ಬೆಂಗಳೂರು: ವಿಧಾನ ಪರಿಷತ್ನ ಆಗ್ನೇಯ ಪದವೀಧರರ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿ ಭಾರತೀಯ ಜನತಾ ಪಾರ್ಟಿಯ ಚುನಾವಣೆಗೆ ಮುಜುಗರ ತಂದ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ಉಚ್ಛಾಟಿಸಿದ್ದಾರೆ.
ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಶ್ರೀನಿವಾಸ್, ಕಣದಿಂದ ಹಿಂದಕ್ಕೆ ಸರಿಯುವಂತೆ ತಿಳಿಸಿದ ಪಕ್ಷದ ಸೂಚನೆಯನ್ನು ಕಡೆಗಣಿಸಿ ಮುಜುಗರಕ್ಕೆ ಕಾರಣರಾಗಿದ್ದಾರೆ. ಆದ್ದರಿಂದ ಅವರನ್ನು ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ ಎಂದುಕಟೀಲ್ ತಿಳಿಸಿದ್ದಾರೆ.