ಬೆಂಗಳೂರು: ಬಿಜೆಪಿ ರಾಜ್ಯ ಪದಾಧಿಕಾರಿಗಳ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪಕ್ಷದ ರಾಜ್ಯ ಘಟಕದ ಪದಾಧಿಕಾರಿಗಳ ಪಟ್ಟಿಯನ್ನು ಪ್ರಕಟಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ಹಾಗೂ ಸಿಎಂ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ರಾಜ್ಯ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ.
ಪಟ್ಟಿ ಅಂತಿಮಗಳಿಸುವ ಮುನ್ನ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರೊಂದಿಗೂ ಚರ್ಚಿಸಿ ಪದಾಧಿಕಾರಿಗಳ ಪಟ್ಟಿ ತಯಾರಿಸಲಾಗಿದೆ. ಕೆಲ ದಿನಗಳ ಹಿಂದಷ್ಟೇ ಸಿಎಂ ನಿವಾಸಕ್ಕೆ ಭೇಟಿ ನೀಡಿದ್ದ ಕಟೀಲ್, ಪದಾಧಿಕಾರಿಗಳ ನೇಮಕ ಸಂಬಂಧ ಮಾತುಕತೆ ನಡೆಸಿದ್ದರು.
ಇದೀಗ ಪಟ್ಟಿ ಹೊರಬಿದ್ದಿದ್ದು, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿದ್ದ ಅರವಿಂದ ಲಿಂಬಾವಳಿ, ಸಂಸದೆ ಶೋಭಾ ಕರಂದ್ಲಾಜೆ, ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಸಿಎಂ ಪುತ್ರ ಬಿ.ವೈ ವಿಜಯೇಂದ್ರ ಅವರಿಗೆ ರಾಜ್ಯ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ. ಸಿಎಂ ಆಪ್ತರ ಜೊತೆಗೆ ಇತ್ತೀಚೆಗಷ್ಟೇ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಈರಣ್ಣ ಕಡಾಡಿ ಹಾಗೂ ಅಶೋಕ್ ಗಸ್ತಿ ಅವರಿಗೂ ಮೋರ್ಚಾಗಳ ಜವಾಬ್ದಾರಿ ನೀಡಲಾಗಿದೆ.
ಬಿಜೆಪಿ ರಾಜ್ಯ ಉಪಾಧ್ಯಕ್ಷರು
ಅರವಿಂದ ಲಿಂಬಾವಳಿ, ನಿರ್ಮಲ್ ಕುಮಾರ್ ಸುರಾನ, ಶೋಭಾ ಕರಂದ್ಲಾಜೆ, ಮಾಲೀಕಯ್ಯ ಗುತ್ತೇದಾರ್, ತೇಜಸ್ವಿನಿ ಅನಂತಕುಮಾರ್, ಪ್ರತಾಪ್ ಸಿಂಹ, ಎಂ.ಬಿ ನಂದೀಶ್, ಬಿ.ವೈ ವಿಜಯೇಂದ್ರ, ಎಂ. ಶಂಕರಪ್ಪ, ಎಂ.ರಾಜೇಂದ್ರ.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು
ಎನ್. ರವಿಕುಮಾರ್, ಸಿದ್ದರಾಜು, ಅಶ್ವತ್ಥ ನಾರಾಯಣ್, ಮಹೇಶ್ ತೆಂಗಿನಕಾಯಿ
ಬಿಜೆಪಿ ರಾಜ್ಯ ಕಾರ್ಯದರ್ಶಿಗಳು
ಸತೀಶ್ ರೆಡ್ಡಿ, ತುಳಸಿ ಮುನಿರಾಜು ಗೌಡ, ಕೇಶವಪ್ರಸಾದ್, ಜಗದೀಶ್ ಹಿರೇಮನಿ, ಸುಧಾ ಜಯರುದ್ರೇಶ್, ಭಾರತಿ ಮುಗ್ದುಂ, ಹೇಮಲತಾ ನಾಯಕ್, ಉಜ್ವಲಾ ಬಡವಣ್ಣಾಚೆ, ಕೆ.ಎಸ್ ನವೀನ್, ವಿನಯ್ ಬಿದರೆ
ಬಿಜೆಪಿ ರಾಜ್ಯ ಖಜಾಂಚಿಗಳು
ಸುಬ್ಬನರಸಿಂಹ, ಲೆಹರ್ ಸಿಂಗ್ ಸಿರೊಯಾ
ಕಾರ್ಯಾಲಯ ಕಾರ್ಯದರ್ಶಿ
ಲೋಕೇಶ್ ಅಂಬೆಕಲ್ಲು
ರಾಜ್ಯ ವಕ್ತಾರ
ಕ್ಯಾ.ಗಣೇಶ್ ಕಾರ್ಣಿಕ್
ಪ್ರಕೋಷ್ಠಗಳ ಸಂಯೋಜಕರು
ಎಂ.ಬಿ ಭಾನುಪ್ರಕಾಶ್, ಡಾ.ಎ.ಹೆಚ್. ಶಿವಯೋಗಿಸ್ವಾಮಿ
ವಿವಿಧ ಮೋರ್ಚಾದ ಅಧ್ಯಕ್ಷರು
ಯುವ ಮೋರ್ಚಾ: ಡಾ. ಸಂದೀಪ್
ಮಹಿಳಾ ಮೋರ್ಚಾ: ಗೀತಾ ವಿವೇಕಾನಂದ
ರೈತ ಮೋರ್ಚಾ: ಈರಣ್ಣ ಕಡಾಡಿ
ಹಿಂದುಳಿದ ವರ್ಗಗಳ ಮೋರ್ಚಾ: ಅಶೋಕ್ ಗಸ್ತಿ
ಎಸ್.ಸಿ ಮೋರ್ಚಾ: ಚಲುವಾದಿ ನಾರಾಯಣಸ್ವಾಮಿ
ಎಸ್.ಟಿ ಮೋರ್ಚಾ: ತಿಪ್ಪರಾಜು ಹವಾಲ್ದಾರ್
ಅಲ್ಪಸಂಖ್ಯಾತರ ಮೋರ್ಚಾ: ಮುಜ್ಹಾಮಿಲ್ ಬಾಬು