ETV Bharat / state

ಅಂಬೇಡ್ಕರ್, ಕುವೆಂಪು, ಕೆಂಪೇಗೌಡರ ಪಠ್ಯ ಬೇಡವೆಂದು ಕಾಂಗ್ರೆಸ್ ಹೋರಾಟ ಮಾಡುತ್ತಿದೆಯೇ?.. #ಉತ್ತರಿಸಿಕಾಂಗ್ರೆಸ್​ - ಉತ್ತರಿಸಿ ಕಾಂಗ್ರೆಸ್ ಹ್ಯಾಷ್ ಟ್ಯಾಗ್​ನೊಂದಿಗೆ ಸರಣಿ ಟ್ವಿಟ್ ಮಾಡಿರುವ ಬಿಜೆಪಿ

ಮುಡಂಬಡಿತ್ತಾಯ ಸಮಿತಿ ಪರಿಷ್ಕರಿಸಿದ ಪಠ್ಯಗಳಲ್ಲಿ, ರಾಷ್ಟ್ರಕವಿ ಕುವೆಂಪು ಅವರ ಬಗ್ಗೆ 8 ಪಾಠಗಳಿದ್ದವು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅದಕ್ಕೂ ಕತ್ತರಿ ಹಾಕಲಾಯಿತು. ಆದರೆ, ಬಿಜೆಪಿ ಸರ್ಕಾರ ನೇಮಿಸಿದ ಸಮಿತಿ ಕುವೆಂಪು ಅವರ 10 ಪಾಠ ಅಳವಡಿಸಿದೆ. ಕಾಂಗ್ರೆಸ್ ಪ್ರತಿಭಟನೆ ಕುವೆಂಪು ವಿರುದ್ಧವೇ? ಎಂದು ಕೈ ನಾಯಕರಿಗೆ ಟ್ವಿಟ್ ಮೂಲಕ ಬಿಜೆಪಿ ಪ್ರಶ್ನಿಸಿದೆ.

ಅಂಬೇಡ್ಕರ್, ಕುವೆಂಪು, ಕೆಂಪೇಗೌಡರ ಪಠ್ಯ ಬೇಡವೆಂದು ಕಾಂಗ್ರೆಸ್ ಹೋರಾಟ ಮಾಡುತ್ತಿದೆಯೇ?

author img

By

Published : Jun 9, 2022, 5:45 PM IST

ಬೆಂಗಳೂರು: ಪಠ್ಯ ಪರಿಷ್ಕರಣೆ ವೇಳೆ ಸೇರ್ಪಡೆ ಮಾಡಿರುವ ಬಾಬಾ ಸಾಹೇಬ್ ಅಂಬೇಡ್ಕರ್, ರಾಷ್ಟ್ರಕವಿ ಕುವೆಂಪು, ನಾಡಪ್ರಭು ಕೆಂಪೇಗೌಡ, ರಾಣಿ ಚೆನ್ನಮ್ಮ, ಒನಕೆ ಓಬವ್ವ, ಸ್ವಾಮಿ ವಿವೇಕಾನಂದರ ಪಠ್ಯ ಬೇಡ ಎಂದು ಕಾಂಗ್ರೆಸ್ ಹೋರಾಟ ನಡೆಸುತ್ತಿದೆಯೇ ಎಂದು ಸರಣಿ ಟ್ವಿಟ್ ಮೂಲಕ ಕಾಂಗ್ರೆಸ್ ನಾಯಕರನ್ನು ಬಿಜೆಪಿ ತರಾಟೆಗೆ ತೆಗೆದುಕೊಂಡಿದೆ.

ಉತ್ತರಿಸಿ ಕಂಗ್ರೆಸ್​ ಎಂಬ ಹ್ಯಾಷ್ ಟ್ಯಾಗ್​ನೊಂದಿಗೆ ಸರಣಿ ಟ್ವಿಟ್ ಮಾಡಿರುವ ಬಿಜೆಪಿ, ಹಿಂದಿನ ಪಠ್ಯಕ್ರಮ ಮುಂದುವರೆಸುವಂತೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಹತ್ತನೇ ತರಗತಿಯ ಪಠ್ಯಪುಸ್ತಕದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಬಗ್ಗೆ ಇದ್ದ ಪಾಠವನ್ನು ಕಾಂಗ್ರೆಸ್ ಸರ್ಕಾರ ನೇಮಿಸಿದ ಸಮಿತಿ ತೆಗೆದುಹಾಕಿತ್ತು. ಇದನ್ನು ಸಮರ್ಥಿಸಿ ಪ್ರತಿಭಟನೆ ಮಾಡುತ್ತಿದ್ದೀರಾ? ಎಂದು ಪ್ರಶ್ನಿಸಿದೆ.

ಮುಡಂಬಡಿತ್ತಾಯ ಸಮಿತಿ ಪರಿಷ್ಕರಿಸಿದ ಪಠ್ಯಗಳಲ್ಲಿ, ರಾಷ್ಟ್ರಕವಿ ಕುವೆಂಪು ಅವರ ಬಗ್ಗೆ 8 ಪಾಠಗಳಿದ್ದವು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅದಕ್ಕೂ ಕತ್ತರಿ ಹಾಕಲಾಯಿತು. ಆದರೆ, ಬಿಜೆಪಿ ಸರ್ಕಾರ ನೇಮಿಸಿದ ಸಮಿತಿ ಕುವೆಂಪು ಅವರ 10 ಪಾಠಗಳನ್ನು ಅಳವಡಿಸಿದೆ. ಕಾಂಗ್ರೆಸ್ ಪ್ರತಿಭಟನೆ ಕುವೆಂಪು ವಿರುದ್ಧವೇ? ಎಂದು ಕೈ ನಾಯಕರಿಗೆ ಟ್ವಿಟ್ ಮೂಲಕ ಬಿಜೆಪಿ ತಿವಿದಿದೆ.

ನವ ಬೆಂಗಳೂರಿನ ನಿರ್ಮಾತೃ, ನಾಡಪ್ರಭು ಕೆಂಪೇಗೌಡ ಅವರ ಬಗ್ಗೆ ಇದ್ದ ಪಠ್ಯವನ್ನು ಕಾಂಗ್ರೆಸ್ ಸರ್ಕಾರ ತೆಗೆದುಹಾಕಿತ್ತು. ಈಗ ಅದೇ ಹಿಂದಿನ ಪಠ್ಯ ಮುಂದುವರೆಸುವಂತೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದೆ. ಅಂದರೆ ಪಠ್ಯಪುಸ್ತಕದಲ್ಲಿ ಕೆಂಪೇಗೌಡರ ಚರಿತ್ರೆ ಇರಬಾರದೇ? ಭೂಕಂದಾಯದ ಪತ್ರಗಳಲ್ಲಿದ್ದ ಕನ್ನಡವನ್ನು ತೆಗೆದು ಪರ್ಷಿಯನ್ ಭಾಷೆ ಹೇರಿದ ಟಿಪ್ಪು ಬಗ್ಗೆ ಕನ್ನಡ ಭಾಷಾಭಿಮಾನಿ ಎಂದು ಬರಗೂರು ಸಮಿತಿ ವೈಭವಿಕರಿಸಿತ್ತು. ಇದನ್ನು ಸಮರ್ಥಿಸುವ ಸಲುವಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆಯೇ? ಎಂದು ಸರಣಿ ಟ್ವಿಟ್ ಮೂಲಕ ಕಾಂಗ್ರೆಸ್ ನಾಯಕರನ್ನು ಬಿಜೆಪಿ ಕುಟುಕಿದೆ.

ನಾಡಿನ ಹೆಮ್ಮೆಯ ಸಂಗೊಳ್ಳಿ ರಾಯಣ್ಣ, ರಾಣಿ ಚೆನ್ನಮ್ಮ ಹಾಗೂ ಒನಕೆ ಓಬವ್ವ ಅವರ ಪಾಠಗಳನ್ನು ನಿಮ್ಮದೇ ಸರ್ಕಾರ ನೇಮಿಸಿದ್ದ ಸಮಿತಿ ಪಠ್ಯದಿಂದ ತೆಗೆದುಹಾಕಿತ್ತು. ಇದನ್ನು ಬೆಂಬಲಿಸಿ ಇಂದು ಪ್ರತಿಭಟನೆ ಮಾಡುತ್ತಿದ್ದೀರಾ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಬಿಜೆಪಿ ಪ್ರಶ್ನಿಸಿದ್ದು, ದೇಶಕ್ಕಾಗಿ ಬಲಿದಾನ ಮಾಡಿದ ಹುತಾತ್ಮ ಯೋಧ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಅವರ ಪಾಠವನ್ನು ಮುಡಂಬಡಿತ್ತಾಯ ಸಮಿತಿ ಪಠ್ಯದಲ್ಲಿ ಸೇರಿಸಿತ್ತು. ಆದರೆ, ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಈ ಪಠ್ಯವನ್ನು ಕಿತ್ತು ಹಾಕಿತ್ತು. ಇದನ್ನು ಸಮರ್ಥಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆಯೇ? ಎಂದು ಟ್ವಿಟ್ ಮಾಡಿದೆ.

ಭಾರತದ ಹಿರಿಮೆಯನ್ನು ಜಗತ್ತಿಗೆ ಪರಿಚಯಿಸಿದ ಸಿಡಿಲ ಸಂತ ಸ್ವಾಮಿ ವಿವೇಕಾನಂದ ಅವರ ಪಠ್ಯವನ್ನು ಮಕ್ಕಳಿಗೆ ಪ್ರೇರಣೆಯಾಗಲೆಂದು ಸೇರಿಸಲಾಗಿತ್ತು. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಅದಕ್ಕೂ ಕತ್ತರಿ ಹಾಕಲಾಯಿತು. ವಿವೇಕಾನಂದರ ಪಠ್ಯ ಬೇಡವೇ ಬೇಡ ಎಂದು ಕಾಂಗ್ರೆಸ್ ಪ್ರತಿಭಟಿಸುತ್ತಿದೆಯೇ? ನಾಡ ಕಟ್ಟುವಲ್ಲಿ ಮೈಸೂರು ಮಹಾರಾಜರ ಪಾತ್ರ ಅತ್ಯಂತ ಸ್ಮರಣೀಯ. ಕಾಂಗ್ರೆಸ್ಸಿಗರೇ, ಕರುನಾಡಿಗೆ ಭದ್ರಬುನಾದಿ ಹಾಕಿಕೊಟ್ಟ ಒಡೆಯರ ವಂಶಸ್ಥರನ್ನು ಪಠ್ಯದಲ್ಲಿ ಅಳವಡಿಸಿರುವುದರನ್ನು ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದೀರಾ? ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಟೀಕಾಪ್ರಹಾರ ನಡೆಸಿದೆ.

ಇದನ್ನೂ ಓದಿ : ಸಿಎಂ ನಿವಾಸದಲ್ಲಿ ಬಿಜೆಪಿ ನಾಯಕರ ಮಹತ್ವದ ಸಭೆ: 3ನೇ ಅಭ್ಯರ್ಥಿ ಗೆಲ್ಲಿಸುವ ಕುರಿತು ಚರ್ಚೆ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.