ETV Bharat / state

ರಾಜಕೀಯದಿಂದ ಸನ್ಯಾಸತ್ವದ ಕಡೆಗೆ ಹೊರಟ ಬಿಎಸ್​ವೈ ಆಪ್ತ ಬಿ.ಜೆ ಪುಟ್ಟಸ್ವಾಮಿ - BJ Puttaswamy latest news

ಬಿಎಸ್​ವೈ ಆಪ್ತ ಬಿ.ಜೆ ಪುಟ್ಟಸ್ವಾಮಿ ಅವರು ಬೆಂಗಳೂರಿನ ಹೊರವಲಯದ ಮಾದನಾಯಕಹಳ್ಳಿಯ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದ ಪ್ರಥಮ ಪೀಠಾಧಿಪತಿಗಳಾಗಲಿದ್ದಾರೆ.

BJ Puttaswamy
ರಾಜಕೀಯದಿಂದ ಸನ್ಯಾಸತ್ವದ ಕಡೆಗೆ ಹೊರಟ ಬಿಎಸ್​ವೈ ಆಪ್ತ ಬಿ.ಜೆ ಪುಟ್ಟಸ್ವಾಮಿ
author img

By

Published : Apr 6, 2022, 7:08 AM IST

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಆಪ್ತ ಬಿ.ಜೆ ಪುಟ್ಟಸ್ವಾಮಿ ರಾಜಕೀಯ ತೊರೆದು ಸನ್ಯಾಸತ್ವ ಸ್ವೀಕರಿಸಲು ಮುಂದಾಗಿದ್ದಾರೆ. ಬೆಂಗಳೂರಿನ ಹೊರವಲಯದ ಮಾದನಾಯಕಹಳ್ಳಿಯ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠದ ಪ್ರಥಮ ಪೀಠಾಧಿಪತಿಯಾಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮಾಜಿ ಸಚಿವ ಹಾಗೂ ಹಾಲಿ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ ಮೇ 6 ರಂದು ಸನ್ಯಾಸ ದೀಕ್ಷೆ ಪಡೆಯಲಿದ್ದು, ಅವರಿಗೆ ಮೇ 15 ರಂದು ಪಟ್ಟಾಭಿಷೇಕ ನೆರವೇರಿಸಲಾಗುತ್ತದೆ. ನೆಲಮಂಗಲ ಸಮೀಪ ಇರುವ ತೈಲೇಶ್ವರ ಗಾಣಿಗರ ಸಂಸ್ಥಾನ ಮಠದ ಪೀಠಾಧಿಪತಿಯಾಗಲಿರುವ ಪುಟ್ಟಸ್ವಾಮಿ ಅವಗೆ ರಾಜರಾಜೇಶ್ವರಿ ಜಯೇಂದ್ರ ಸ್ವಾಮೀಜಿ ದೀಕ್ಷೆ ನೀಡಲಿದ್ದಾರೆ.

ಹಾಲಿ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರಾಗಿರುವ ಪುಟ್ಟಸ್ವಾಮಿ ಸನ್ಯಾಸ ದೀಕ್ಷೆಗೂ ಮುನ್ನ ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ‌. ಪಟ್ಟಾಭಿಷೇಕ ಕಾರ್ಯಕ್ರಮಕ್ಕೆ ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂಗಳಾದ ಬಿ.ಎಸ್​​ ಯಡಿಯೂರಪ್ಪ, ಸಿದ್ದರಾಮಯ್ಯ, ಹೆಚ್.ಡಿ. ಕುಮಾರಸ್ವಾಮಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ರಾಜಕೀಯ ನಾಯಕರಿಗೆ ಆಹ್ವಾನ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ಭದ್ರಾ ಮೇಲ್ದಂಡೆ - ರಾಷ್ಟ್ರೀಯ ಯೋಜನೆಯಾಗಿ ಘೋಷಣೆ: ಗಜೇಂದ್ರ ಸಿಂಗ್ ಶೇಖಾವತ್ ಭರವಸೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.