ಬೆಂಗಳೂರು: ರಾಜ್ಯದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಬಿಜೆಪಿ ಸಿದ್ಧತೆ ಆರಂಭಿಸಿದ್ದು, ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಸಭೆ ನಡೆಸಿ ಚುನಾವಣೆಗೆ ಮೋರ್ಚಾಗಳನ್ನು ಸಜ್ಜುಗೊಳಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇಂದು ನಗರದ ಹವ್ಯಕ ಮಹಾಸಭಾ ಭವನದಲ್ಲಿ ರಾಜ್ಯ ಅಲ್ಪಸಂಖ್ಯಾತ ಮೋರ್ಚಾ, ಮಹಿಳಾ ಮೋರ್ಚಾ, ಯುವ ಮೋರ್ಚಾ, ರೈತ ಮೋರ್ಚಾ ಎಸ್.ಸಿ. ಮೋರ್ಚಾ, ಎಸ್. ಟಿ.ಮೋರ್ಚಾ, ಒಬಿಸಿ ಮೋರ್ಚಾಗಳ ನೂತನ ರಾಜ್ಯ ಪದಾಧಿಕಾರಿಗಳ ಸಭೆ ನಡೆಸಿದರು.
ಮೋರ್ಚಾಗಳನ್ನು ಉಪ ಚುನಾವಣೆಗೆ ಸಜ್ಜುಗೊಳಿಸುವ ಭಾಗವಾಗಿ ಮಹತ್ವದ ಸಮಾಲೋಚನೆ ನಡೆಸಲಾಯಿತು. ಉಪ ಚುನಾವಣೆಯಲ್ಲಿ ಮೋರ್ಚಾಗಳ ಜವಾಬ್ದಾರಿ, ಯಾವ ರೀತಿ ಕಾರ್ಯ ನಿರ್ವಹಿಸಬೇಕು ಎನ್ನುವ ಕುರಿತು ಸಲಹೆ ಸೂಚನೆ ನೀಡಲಾಯಿತು.
ಆರ್.ಆರ್ ನಗರ ಹಾಗೂ ಶಿರಾ ಕ್ಷೇತ್ರಗಳ ಗೆಲುವಿಗೆ ಕಾರ್ಯತಂತ್ರ ರೂಪಿಸುವ ಕುರಿತು ಸಮಾಲೋಚನೆ ನಡೆಸಲಾಯಿತು. ಉಪ ಚುನಾವಣೆ ಘೋಷಣೆಯಾಗುತ್ತಿದ್ದಂತೆ ಬಿಜೆಪಿ ಅಲರ್ಟ್ ಆಗಿದ್ದು, ಸಂಘಟನಾ ಶಕ್ತಿಯ ಬಳಕೆಗೆ ಮೋರ್ಚಾಗಳನ್ನು ಸಿದ್ಧಪಡಿಸಲು ಮುಂದಾಗಿದೆ.