ಬೆಂಗಳೂರು: ರಾಜ್ಯ ವಿಧಾನಮಂಡಲ ಜಂಟಿ ಅಧಿವೇಶನಲ್ಲಿ ರಾಜ್ಯಪಾಲ ವಜೂಭಾಯಿ ವಾಲಾ ಅವರು ಮಾಡಿದ ಭಾಷಣ ಸ್ಫೂರ್ತಿದಾಯಕವಾಗಿದ್ದು, ಅಭಿವೃದ್ಧಿಯ ವೇಗಕ್ಕೆ ಪ್ರೇರಕವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ರಾಜ್ಯಪಾಲರು ತಮ್ಮ ಭಾಷಣದಲ್ಲಿ ಸರ್ಕಾರದ ಆದ್ಯತೆಗಳು, ಬದ್ಧತೆಗಳು ಮತ್ತು ಯೋಜನೆಗಳ ಬಗ್ಗೆ ಸಂಕ್ಷಿಪ್ತವಾಗಿ ಹೇಳಿದ್ದಾರೆ. ಮುಖ್ಯವಾಗಿ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧತೆಯನ್ನು ರಾಜ್ಯಪಾಲರು ಪ್ರತಿಪಾದಿಸಿದ್ದಾರೆ. ರೈತರ ಕಲ್ಯಾಣ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಹೇಳಿರುವುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸರ್ಕಾರಕ್ಕೆ ರೈತರ ಬಗ್ಗೆ ಇರುವ ಕಾಳಜಿಯನ್ನು ತೋರಿಸುತ್ತದೆ ಎಂದು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ನೆರೆ ಸಂತ್ರಸ್ತರ ಸಮಸ್ಯೆಯನ್ನು ಸರ್ಕಾರ ತುಂಬಾ ಪರಿಣಾಮಕಾರಿಯಾಗಿ ನಿಭಾಯಿಸಿದೆ. ಕೈಗಾರಿಕಾ ಕ್ಷೇತ್ರದ ಪ್ರಗತಿ ಬಗ್ಗೆ ಸರ್ಕಾರದ ಆದ್ಯತೆಯನ್ನೂ ರಾಜ್ಯಪಾಲರು ಪ್ರಸ್ತಾಪಿಸಿರುವುದು ಸ್ವಾಗತಾರ್ಹ ಎಂದಿದ್ದಾರೆ.