ETV Bharat / state

ಜಿ.ಪಂ. ಚುನಾವಣೆಗೆ ಗ್ರಾ.ಪಂ. ಚುನಾವಣೆಯನ್ನೇ ಭೂಮಿಕೆ ಮಾಡಿಕೊಂಡ‌ ಬಿಜೆಪಿ

author img

By

Published : Dec 21, 2020, 6:47 AM IST

ಗ್ರಾ. ಪಂ. ಚುನಾವಣೆಯನ್ನೇ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗೆ ಭೂಮಿಕೆ ಮಾಡಿಕೊಳ್ಳಲು ಬಿಜೆಪಿ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಗೆದ್ದವರಿಗೆ ಮುಂಬರಲಿರುವ ಚುನಾವಣೆಗಳಲ್ಲಿ ಜವಾಬ್ದಾರಿ ನೀಡುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ
ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ

ಬೆಂಗಳೂರು: ಗ್ರಾಮ ಪಂಚಾಯತ್ ಚುನಾವಣೆಯನ್ನೇ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆಗೆ ಭೂಮಿಕೆ ಮಾಡಿಕೊಳ್ಳಲು ಬಿಜೆಪಿ ಮುಂದಾಗಿದ್ದು, ಗೆದ್ದವರಿಗೆ ಮುಂಬರಲಿರುವ ಚುನಾವಣೆಗಳಲ್ಲಿ ಜವಾಬ್ದಾರಿ ನೀಡುವ ನಿರ್ಧಾರ ಕೈಗೊಂಡಿದೆ.

ನಗರದ ಓಲ್ಡ್ ಏರ್‌ಪೋರ್ಟ್ ರಸ್ತೆಯ ಹೋಟೆಲ್ ರಾಯಲ್ ಆರ್ಕಿಡ್‌ನಲ್ಲಿ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಜೊತೆಯಲ್ಲೇ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಚುನಾವಣೆ ಕುರಿತು ಚರ್ಚೆ ನಡೆಸಲಾಯಿತು.

ರಾಜ್ಯ ಪದಾಧಿಕಾರಿಗಳ ಸಭೆ ಮೂಲಕ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆಗೂ ತಯಾರಿ ಶುರು ಮಾಡಿದ ಬಿಜೆಪಿ ಗ್ರಾಮ ಪಂಚಾಯಿತಿ ಚುನಾವಣೆಯನ್ನೇ ಭೂಮಿಕೆ ಮಾಡಿಕೊಳ್ಳಲು ಸಿದ್ಧವಾಗಿದೆ. ಗ್ರಾಮ ಪಂಚಾಯಿತಿ ಚುನಾವಣೆ ಬಳಿಕ ಜನಪ್ರತಿನಿಧಿ ಸಮಾವೇಶ ಆಯೋಜಿಸಲು ನಿರ್ಧರಿಸಿದೆ.

ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಜನ ಪ್ರತಿನಿಧಿ ಸಮಾವೇಶ ಆಯೋಜನೆ ಮಾಡಲಿದ್ದು, ಆರು ಜನ ನಾಯಕರ ತಂಡದಿಂದ ರಾಜ್ಯವ್ಯಾಪಿ ಜನಪ್ರತಿನಿಧಿ ಸಮಾವೇಶ ನಡೆಸಲಾಗುತ್ತದೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶೇ.80ರಷ್ಟು ಬಿಜೆಪಿ ಬೆಂಬಲಿತ ಸದಸ್ಯರನ್ನು ಗೆಲ್ಲಿಸುವ ಟಾರ್ಗೆಟ್ ಹಾಕಿಕೊಂಡಿದ್ದು, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದವರಿಗೆ ಜಿಲ್ಲಾ ಪಂಚಾಯತ್ ಚುನಾವಣೆ ಜವಾಬ್ದಾರಿ ನೀಡಲು ಚಿಂತನೆ ನಡೆಸಿದೆ.

ಜನವರಿ 8ರಿಂದ ಜನವರಿ 11ರವರೆಗೆ ಜನಪ್ರತಿನಿಧಿ ಸಮಾವೇಶ ನಡೆಸಲಿದ್ದು, ಮೂವರು ಡಿಸಿಎಂಗಳು, ಸಚಿವರಾದ ಕೆ.ಎಸ್. ಈಶ್ವರಪ್ಪ, ಆರ್. ಅಶೋಕ್ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದ ತಂಡದಿಂದ ರಾಜ್ಯ ಪ್ರವಾಸ ನಡೆಸಲು ಭಾನುವಾರ ನಡೆದ ರಾಜ್ಯ ಪದಾಧಿಕಾರಿಗಳ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಯಿತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.