏಪ್ರಿಲ್ 13ಕ್ಕೆ ನಿರೀಕ್ಷೆ ಮಾಡಬಹುದು'' ಎಂದರು.

3 ಹಂತಗಳಲ್ಲಿ ಪಟ್ಟಿ ಬಿಡುಗಡೆ ಇಲ್ಲ: ಶಾಸಕರ ಕ್ಷೇತ್ರ ಬದಲಾವಣೆ ವಿಷಯ ಚರ್ಚೆಯಾಗಿಲ್ಲ. ಶಾಸಕರ ಕ್ಷೇತ್ರ ಬದಲಾವಣೆ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ. ಈಗ ಇರುವ ಕ್ಷೇತ್ರಗಳಲ್ಲಿ ಹಾಲಿ ಶಾಸಕರ ಹೆಸರು ಸೇರಿದಂತೆ 224 ಕ್ಷೇತ್ರಗಳಿಗೂ ಮೂವರು ಅಭ್ಯರ್ಥಿಗಳ ಹೆಸರು ಶಿಫಾರಸು ಮಾಡಲಾಗಿದೆ. ಮೂರು ಹಂತದಲ್ಲಿ ಪಟ್ಟಿ ಬಿಡುಗಡೆ ಮಾಡಲ್ಲ, ಎರಡು ಹಂತದಲ್ಲಿ ಪಟ್ಟಿ ಪ್ರಕಟ ಆಗುತ್ತದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: 32 ಶಾಸಕರ ವಿರುದ್ಧ ಜನತಾ ಪ್ರಾತಿನಿಧ್ಯ ಕಾಯ್ದೆಯಡಿ ಮೊಕದ್ದಮೆ: ಎಡಿಆರ್ ವರದಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.