ETV Bharat / state

ಜ.3ರಂದು ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆ - ಬೆಂಗಳೂರು ಇತ್ತೀಚಿನ ಸುದ್ದಿ

ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆಯು ಶಿವಮೊಗ್ಗದ ಪೆಸಿಟ್ ಕಾಲೇಜಿನ ಆವರಣದಲ್ಲಿ ಜನವರಿ 3ರಂದು ನಡೆಯಲಿದೆ ಎಂದು ರಾಜ್ಯ ಉಪಾಧ್ಯಕ್ಷ ನಿರ್ಮಲ್‌ಕುಮಾರ್ ಸುರಾನಾ ತಿಳಿಸಿದ್ದಾರೆ.

ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆ
ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆ
author img

By

Published : Jan 1, 2021, 5:27 PM IST

ಬೆಂಗಳೂರು: ಭಾರತೀಯ ಜನತಾ ಪಕ್ಷದ ರಾಜ್ಯ ವಿಶೇಷ ಕಾರ್ಯಕಾರಿಣಿ ಸಭೆಯು ಜನವರಿ 3ರಂದು ಶಿವಮೊಗ್ಗದ ಪೆಸಿಟ್ ಕಾಲೇಜಿನ ಆವರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ನೇತೃತ್ವದಲ್ಲಿ ನಡೆಯಲಿದೆ.

ಜನವರಿ 2ರಂದು ಪಕ್ಷದ ಕೋರ್ ಕಮಿಟಿ ಸಭೆ ನಡೆಯಲಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ನಿರ್ಮಲ್‌ಕುಮಾರ್ ಸುರಾನಾ ತಿಳಿಸಿದ್ದು, ರಾಜ್ಯ ಪ್ರಭಾರಿ ಅರುಣ್ ಸಿಂಗ್ ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ. ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಸಭೆಯಲ್ಲಿ ಪಕ್ಷದ ರಾಜ್ಯ ಪದಾಧಿಕಾರಿಗಳು, ಪ್ರಕೋಷ್ಠಗಳ ಸಂಚಾಲಕರು, ಜಿಲ್ಲಾಧ್ಯಕ್ಷರು, ವಿಭಾಗ ಪ್ರಭಾರಿಗಳು ಸೇರಿದಂತೆ ಒಟ್ಟು 180 ಜನರು ಭಾಗವಹಿಸಲಿದ್ದಾರೆ. ಪಕ್ಷ ಸಂಘಟನೆ ದೃಷ್ಟಿಯಿಂದ ಪ್ರತಿ ತಿಂಗಳು ಒಂದೊಂದು ಜಿಲ್ಲೆಯಲ್ಲಿ ವಿಶೇಷ ಸಭೆ ನಡೆಸಬೇಕು ಎನ್ನುವ ನಿಯಮ ಜಾರಿಗೆ ತರಲಾಗಿದ್ದು, ನವೆಂಬರ್​ನಲ್ಲಿ ಮಂಗಳೂರು, ಡಿಸೆಂಬರ್​ನಲ್ಲಿ ಬೆಳಗಾವಿಯಲ್ಲಿ ವಿಶೇಷ ಸಭೆ ನಡೆದಿದ್ದು ಜನವರಿ ತಿಂಗಳ ಸಭೆ ಶಿವಮೊಗ್ಗದಲ್ಲಿ ನಡೆಯುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.