ETV Bharat / state

ರಾಜ್ಯಕ್ಕೆ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಭೇಟಿ : ನಾಯಕತ್ವ ಬದಲಾವಣೆ ವದಂತಿಗೆ ಬೀಳುತ್ತಾ ಬ್ರೇಕ್? - ಬಿಜೆಪಿ ಪದಾಧಿಕಾರಿಗಳ ಸಭೆ

ನಾಳೆ ಬೆಳಗ್ಗೆ ರಾಜ್ಯ ಪದಾಧಿಕಾರಿಗಳ ಸಭೆ ಮತ್ತು ವಿವಿಧ ಬೈಠಕ್‌ಗಳಲ್ಲಿ ಅರುಣ್ ಸಿಂಗ್ ಭಾಗವಹಿಸಲಿದ್ದಾರೆ. 29ರಂದು ರಾಜ್ಯ ಕಾರ್ಯಕಾರಿ ಸಮಿತಿ ಸಭೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ. ಅಂದು ರಾತ್ರಿ 9.35 ಗಂಟೆಗೆ ಅವರು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ..

bjp-state-charge-arun-singh-to-visit-karnataka-today
ರಾಜ್ಯಕ್ಕೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಭೇಟಿ
author img

By

Published : Dec 27, 2021, 2:06 PM IST

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಷಯ ಮುನ್ನೆಲೆಗೆ ಬಂದಿರುವ ನಡುವೆಯೇ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಆಗಮಿಸುತ್ತಿದ್ದು, ವದಂತಿಗಳಿಗೆ ತೆರೆ ಎಳೆಯಲಿದ್ದಾರೆ ಎನ್ನಲಾಗಿದೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಡಿಸೆಂಬರ್ 29ರವರೆಗೆ ಕರ್ನಾಟಕದಲ್ಲಿ ಪ್ರವಾಸ ಮಾಡಲಿದ್ದಾರೆ. ಇಂದು ಸಂಜೆ 5 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು, ನಿಗದಿತ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಇರುವರು.

ನಾಳೆ ಬೆಳಗ್ಗೆ ರಾಜ್ಯ ಪದಾಧಿಕಾರಿಗಳ ಸಭೆ ಮತ್ತು ವಿವಿಧ ಬೈಠಕ್‌ಗಳಲ್ಲಿ ಅರುಣ್ ಸಿಂಗ್ ಭಾಗವಹಿಸಲಿದ್ದಾರೆ. 29ರಂದು ರಾಜ್ಯ ಕಾರ್ಯಕಾರಿ ಸಮಿತಿ ಸಭೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ. ಅಂದು ರಾತ್ರಿ 9.35 ಗಂಟೆಗೆ ಅವರು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ, ರಾಜ್ಯಾಧ್ಯಕ್ಷರ ಬದಲಾವಣೆ ವಿಷಯ ಚರ್ಚೆಗೆ ಬಂದಿರುವ ನಡುವೆ ಅರುಣ್ ಸಿಂಗ್ ರಾಜ್ಯ ಪ್ರವಾಸಕ್ಕೆ ಆಗಮಿಸುತ್ತಿದ್ದು, ವದಂತಿಗಳಿಗೆಲ್ಲಾ ತೆರೆ ಎಳೆಯಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಬೆಂಗಾವಲು ವಾಹನದ ಎಡವಟ್ಟು, ಬೇರೆ ಮಾರ್ಗದಲ್ಲಿ ತೆರಳಿ ಟ್ರಾಫಿಕ್​ನಲ್ಲಿ ಸಿಲುಕಿದ ಸಿಎಂ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.