ಬೆಂಗಳೂರು : ಕಾಂಗ್ರೆಸ್ ಸಂಸದ ಡಿ ಕೆ ಸುರೇಶ್ ಮತ್ತು ವಿಧಾನಪರಿಷತ್ ಸದಸ್ಯ ಎಸ್.ರವಿ ಅವರು ವೇದಿಕೆ ಮೇಲೆಯೇ ಸಚಿವ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ ಮೇಲೆ ಹಲ್ಲೆಗೆ ಮುಂದಾಗಿದ್ದನ್ನು ಖಂಡಿಸಿ ಸದಾಶಿವನಗರದಲ್ಲಿನ ಡಿ.ಕೆ. ಸುರೇಶ್ ಮನೆಗೆ ಮುತ್ತಿಗೆ ಹಾಕಿ ಬಿಜೆಪಿ ಕಾರ್ಯಕರ್ತರು ಪ್ರತಿಭಟಿಸಿದರು.
ಸದಾಶಿವನಗರದ ಭಾಷ್ಯಾಂ ವೃತ್ತದಲ್ಲಿರುವ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಅವರ ಮನೆ ಎದುರಿಗೆ ಬಿಜೆಪಿ ಮಹಾನಗರ ಘಟಕದಿಂದ ಪ್ರತಿಭಟನೆ ನಡೆಸಲಾಯಿತು. ಡಿ.ಕೆ ಬ್ರದರ್ಸ್ ಕಳ್ಳರು, ಗೂಂಡಾಗಳು ಎಂದು ಕೂಗಿ ಬಿಜೆಪಿ ಕಾರ್ಯಕರ್ತರು ಡಿ.ಕೆ ಸುರೇಶ್ ವಿರುದ್ಧ ಆಕ್ರೋಶ ಹೊರ ಹಾಕಿದರು.
ಇದನ್ನೂ ಓದಿ: ಸಚಿವ ಅಶ್ವತ್ಥನಾರಾಯಣ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ನಂತರ ಡಿ.ಕೆ. ಸುರೇಶ್ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಮುಂಜಾಗ್ರತಾ ಕ್ರಮವಾಗಿ ಡಿ.ಕೆ. ಸುರೇಶ್ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.
ಭಾಷ್ಯಂ ವೃತ್ತದಲ್ಲೇ ಪ್ರತಿಭಟನಾನಿರತ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ತಡೆದರು. ಈ ವೇಳೆ ಪೊಲೀಸರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತಾದರೂ ಪರಿಸ್ಥಿತಿ ತಿಳಿಗೊಳಿಸುವಲ್ಲಿ ಪೊಲೀಸರು ಸಫಲರಾದರು.
ಹೆಚ್ಚಿನ ಓದಿಗೆ: ರಾಮನಗರದ ವೇದಿಕೆಯಲ್ಲೇ ಕೈ-ಕಮಲ ಗಲಾಟೆ: ಸಚಿವರ ಆ ಮಾತುಗಳು ಜಟಾಪಟಿಗೆ ಕಾರಣವಾಯ್ತಾ?