ETV Bharat / state

ಸಿಡಿ ಕೇಸ್​ನಲ್ಲಿ ಡಿಕೆಶಿ ಸಿಲುಕಿಸಲು ಶ್ರಮಿಸುತ್ತಿರುವ ಸಿದ್ದರಾಮಯ್ಯಗೆ ಶುಭವಾಗಲಿ: ಬಿಜೆಪಿ ವ್ಯಂಗ್ಯ - ಸಿಡಿ ಕೇಸ್

ಸಿಎಂ ಆಗುವ ಕನಸಿಗೆ ತೊಡಕಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಅವರನ್ನು ಮಣಿಸಲು ಸಿದ್ದರಾಮಯ್ಯ ಅವರಿಗೆ ಇದೊಂದು ಸದಾವಕಾಶ. ಸಿಡಿ ಪ್ರಕರಣದಲ್ಲಿ ಡಿಕೆಶಿ ಅವರನ್ನು ಸಿಲುಕಿಸಲು ಶ್ರಮಿಸುತ್ತಿರುವ ಸಿದ್ದರಾಮಯ್ಯಗೆ ಶುಭವಾಗಲಿ ಎಂದು ಬಿಜೆಪಿ ವ್ಯಂಗ್ಯವಾಡಿದೆ.

bjp
ಬಿಜೆಪಿ
author img

By

Published : Apr 5, 2021, 6:36 PM IST

ಬೆಂಗಳೂರು: ಮೇಟಿ ಪ್ರಕರಣದಲ್ಲಿ ಸಂತ್ರಸ್ತೆ ಪ್ರಕರಣ ದಾಖಲಿಸಿದರೂ ಎಫ್‌ಐಆರ್ ಕೂಡಾ ಮಾಡಿರಲಿಲ್ಲ, ವಿಚಾರಣೆ ಕೂಡಾ ನಡೆಸಿರಲಿಲ್ಲ. ‌ಈಗ ಕೆಪಿಸಿಸಿ ಧ್ವನಿ ಎತ್ತುತ್ತಿರುವುದು ಸಂತ್ರಸ್ತೆಗಾಗಿ ಅಲ್ಲ, ಸಿದ್ದರಾಮಯ್ಯಗಾಗಿ. ಡಿ.ಕೆ. ಶಿವಕುಮಾರ್ ಸಿಲುಕಿಸಲು ಸಿದ್ದರಾಮಯ್ಯ ಪಕ್ಷದ ಅಧಿಕೃತ ಟ್ವಿಟ್ಟರ್‌ ಖಾತೆ ಬಳಸಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಟ್ವೀಟ್ ಮೂಲಕ ಕಾಂಗ್ರೆಸ್ ಕಾಲೆಳೆದಿದೆ.

  • ಮೇಟಿ ಪ್ರಕರಣದಲ್ಲಿ ಸಂತ್ರಸ್ಥೆ ಪ್ರಕರಣ ದಾಖಲಿಸಿದರೂ ಎಫ್‌ಐಆರ್ ಕೂಡಾ ಮಾಡಿರಲಿಲ್ಲ, ವಿಚಾರಣೆ ಕೂಡಾ ನಡೆಸಿರಲಿಲ್ಲ.

    ಈಗ @INCKarnataka ಧ್ವನಿ ಎತ್ತುತ್ತಿರುವುದು ಸಂತ್ರಸ್ಥೆಗಾಗಿ ಅಲ್ಲ, ಸಿದ್ದರಾಮಯ್ಯಗಾಗಿ.@DKShivakumar ಸಿಕ್ಕಿಸಿ ಹಾಕಲು @siddaramaiah ಪಕ್ಷದ ಅಧಿಕೃತ ಟ್ವಿಟರ್‌ ಖಾತೆ ಬಳಸಿಕೊಳ್ಳುತ್ತಿದ್ದಾರೆ.#DKSvsSiddu

    — BJP Karnataka (@BJP4Karnataka) April 5, 2021 " class="align-text-top noRightClick twitterSection" data=" ">

ಸದನದಲ್ಲಿ ಸಿಡಿ ಪ್ರಕರಣ ಪ್ರಸ್ತಾಪಿಸುವಾಗ ಡಿ.ಕೆ. ಶಿವಕುಮಾರ್ ಹೆಸರು ಪ್ರಕರಣದಲ್ಲಿ ಪ್ರಸ್ತಾಪವಾಗಿರಲಿಲ್ಲ. ಹೀಗಾಗಿ ಸದನದಲ್ಲಿ ಡಿಕೆಶಿ ಹಾಗೂ ಸಿದ್ದರಾಮಯ್ಯ ರೋಷಾವೇಶ ಪ್ರದರ್ಶಿಸಿದರು. ಈಗ ಷಡ್ಯಂತ್ರದಲ್ಲಿ ಡಿಕೆಶಿ ಹೆಸರು ಕೇಳಿ ಬರುತ್ತಿದೆ. ಡಿಕೆಶಿ ಮೌನವಾಗಿದ್ದಾರೆ. ಸಿದ್ದರಾಮಯ್ಯ ಮತ್ತೆ ಮತ್ತೆ ಕೆದಕುತ್ತಿದ್ದಾರೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಸಿಡಿ ಪ್ರಕರಣದಲ್ಲಿ ಡಿ.ಕೆ. ಶಿವಕುಮಾರ್ ಅವರ ಹೆಸರು ತಳುಕು ಹಾಕಿಕೊಳ್ಳುತ್ತಲೇ ಸಿದ್ದರಾಮಯ್ಯ ಬಣ ಎಚ್ಚೆತ್ತುಕೊಂಡಿದೆ. ಸಿಎಂ ಆಗುವ ಕನಸಿಗೆ ತೊಡಕಾಗಿರುವ ಡಿಕೆಶಿ ಅವರನ್ನು ಮಣಿಸಲು ಸಿದ್ದರಾಮಯ್ಯ ಅವರಿಗೆ ಇದೊಂದು ಸದಾವಕಾಶ. ಈ ಪ್ರಕರಣದಲ್ಲಿ ಡಿಕೆಶಿ ಅವರನ್ನು ಸಿಲುಕಿಸಲು ಶ್ರಮಿಸುತ್ತಿರುವ ಸಿದ್ದರಾಮಯ್ಯಗೆ ಶುಭವಾಗಲಿ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಓದಿ: ಬಿಜೆಪಿ ಆಡಳಿತದ ನಿಜಬಣ್ಣ ತಿಳಿಯಲು ಸಿಡಿ ಪ್ರಕರಣ ಒಂದೇ ಸಾಕು: ಕಾಂಗ್ರೆಸ್ ಲೇವಡಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.