ಬೆಂಗಳೂರು: ಬಿಜೆಪಿಯವರು ಹಣದ ಆಮಿಷವೊಡ್ಡಿದ್ದರು ಎಂದು ಈಗ ಆರೋಪ ಮಾಡುತ್ತಿರುವ ಜೆಡಿಎಸ್ ಶಾಸಕ ಕೆ. ಮಹದೇವ ಅವರು ಇಷ್ಟು ದಿನ ಸಿದ್ದರಾಮಯ್ಯ ಅವರ ಪಕ್ಕ ನಿದ್ದೆ ಮಾಡುತ್ತಿದ್ದರಾ, ಇಲ್ಲಾ ಮುಖ್ಯಮಂತ್ರಿ ಕುಮಾರಸ್ವಾಮಿ ಜೊತೆ ತಾರಾ ಹೋಟೆಲ್ನಲ್ಲಿ ಊಟ ಮಾಡುತ್ತಿದ್ದರಾ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ವ್ಯಂಗ್ಯವಾಡಿದ್ದಾರೆ.
ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಪರೇಷನ್ ಕಮಲಕ್ಕೆ ಬಿಜೆಪಿ ಹಣದ ಹೊಳೆ ಹರಿಸುತ್ತಿದೆ ತಮಗೂ 40 ಕೋಟಿ ಹಣ ನೀಡುವ ಆಫರ್ ನೀಡಲಾಗಿತ್ತು ಎಂದು ಪಿರಿಯಾಪಟ್ಟಣ ಶಾಸಕ ಕೆ. ಮಹದೇವ ಮಾಡಿರುವ ಆರೋಪವನ್ನು ಸಂಪೂರ್ಣವಾಗಿ ತಳ್ಳಿಹಾಕಿ
ಇದು ನಿರಾಧಾರ ಆರೋಪ ಎಂದು ಸ್ಪಷ್ಟಪಡಿಸಿದರು.
ರಾಜ್ಯದಲ್ಲಿ ಬಿಜೆಪಿಯಿಂದ ಯಾವುದೇ ಆಪರೇಷನ್, ಇಂಜೆಕ್ಷನ್, ಟ್ಯಾಬ್ಲೆಟ್ ಇಲ್ಲ. ಬಿಜೆಪಿ ಬಗ್ಗೆ ಮಾತನಾಡುವ ಬದಲು ತಮ್ಮ ಪಕ್ಷದಲ್ಲಿ ಏನಾಗುತ್ತಿದೆ ಎಂದು ನೋಡಿಕೊಳ್ಳಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ರವಿಕುಮಾರ್ ಟಾಂಗ್ ನೀಡಿದ್ದಾರೆ.