ETV Bharat / state

ಕೈ ನಾಯಕರಿಗೆ ಜೆಡಿಎಸ್ ಜತೆ ಮೈತ್ರಿಗೆ ಮನಸಿಲ್ಲ; ಬಿಜೆಪಿ, ಸಿಎಂರಿಂದ ಮೈತ್ರಿಗೆ ನಿರಂತರ ಮನವಿ: ಹೆಚ್​ಡಿಕೆ - HD kumaraswamy

ಮೈಸೂರಿನ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಹೀಗೆ ಆಗಿತ್ತು. ಕಾಂಗ್ರೆಸ್ ಜೆಡಿಎಸ್ ಪಕ್ಷದ ಶಕ್ತಿ ಕುಗ್ಗಿಸುವ ಕುತಂತ್ರ ಮಾಡುತ್ತಾರೆ. ಜೆಡಿಎಸ್ ಜೊತೆಗೆ ಮೈತ್ರಿ ಮಾತುಕತೆ ಬರುತ್ತಿಲ್ಲ. ಬಿಜೆಪಿಯ ಬಿ ಟೀಂ ಎಂದು ನಮ್ಮನ್ನು ಹೀಯಾಳಿಸಲು ಮುಂದಾಗಿದ್ದಾರೆ. ಆದರೂ ನಾವು ವಿಧಾನಸಭೆಯಲ್ಲಿ ಮೈತ್ರಿ ಮಾಡಿಕೊಂಡಿದ್ದೆವು. ಅದರ ಬಗ್ಗೆ ಈಗ ನಾನು ಮಾತನಾಡಲ್ಲ. ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಗೆ ಸೂಚನೆ ನೀಡಿ, ರಾಜ್ಯ ನಾಯಕರು ಮನವಿ ಮಾಡಿದರೆ ಮೈತ್ರಿ ಬಗ್ಗೆ ಚಿಂತನೆ ಮಾಡುತ್ತೇವೆ ಎಂದರು.

HD kumaraswamy
ಹೆಚ್​.ಡಿ. ಕುಮಾರಸ್ವಾಮಿ
author img

By

Published : Sep 14, 2021, 3:30 AM IST

ಬೆಂಗಳೂರು: ಕಲಬುರಗಿ ಮಹಾನಗರ ಪಾಲಿಕೆ ಮೈತ್ರಿ ಸಂಬಂಧ ಜೆಡಿಎಸ್ ಪಕ್ಷ ರಾಜ್ಯ ಕಾಂಗ್ರೆಸ್ ನಾಯಕರ ನಡೆಯ ಮೇಲೆ ಮುಂದಿನ ನಿರ್ಣಯ ಕೈಗೊಳ್ಳುವ ಚಿಂತನೆಯಲ್ಲಿದೆ. ನಗರದ ಖಾಸಗಿ ಹೊಟೇಲ್‌ನಲ್ಲಿ ಸೋಮವಾರ ಮಾಜಿ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗಿದೆ.

ಜೆಡಿಎಸ್ ಶಾಸಕಾಂಗ ಸಭೆಗೂ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಕಲಬುರಗಿಮಹಾನಗರ ಪಾಲಿಕೆ ವಿಚಾರದಲ್ಲಿ ಈವರೆಗೆ ಎರಡು ರಾಷ್ಟ್ರೀಯ ಪಕ್ಷದ ನಾಯಕರು ನಮ್ಮ ಪಕ್ಷದ ನಾಯಕರ ಜತೆ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರಿಗೆ ಕರೆ ಮಾಡಿ ಮನವಿ ಮಾಡಿದ್ದಾರೆಯೇ ಹೊರತು ಬೇರೆ ಯಾವ ಕಾಂಗ್ರೆಸ್ ನಾಯಕರು ಸಂಪರ್ಕ ಮಾಡಿಲ್ಲ. ದೇವೇಗೌಡ ಅವರು ಖರ್ಗೆ ಅವರಿಗೆ ನಿಮ್ಮ ಹೈಕಮಾಂಡ್, ರಾಜ್ಯ ಘಟಕಕ್ಕೆ ಸೂಚನೆ ನೀಡಿ, ಅಲ್ಲಿಂದ ಏನಾದರೂ ಮನವಿ ಬಂದರೆ ಪರಿಶೀಲನೆ ನಡೆಸೋಣ ಎಂದಿದ್ದಾರೆ. ಆದರೆ, ರಾಜ್ಯದ ಕಾಂಗ್ರೆಸ್ ನಾಯಕರಿಗೆ ಜೆಡಿಎಸ್ ಜತೆ ಮೈತ್ರಿಗೆ ಮನಸ್ಸು ಇಲ್ಲ. ಬಿಜೆಪಿಯಿಂದ ಮುಖ್ಯಮಂತ್ರಿ ಸೇರಿದಂತೆ ಸಚಿವರು ನಿರಂತರವಾಗಿ ಮನವಿ ಮಾಡುತ್ತಿದ್ದಾರೆ ಎಂದು ವಿವರಿಸಿದರು.

ಮೈಸೂರಿನ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಹೀಗೆ ಆಗಿತ್ತು. ಕಾಂಗ್ರೆಸ್ ಜೆಡಿಎಸ್ ಪಕ್ಷದ ಶಕ್ತಿ ಕುಗ್ಗಿಸುವ ಕುತಂತ್ರ ಮಾಡುತ್ತಾರೆ. ಜೆಡಿಎಸ್ ಜೊತೆಗೆ ಮೈತ್ರಿ ಮಾತುಕತೆ ಬರುತ್ತಿಲ್ಲ. ಬಿಜೆಪಿಯ ಬಿ ಟೀಂ ಎಂದು ನಮ್ಮನ್ನು ಹೀಯಾಳಿಸಲು ಮುಂದಾಗಿದ್ದಾರೆ. ಆದರೂ ನಾವು ವಿಧಾನಸಭೆಯಲ್ಲಿ ಮೈತ್ರಿ ಮಾಡಿಕೊಂಡಿದ್ದೆವು. ಅದರ ಬಗ್ಗೆ ಈಗ ನಾನು ಮಾತನಾಡಲ್ಲ. ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಗೆ ಸೂಚನೆ ನೀಡಿ, ರಾಜ್ಯ ನಾಯಕರು ಮನವಿ ಮಾಡಿದರೆ ಮೈತ್ರಿ ಬಗ್ಗೆ ಚಿಂತನೆ ಮಾಡುತ್ತೇವೆ ಎಂದರು.ಎರಡೂ ರಾಷ್ಟ್ರೀಯ ಪಕ್ಷಗಳು ಜೆಡಿಎಸ್ ಅನ್ನು ಬೇಕಾದಾಗ ಉಪಯೋಗ ಮಾಡಿಕೊಳ್ಳುವುದು, ಬೇಡವಾದಾಗ ಕಸದ ಬುಟ್ಟಿಗೆ ಎಸೆಯುವುದನ್ನು ಗಮನದಲ್ಲಿಟ್ಟುಕೊಂಡಿದ್ದೇವೆ. ಇನ್ನು ಸಮಯ ಇದ್ದು, ಮೈತ್ರಿಯ ಬಗ್ಗೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

ಕಾಂಗ್ರೆಸ್ ರಾಜ್ಯ ನಾಯಕರಿಗೆ ಬಿಜೆಪಿಯ ಬಿ ಟೀಂ ಎಂದು ನಿರೂಪಿಸಬೇಕು. ಜನತೆಯ ಮುಂದೆ ಹೋಗಲು ಬೇರೆ ಬಂಡವಾಳ ಇಲ್ಲ. ಪಕ್ಷದ ಶಕ್ತಿಯನ್ನು ಕುಂದಿಸುವ ಕುತಂತ್ರ ನಡೆಯುತ್ತಿದೆ. ಬಿಜೆಪಿ ತೆಕ್ಕೆಗೆ ಕಳುಹಿಸಬೇಕು ಎಂದು ಒಂದು ಗುಂಪು ಇದೆ. ಕಾಂಗ್ರೆಸ್ಸಿಗರು ಜಾತ್ಯಾತೀತ ಶಕ್ತಿಗಳು ಉಳಿಯಬೇಕು ಎಂದು ಒಂದೆಡೆ ಹೇಳುತ್ತಾರೆ. ಮತ್ತೊಂದೆಡೆ ನಮ್ಮ ಪಕ್ಷವನ್ನು ಸರ್ವನಾಶ ಮಾಡಬೇಕು ಎಂಬ ಷಡ್ಯಂತ್ರ ನಡೆಯುತ್ತಿದೆ. ನಾವು ಯಾರಿಗೂ ಅಡಿಯಾಳು ಅಲ್ಲ. ಪಕ್ಷದ ಕಾರ್ಯಕರ್ತರ ದುಡಿಮೆ ಇದ್ದು, ಸ್ವಾಭಿಮಾನ ಇದೆ ಎಂದು ಕಾಂಗ್ರೆಸ್ ವಿರುದ್ಧ ಟೀಕಾಪ್ರಹಾರ ನಡೆಸಿದರು.

ಎತ್ತಿನಗಾಡಿ ರ್‍ಯಾಲಿಗೆ ಕಿಡಿ:

ಕಾಂಗ್ರೆಸ್‌ನ ಎತ್ತಿನ ಗಾಡಿ ರ್‍ಯಾಲಿಗೆ ಹೆಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ದೊಡ್ಡದಾಗಿ‌ ಇಂದು ರ್‍ಯಾಲಿ ಮಾಡಿದ್ರು. ಆದ್ರೆ ಬೆಲೆ ಏರಿಕೆಗೆ ಕಾಂಗ್ರೆಸ್ ಕೂಡಾ ಕಾರಣ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಪಾಲು ಇದೆ. ಜನ ವಿರೋಧಿ ಸರ್ಕಾರವನ್ನ ಪೋಷಿಸಿದ್ದು ಕಾಂಗ್ರೆಸ್. ಹೀಗಾಗಿ ಬೆಲೆ ಏರಿಕೆ ಕಾಂಗ್ರೆಸ್ ಕೂಡಾ ಕಾರಣ ಎಂದರು.

ಕಾಂಗ್ರೆಸ್ ನವರಿಗಾಗಿ ನಾನೇನು ಕಾದು ಕುಳಿತಿಲ್ಲ. ನನಗೇನು ಅಂತಾ ಅನಿವಾರ್ಯತೆ ಇಲ್ಲ. ಬೆಲೆ ಏರಿಕೆ ಬಗ್ಗೆ ಇಂದು ಪ್ರತಿಭಟನೆ ಮಾಡ್ತಾರೆ. ಆದರೆ ಬಿಜೆಪಿ ಸರ್ಕಾರ ಬರಲು ಕಾಂಗ್ರೆಸ್ ನವರೇ ಪರೋಕ್ಷ ಕಾರಣ. ಇದನ್ನು ಅವರು ಅರ್ಥ ಮಾಡಿಕೊಳ್ಳಬೇಕು‌ ಎಂದು ಟೀಕಿಸಿದರು.

ಶಾಸಕಾಂಗ ಸಭೆಗೆ ಗೈರು:

ಶಾಸಕಾಂಗ ನಾಯಕ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಗೆ ಶಾಸಕರು,‌ ಪರಿಷತ್ ಸದಸ್ಯರು ಸಭೆಯಲ್ಲಿ ಭಾಗಿಯಾಯಿದ್ದಾರೆ. ಆದರೆ ನಿರೀಕ್ಷೆಯಂತೆಯೇ ಜಿ.ಟಿ‌. ದೇವೇಗೌಡ, ಗುಬ್ಬಿ ಶ್ರೀನಿವಾಸ, ಎಂಎಲ್​ಸಿ ಕಾಂತರಾಜು ಗೈರಾಗಿದ್ದರು.

ಇದನ್ನು ಓದಿ:ಹಿಂದಿ ಹೇರಿಕೆಯನ್ನು ಕನ್ನಡಿಗರು ಒಪ್ಪಲ್ಲ,'ಹಿಂದಿ ದಿವಸ' ಆಚರಣೆಯನ್ನೂ ಸಹಿಸಲ್ಲ: ಹೆಚ್​ಡಿಕೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.