ETV Bharat / state

ಬೆಂಕಿ ಇಲ್ಲದೆ ಹೊಗೆಯಾಡಲ್ಲ, ಪಕ್ಷ ತೊರೆದವರ ವಿರುದ್ಧ ಕಾಂಗ್ರೆಸ್ ಹಗೆ ಸಾಧಿಸುತ್ತಿದೆ: ಬಿಜೆಪಿ

author img

By

Published : Mar 16, 2021, 3:10 PM IST

ಪಕ್ಷ ತೊರೆದವರ ವಿರುದ್ಧ ಕಾಂಗ್ರೆಸ್ ಹಗೆತನ ಸಾಧಿಸುತ್ತಿದೆ ಎಂದು ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ಕಾಂಗ್ರೆಸ್​ ಪಕ್ಷದ ವಿರುದ್ಧ ಬಿಜೆಪಿ ಆರೋಪಿಸಿ ಟ್ವೀಟ್​ ಮಾಡಿದೆ.

bjp tweet against congress
ಬಿಜೆಪಿ ಟ್ವೀಟ್

ಬೆಂಗಳೂರು: ಪಕ್ಷ ತೊರೆದವರ ವಿರುದ್ಧ ಕಾಂಗ್ರೆಸ್ ಹಗೆತನ ಸಾಧಿಸುತ್ತಿದೆ ಎಂದು ಆರೋಪಿಸಿ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಬಿಜೆಪಿ ಟ್ವೀಟ್ ಮಾಡಿದೆ.

bjp tweet against congress
ಬಿಜೆಪಿ ಟ್ವೀಟ್
ನನ್ನನ್ನು ಸಿಲುಕಿಸುವ ಕುತಂತ್ರ ನಡೆಯುತ್ತಿದೆ ಎಂದು ಮಹಾನಾಯಕರೊಬ್ಬರು ಹೇಳಿದ್ದಾರೆ. ಈ ಪ್ರಕರಣದಲ್ಲಿ ನನ್ನ ಹೆಸರು ಯಾಕೆ ಬರುತ್ತಿದೆ ಗೊತ್ತಾಗುತ್ತಿಲ್ಲ ಎಂದು ಮಹಾನಾಯಕಿಯೊಬ್ಬರು ಹೇಳಿದ್ದಾರೆ... ಏನಿದೆಲ್ಲಾ!? ಬೆಂಕಿಯಿಲ್ಲದೆ ಹೊಗೆಯಾಡುವುದೇ? ಪಕ್ಷ ತೊರೆದವರ ವಿರುದ್ಧ ಕಾಂಗ್ರೆಸ್‌ ಹಗೆತನ ಸಾಧಿಸುತ್ತಿದೆ ಎಂದು ಬಿಜೆಪಿ ಟೀಕಿಸಿದೆ. ಆ ಘಟನೆಯ ಹಿಂದೆ ಒಬ್ಬ ಜೈಲಿನಿಂದ ಜಾಮೀನಿನ ಮೇಲೆ ಹೊರಗಡೆ ಬಂದಿರುವ ಭ್ರಷ್ಟಾಚಾರಿ ಆರೋಪಿ ಮಹಾನಾಯಕನ ಕೈವಾಡ ಇದೆ ಎಂಬ ಸುದ್ದಿ ಇದೆ. ಆ ಮಹಾನಾಯಕ ಕೂಡ ತನ್ನನ್ನು ಸಿಲುಕಿಸುವ ಕುತಂತ್ರ ನಡೆಯುತ್ತಿದೆ ಎಂದು ಹೇಳುವ ಮೂಲಕ ಹೆಗಲು ಮುಟ್ಟಿ ನೋಡಿಕೊಂಡಿದ್ದಾರೆ. ರಾಹುಲ್‌ ಗಾಂಧಿ ಏಕೆ ಸುಕನ್ಯಾ ದೇವಿಯ ಪರವಾಗಿ ಒಮ್ಮೆಯೂ ಧ್ವನಿ ಎತ್ತಿಲ್ಲ? ಎಂದು ಬಿಜೆಪಿ ಟ್ವೀಟ್ ಮೂಲಕ ಕಾಂಗ್ರೆಸ್ ನಾಯಕರ ಕಾಲೆಳೆದಿದೆ.

ಇದನ್ನೂ ಓದಿ:20 ವರ್ಷದಿಂದ ನೆನೆಗುದಿಗೆ ಬಿದ್ದ ಹೆಜೆಲಾ -ಚಾಮರಾಜನಗರ ರೈಲು ಮಾರ್ಗದ​ ಬಗ್ಗೆ ಸದನದ ಗಮನ ಸೆಳೆದ ಸಂಸದೆ ಸುಮಲತಾ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.