ಬೆಂಗಳೂರು: ಒಂದೆಡೆ ಜನತಾ ಜಲಧಾರೆ, ಮತ್ತೊಂದೆಡೆ ಕಣ್ಣೀರಧಾರೆ, ಹವಾಮಾನ ವರದಿ ತಪ್ಪಾಗಬಹುದು. ಆದರೆ, ಜೆಡಿಎಸ್ ನಾಯಕರ ಕಣ್ಣೀರಿನ ಮಳೆಯ ಲೆಕ್ಕ ಎಂದಿಗೂ ತಪ್ಪದು ಎಂದು ಬಿಜೆಪಿ ವ್ಯಂಗ್ಯವಾಡಿದೆ.
ಜೆಡಿಎಸ್ ಕಣ್ಣೀರೋತ್ಸವ ಹ್ಯಾಷ್ ಟ್ಯಾಗ್ ಬಳಸಿ ಟ್ವೀಟ್ ಮಾಡಿರುವ ಬಿಜೆಪಿ, ಮುಂದಿನ ಚುನಾವಣೆಯಲ್ಲಿ ಕಣ್ಣೀರಿನ ಮೂಲಕವಾದರೂ ಇರುವ 30 ಉಳಿಸಿಕೊಳ್ಳಲು ಜೆಡಿಎಸ್ ಹೆಣಗಾಡುತ್ತಿದೆ. ಹವಾಮಾನ ಇಲಾಖೆ ನೀಡುವ ಮಳೆಯ ಲೆಕ್ಕವಾದರೂ ತಪ್ಪಬಹುದು. ಆದರೆ, ಚುನಾವಣೆ ಹತ್ತಿರದಲ್ಲಿರುವಾಗ ಜೆಡಿಎಸ್ ನಾಯಕರ ಕಣ್ಣೀರಿನ ಮಳೆಯ ಲೆಕ್ಕ ಎಂದಿಗೂ ತಪ್ಪದು. ಇಲ್ಲದ ಕಣ್ಣೀರು ಒತ್ತರಿಸಿ ಬರುವುದು ಇಲ್ಲಿ ಸಾಮಾನ್ಯ! ಎಂದು ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಸೋಮನಹಳ್ಳಿಯಲ್ಲಿ ಭಾನುವಾರ ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹಾಗು ಹೆಚ್ ಡಿ ರೇವಣ್ಣ ಕಣ್ಣೀರು ಸುರಿಸಿದ ಘಟನೆಯನ್ನು ವ್ಯಂಗ್ಯ ಮಾಡಿದೆ.
-
ಒಂದೆಡೆ ಜನತಾ ಜಲಧಾರೆ
— BJP Karnataka (@BJP4Karnataka) August 1, 2022 " class="align-text-top noRightClick twitterSection" data="
ಮತ್ತೊಂದೆಡೆ ಕಣ್ಣೀರಧಾರೆ
ಒಟ್ಟಿನಲ್ಲಿ ನೀರೋ, ನೀರು! ಮುಂದಿನ ಚುನಾವಣೆಯ ನಂತರ ಜೆಡಿಎಸ್ ಪಕ್ಷ ಮುಳುಗಲಿದೆ ಎಂಬುದರ ಸೂಚನೆಯಿದು.
ಜೆಡಿಎಸ್ ದೋಣಿಯಲ್ಲಿ ಅಪ್ಪ, ಮಕ್ಕಳು, ಮೊಮ್ಮಕ್ಕಳಷ್ಟೇ ದಡ ಸೇರಬಹುದು, ಮಿಕ್ಕವರು ಮುಳುಗುವುದು ಪಕ್ಕಾ!#ಜೆಡಿಎಸ್‌ಕಣ್ಣೀರೋತ್ಸವ
">ಒಂದೆಡೆ ಜನತಾ ಜಲಧಾರೆ
— BJP Karnataka (@BJP4Karnataka) August 1, 2022
ಮತ್ತೊಂದೆಡೆ ಕಣ್ಣೀರಧಾರೆ
ಒಟ್ಟಿನಲ್ಲಿ ನೀರೋ, ನೀರು! ಮುಂದಿನ ಚುನಾವಣೆಯ ನಂತರ ಜೆಡಿಎಸ್ ಪಕ್ಷ ಮುಳುಗಲಿದೆ ಎಂಬುದರ ಸೂಚನೆಯಿದು.
ಜೆಡಿಎಸ್ ದೋಣಿಯಲ್ಲಿ ಅಪ್ಪ, ಮಕ್ಕಳು, ಮೊಮ್ಮಕ್ಕಳಷ್ಟೇ ದಡ ಸೇರಬಹುದು, ಮಿಕ್ಕವರು ಮುಳುಗುವುದು ಪಕ್ಕಾ!#ಜೆಡಿಎಸ್ಕಣ್ಣೀರೋತ್ಸವಒಂದೆಡೆ ಜನತಾ ಜಲಧಾರೆ
— BJP Karnataka (@BJP4Karnataka) August 1, 2022
ಮತ್ತೊಂದೆಡೆ ಕಣ್ಣೀರಧಾರೆ
ಒಟ್ಟಿನಲ್ಲಿ ನೀರೋ, ನೀರು! ಮುಂದಿನ ಚುನಾವಣೆಯ ನಂತರ ಜೆಡಿಎಸ್ ಪಕ್ಷ ಮುಳುಗಲಿದೆ ಎಂಬುದರ ಸೂಚನೆಯಿದು.
ಜೆಡಿಎಸ್ ದೋಣಿಯಲ್ಲಿ ಅಪ್ಪ, ಮಕ್ಕಳು, ಮೊಮ್ಮಕ್ಕಳಷ್ಟೇ ದಡ ಸೇರಬಹುದು, ಮಿಕ್ಕವರು ಮುಳುಗುವುದು ಪಕ್ಕಾ!#ಜೆಡಿಎಸ್‌ಕಣ್ಣೀರೋತ್ಸವ
ಒಂದೆಡೆ ಜನತಾ ಜಲಧಾರೆ, ಮತ್ತೊಂದೆಡೆ ಕಣ್ಣೀರಧಾರೆ ಒಟ್ಟಿನಲ್ಲಿ ನೀರೋ, ನೀರು! ಮುಂದಿನ ಚುನಾವಣೆಯ ನಂತರ ಜೆಡಿಎಸ್ ಪಕ್ಷ ಮುಳುಗಲಿದೆ ಎಂಬುದರ ಸೂಚನೆಯಿದು. ಜೆಡಿಎಸ್ ದೋಣಿಯಲ್ಲಿ ಅಪ್ಪ, ಮಕ್ಕಳು, ಮೊಮ್ಮಕ್ಕಳಷ್ಟೇ ದಡ ಸೇರಬಹುದು, ಮಿಕ್ಕವರು ಮುಳುಗುವುದು ಪಕ್ಕಾ! ಎಂದು ಜಾತ್ಯತೀತ ಜನತಾದಳ ನಾಯಕರ ಕಾಲೆಳೆದಿದೆ.
ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ಶುಭಾಶಯಗಳು. ನಿಮ್ಮ ಜನತಾ ಜಲಧಾರೆ ಕಾರ್ಯಕ್ರಮವನ್ನು ಮೀರಿಸುವ ರೀತಿ ಇನ್ನೊಂದು ಯೋಜನೆ ರೂಪಿಸಿದ್ದೀರಿ. ಜೆಡಿಎಸ್ ಕಣ್ಣೀರಧಾರೆ ಯಶಸ್ವಿಯಾಗಲಿ! ಎಂದು ಬಿಜೆಪಿ ಕುಟುಕಿದೆ.
ಇದನ್ನೂ ಓದಿ: ಪರದೆ ಮೇಲೆ ತಂದೆಯ ದೃಶ್ಯ ಬರುತ್ತಿದ್ದಂತೆ ಕಣ್ಣೀರು ಹಾಕಿದ್ರು ಹೆಚ್ಡಿಕೆ- ರೇವಣ್ಣ