ETV Bharat / state

ಬಿಜೆಪಿ ‌ಕಚೇರಿಯಲ್ಲಿ ನಡ್ಡಾ ಜೊತೆ ಮುಖಂಡರ ಸಭೆ: ಉಪಚುನಾವಣೆಗೆ ಭರ್ಜರಿ ತಯಾರಿ - ಅನರ್ಹ ಶಾಸಕರ ಭವಿಷ್ಯ

ಕೇಂದ್ರ ಚುನಾವಣಾ ಆಯೋಗದಿಂದ ಉಪಚುನಾವಣೆಗೆ ಅಧಿಕೃತ ಅಧಿಸೂಚನೆ ಹೊರಬಿದ್ದ ಬಳಿಕ ಬಂದ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ. ನಡ್ಡಾ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಮುಖಂಡರ ಜೊತೆ ಸಭೆ ನಡೆಸಿದ್ದಾರೆ.

ಜೆ.ಪಿ.ನಡ್ಡಾ
author img

By

Published : Sep 22, 2019, 6:43 PM IST

ಬೆಂಗಳೂರು: ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ‌ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ‌. ನಡ್ಡಾ ರಾಜ್ಯಕ್ಕೆ ಆಗಮಿಸಿದ್ದು ಪಕ್ಷದ ಮುಖಂಡರ ಜೊತೆ ಬಿಜೆಪಿ ಕಚೇರಿಯಲ್ಲಿ ಪ್ರತ್ಯೇಕ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಜ್ಯ ಬಿಜೆಪಿ ಉಸ್ತುವಾರಿ ಪಿ.ಮುರಳೀಧರ ರಾವ್, ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಭಾಗಿಯಾಗಿದ್ದರು. ರಾಜ್ಯದಲ್ಲಿ ಪಕ್ಷದ ಸಂಘಟನೆ, ಸದಸ್ಯತ್ವ ಅಭಿಯಾನ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಬಿಜೆಪಿ ‌ಕಚೇರಿಯಲ್ಲಿ ಜೆ.ಪಿ.ನಡ್ಡಾ ಜೊತೆ ಮುಖಂಡರ ಸಭೆ

ಸಭೆಯಲ್ಲಿ ಅನರ್ಹ ಶಾಸಕರ ವಿಚಾರವೂ ಪ್ರಸ್ತಾಪವಾಗಿದೆ. ನಾಳೆ ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ಏನಾಗುತ್ತೆ ಅಂತ ನೋಡೋಣ. ಬಳಿಕ ಟಿಕೆಟ್ ಬಗ್ಗೆ ನಿರ್ಧರಿಸೋಣ. ಕೋರ್ಟ್ ಅನರ್ಹರ ಪರ ತೀರ್ಪು ಕೊಡದಿದ್ದರೆ, ಮುಂದಿನ ಕ್ರಮದ ಬಗ್ಗೆ ಅಮಿತ್ ಶಾ ಜತೆ ಚರ್ಚಿಸುತ್ತೇನೆ ಎಂದು ನಡ್ಡಾ ತಿಳಿಸಿದ್ದಾರೆ ಎನ್ನಲಾಗಿದೆ.

ಸಭೆಯಲ್ಲಿ ಉಪ ಚುನಾವಣೆಗೆ ಸಜ್ಜಾಗಲು ಕಟೀಲ್​ಗೆ ಜೆ.ಪಿ ನಡ್ಡಾ ಸೂಚನೆ ನೀಡಿದ್ದಾರೆ. ಕಾರ್ಯಕರ್ತರ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಬೇಕು. ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ನೇಮಿಸಬೇಕು. ಯಾವುದೇ ಕಾರಣಕ್ಕೂ ಉಪ ಚುನಾವಣೆ ನಿರ್ಲಕ್ಷ್ಯ ಮಾಡಬೇಡಿ. ನೀವು ಅಧ್ಯಕ್ಷರಾದ ಬಳಿಕ ಮೊದಲ ಚುನಾವಣೆ ಇದಾಗಿದೆ‌‌ ಎಂದು ಸಲಹೆ ನೀಡಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಸಿಎಂ, ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಉಪಚುನಾವಣೆ:

ಸಿಎಂ ಯಡಿಯೂರಪ್ಪ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇಬ್ಬರ ನೇತೃತ್ವದಲ್ಲಿಯೂ ಉಪ ಚುನಾವಣೆ ನಡೆಯಲಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.

ಉಪ ಚುನಾವಣೆಯಲ್ಲಿ ಯಾರು ಕಣಕ್ಕಿಳಿಯಬೇಕು ಎಂಬುದು ಸುಪ್ರೀಂಕೋರ್ಟ್ ತೀರ್ಪಿನ ನಂತರ ತಿಳಿಯಲಿದೆ. ಕೆಲವರು ಉಪ ಚುನಾವಣೆಗೆ ತಡೆಯಾಜ್ಞೆ ತರುವ ಪ್ರಯತ್ನವನ್ನೂ ಮಾಡಲಿದ್ದಾರೆ. ಆದ್ರೆ ಯಡಿಯೂರಪ್ಪ ದೆಹಲಿಯಿಂದ ಬಂದ ಬಳಿಕ ಸ್ಪಷ್ಟ ಚಿತ್ರಣ ದೊರೆಯಲಿದೆ.‌
ಬಿಜೆಪಿ ಚುನಾವಣೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಯಡಿಯೂರಪ್ಪ ದೆಹಲಿಗೆ ತೆರಳಿದ್ದಾರೆ. ಅಲ್ಲಿ ರಾಷ್ಟ್ರೀಯ ನಾಯಕರ ಜೊತೆಗೆ ಏನು ಚರ್ಚೆ ಮಾಡಿದ್ದಾರೆ ಗೊತ್ತಿಲ್ಲ. ಯಡಿಯೂರಪ್ಪ ಬಂದ ನಂತರ ಅವರ ಜೊತೆಗೆ ನಾನೂ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.

ತೇಜಸ್ವಿ ಬಗ್ಗೆ ಮಾಹಿತಿ ಪಡೆದ ನಡ್ಡಾ?:

ಬಿಜೆಪಿ‌ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಂಸದ ತೇಜಸ್ವಿ ಸೂರ್ಯರ ಬಗ್ಗೆ ರಾಷ್ಟ್ರೀಯ ಬಿಜೆಪಿ ಕಾರ್ಯಾಧ್ಯಕ್ಷ ನಡ್ಡಾ ಮಾಹಿತಿ‌ ಪಡೆದುಕೊಂಡಿದ್ದಾರೆ ಎನ್ನಲಾಗಿದೆ‌.
ನಳಿನ್ ಕುಮಾರ್ ಕಟೀಲ್ ರಿಂದ ತೇಜಸ್ವಿ ಸೂರ್ಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಮಾಹಿತಿ ಪಡೆದ ಹಿಂದಿನ ಉದ್ದೇಶ ಏನು ಎಂಬುದು ತಿಳಿದುಬಂದಿಲ್ಲ.

Intro:Body:KN_BNG_02_BJPOFFICE_JPNADDAMEETNG_SCRIPT_7201951

ಜೆ.ಪಿ.ನಡ್ಡಾ ಜತೆ ಬಿಜೆಪಿ ‌ಕಚೇರಿಯಲ್ಲಿ ಸಭೆ; ಉಪಚುನಾವಣೆಗೆ ಸಜ್ಜಾಗುವಂತೆ‌ ಸೂಚನೆ

ಬೆಂಗಳೂರು: ರಾಷ್ಟ್ರೀಯ ಬಿಜೆಪಿ‌ ಕಾರ್ಯಾಧ್ಯಕ್ಷ ಜೆ.ಪಿ‌. ನಡ್ಡಾ ಬಿಜೆಪಿ ಕಚೇರಿಯಲ್ಲಿ ಪ್ರತ್ಯೇಕ ಸಭೆ ನಡೆಸಿದರು.

ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಜ್ಯ ಬಿಜೆಪಿ ಉಸ್ತುವಾರಿ ಪಿ.ಮುರಳೀಧರ ರಾವ್, ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಭಾಗಿಯಾಗಿದ್ದರು. ಸಭೆಯಲ್ಲಿ ರಾಜ್ಯದಲ್ಲಿ ಪಕ್ಷದ ಸಂಘಟನೆ, ಸದಸ್ಯತ್ವ ಅಭಿಯಾನ ಬಗ್ಗೆ ಚರ್ಚೆ ನಡೆಸಿದ್ದಾರೆ.

ಸಭೆಯಲ್ಲಿ ಅನರ್ಹ ಶಾಸಕರ ವಿಚಾರವೂ ಪ್ರಸ್ತಾಪಿಸಲಾಯಿತು. ನಾಳೆ ಸುಪ್ರೀಂಕೋರ್ಟ್ ನಲ್ಲಿ ಏನಾಗುತ್ತೆ ಅಂತ ನೋಡೋಣ. ಬಳಿಕ ಟಿಕೆಟ್ ಬಗ್ಗೆ ನಿರ್ಧರಿಸೋಣ. ಸುಪ್ರೀಂಕೋರ್ಟ್ ಅನರ್ಹರ ಪರ ತೀರ್ಪು ಕೊಡದಿದ್ದರೆ, ಏನು ಮಾಡೋದು ಅಂತ ಅಮಿತ್ ಶಾ ಜತೆ ಚರ್ಚಿಸುತ್ತೇನೆ ಎಂದು ನಡ್ಡಾ ತಿಳಿಸಿದ್ದಾರೆ ಎನ್ನಲಾಗಿದೆ.

ಸಭೆಯಲ್ಲಿ ಉಪ ಚುನಾವಣೆಗೆ ಸಜ್ಜಾಗಲು ಕಟೀಲ್ ಗೆ ಜೆ.ಪಿ ನಡ್ಡಾ ಸೂಚನೆ ನೀಡಿದ್ದಾರೆ. ಕಾರ್ಯಕರ್ತರ ಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಬೇಕು. ಬೂತ್ ಮಟ್ಟದಲ್ಲಿ ಬಿಜೆಪಿ ಕಾರ್ಯಕರ್ತರನ್ನು ನೇಮಿಸಬೇಕು. ಯಾವುದೇ ಕಾರಣಕ್ಕೂ ಉಪ ಚುನಾವಣೆ ನಿರ್ಲಕ್ಷ್ಯ ಮಾಡಬೇಡಿ. ನೀವು ಅಧ್ಯಕ್ಷರಾದ ಬಳಿಕ ಮೊದಲ ಚುನಾವಣೆ ಇದಾಗಿದೆ‌‌ ಎಂದು ಸಲಹೆ ನೀಡಿದ್ದಾರೆ.

ಸಿಎಂ, ರಾಜ್ಯಾಧ್ಯಕ್ಷ ನೇತೃತ್ವದಲ್ಲಿ ಉಪಚುನಾವಣೆ:

ಸಿಎಂ ಯಡಿಯೂರಪ್ಪ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇಬ್ಬರ ನೇತೃತ್ವದಲ್ಲಿಯೂ ಉಪ ಚುನಾವಣೆ ನಡೆಯಲಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.

ಉಪ ಚುನಾವಣೆಯಲ್ಲಿ ಯಾರು ಕಣಕ್ಕಿಳಿಯಬೇಕು ಎಂಬುದು ಸುಪ್ರೀಂ ಕೋರ್ಟ್ ತೀರ್ಪಿನ ನಂತರ ತಿಳಿಯಲಿದೆ. ನಾಳೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಇದೆ. ಕೆಲವರು ಉಪ ಚುನಾವಣೆಗೆ ತಡೆಯಾಜ್ಞೆ ತರುವ ಪ್ರಯತ್ನವನ್ನೂ ಮಾಡಲಿದ್ದಾರೆ. ಆದ್ರೆ ಯಡಿಯೂರಪ್ಪ ದೆಹಲಿಯಿಂದ ಬಂದ ಬಳಿಕ ಸ್ಪಷ್ಟ ಚಿತ್ರಣ ದೊರೆಯಲಿದೆ.‌ ಬಿಜೆಪಿ ಚುನಾವಣೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದೆ. ಯಡಿಯೂರಪ್ಪನವರು ದೆಹಲಿಗೆ ತೆರಳಿದ್ದಾರೆ. ಅಲ್ಲಿ ರಾಷ್ಟ್ರೀಯ ನಾಯಕರ ಜೊತೆಗೆ ಏನು ಚರ್ಚೆ ಮಾಡಿದ್ದಾರೆ ಗೊತ್ತಿಲ್ಲ. ಯಡಿಯೂರಪ್ಪ ಬಂದ ನಂತರ ಅವರ ಜೊತೆಗೆ ನಾನೂ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.

ತೇಜಸ್ವಿ ಬಗ್ಗೆ ಮಾಹಿತಿ ಪಡೆದ ನಡ್ಡಾ?:

ಬಿಜೆಪಿ‌ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಂಸದ ತೇಜಸ್ವಿ ಸೂರ್ಯರ ಬಗ್ಗೆ ರಾಷ್ಟ್ರೀಯ ಬಿಜೆಪಿ ಕಾರ್ಯಾಧ್ಯಕ್ಷ ನಡ್ಡಾ ಮಾಹಿತಿ‌ ಪಡೆದುಕೊಂಡಿದ್ದಾರೆ ಎನ್ನಲಾಗಿದೆ‌.

ನಳಿನ್ ಕುಮಾರ್ ಕಟೀಲ್ ರಿಂದ ತೇಜಸ್ವಿ ಸೂರ್ಯ ಬಗ್ಗೆ ಮಾಹಿತಿ ಪಡೆದಿದ್ದಾರೆ. ಬಿಜೆಪಿ ಕಚೇರಿಯಿಂದ ವಾಪಸು ಹೋಗುವಾಗ ತೇಜಸ್ವಿ ಸೂರ್ಯರ ಮಾಹಿತಿ‌‌ ಪಡೆದಿದ್ದಾರೆ ಎನ್ನಲಾಗಿದೆ. ತೇಜಸ್ವಿ ಸೂರ್ಯ ಬಗ್ಗೆ ಮಾಹಿತಿ ಪಡೆದ ಹಿಂದಿನ ಉದ್ದೇಶ ಏನು ಎಂಬುದು ತಿಳಿದುಬಂದಿಲ್ಲ.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.