ETV Bharat / state

ಟ್ವೀಟಾಯಣ.. ಸಿದ್ದರಾಮಯ್ಯರಿಂದ ಕಾಯಕ ಧರ್ಮದ ಅಪಮಾನ: ಬಿಜೆಪಿ ವಾಗ್ದಾಳಿ

ಒಂದು ಸಮುದಾಯವನ್ನು ತಮ್ಮ ರಾಜಕೀಯ ಹಿತಾಸಕ್ತಿಗಾಗಿ ನಿಂದಿಸುವುದು ಹಾಗೂ ಒಡೆಯುವುದು ಅವರಿಗೆ ಚಾಳಿಯಾಗಿಬಿಟ್ಟಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ಬಿಜೆಪಿ ವಾಗ್ದಾಳಿ ನಡೆಸಿದೆ.

siddaramaih
ಸಿದ್ದರಾಮಯ್ಯ
author img

By

Published : Oct 26, 2021, 5:46 PM IST

ಬೆಂಗಳೂರು: ವೀರಶೈವ - ಲಿಂಗಾಯತ ಸಮುದಾಯದ ಮೇಲೆ ನಿಮಗೇಕೆ ದ್ವೇಷ? ಹಿಂದೆ ಧರ್ಮ ಒಡೆಯಲು ಹೋಗಿ ಆ ಸಮುದಾಯದ ಭಾವನೆ ಕೆರಳಿಸಿದ್ದೀರಿ. ಈಗ ಬೊಮ್ಮಾಯಿ ಜಾತಿಯವರು ಕಂಬಳಿ ನೇಯುತ್ತಾರಾ? ಎಂದು ಪ್ರಶ್ನಿಸುವ ಮೂಲಕ ಕಾಯಕ ಧರ್ಮವನ್ನು ಅಪಮಾನ ಮಾಡುತ್ತಿದ್ದೀರಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ಲಿಂಗಾಯತ ವಿರೋಧಿ ಸಿದ್ದರಾಮಯ್ಯ ಹ್ಯಾಷ್ ಟ್ಯಾಗ್​ನೊಂದಿಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಅವರ ವಿರುದ್ಧ ಹರಿಹಾಯ್ದಿದೆ. ಯಡಿಯೂರಪ್ಪ ಅವರು ಕುರ್ಚಿ ಉಳಿಸಿಕೊಳ್ಳುವುದಕ್ಕಾಗಿ ಮಠಾಧೀಶರನ್ನು ಮನೆಗೆ ಕರೆಸಿ ದುಡ್ಡು ಹಂಚಿದರು ಎನ್ನುವ ಮೂಲಕ ಸಿದ್ದರಾಮಯ್ಯ ಮಠಾಧೀಶರಿಗೆ ಅವಮಾನ ಮಾಡಿದ್ದಾರೆ. ಒಂದು ಸಮುದಾಯವನ್ನು ತಮ್ಮ ರಾಜಕೀಯ ಹಿತಾಸಕ್ತಿಗಾಗಿ ನಿಂದಿಸುವುದು ಹಾಗೂ ಒಡೆಯುವುದು ಅವರಿಗೆ ಚಾಳಿಯಾಗಿಬಿಟ್ಟಿದೆ ಎಂದು ತಿರುಗೇಟು ನೀಡಿದೆ.

ಜಾತಿ ರಹಿತ, ವರ್ಗ ರಹಿತ ಸಮಾಜ ಸ್ಥಾಪನೆಯೇ ಬಿಜೆಪಿಯ ಉದ್ದೇಶ. ಆದರೆ, ಹಾಲಿನಂಥ ಸಮಾಜವನ್ನು ಒಡೆಯುವುದು ಜಾತಿವಾದಿ ಸಿದ್ದರಾಮಯ್ಯ ಅವರ ಗುರಿ. ಗಡಿಗೆಯಲ್ಲಿ ತುಂಬಿರುವ ಹಾಲನ್ನು ಕೆಡಿಸುವುದಕ್ಕೆ ಒಂದು ಹನಿ ಹುಳಿ ಸಾಕಲ್ಲವೇ? ಹಾಗೆಯೇ, ಸಮಾಜ ವಿಭಜನೆಗೆ ಸಿದ್ದರಾಮಯ್ಯ ಅವರ ದ್ವೇಷದ ನುಡಿ ಸಾಕು ಎಂದು ಟಾಂಗ್ ನೀಡಿದೆ.

  • ಜಾತಿ ರಹಿತ, ವರ್ಗ ರಹಿತ ಸಮಾಜ ಸ್ಥಾಪನೆಯೇ ಬಿಜೆಪಿಯ ಉದ್ದೇಶ. ಆದರೆ ಹಾಲಿನಂಥ ಸಮಾಜವನ್ನು ಒಡೆಯುವುದು ಜಾತಿವಾದಿ @siddaramaiah ಅವರ ಗುರಿ.

    ಗಡಿಗೆಯಲ್ಲಿ ತುಂಬಿರುವ ಹಾಲನ್ನು ಕೆಡಿಸುವುದಕ್ಕೆ ಒಂದು ಹನಿ ಹುಳಿ ಸಾಕಲ್ಲವೇ ?

    ಹಾಗೆಯೇ ಸಮಾಜ ವಿಭಜನೆಗೆ ಸಿದ್ದರಾಮಯ್ಯ ಅವರ ದ್ವೇಷದ ನುಡಿ ಸಾಕು.#ಲಿಂಗಾಯತವಿರೋಧಿಸಿದ್ದರಾಮಯ್ಯ

    — BJP Karnataka (@BJP4Karnataka) October 26, 2021 " class="align-text-top noRightClick twitterSection" data=" ">

ರಾಜಕೀಯ ಏಳಿಗೆಗಾಗಿ ಸಿದ್ದರಾಮಯ್ಯ ಹಿಂದೂ ಧರ್ಮ ಒಡೆಯುವ ಪ್ರಯತ್ನ ನಡೆಸಿದರು. ಲಿಂಗಾಯತ ಪ್ರತ್ಯೇಕ ಧರ್ಮದ ಅಸ್ತ್ರ ಪ್ರಯೋಗಿಸಿ ಎಂ.ಬಿ ಪಾಟೀಲರನ್ನು ಬಲಿಪಶುವಾಗಿಸಿದರು. ಸಿದ್ದರಾಮಯ್ಯನವರೇ, ವೀರಶೈವ- ಲಿಂಗಾಯಿತ ಸಮುದಾಯ ಬಿಜೆಪಿ ಜೊತೆ ನಿಲ್ಲುವುದನ್ನು ತಡೆಯುವುದಕ್ಕಾಗಿ ಧರ್ಮ ವಿಭಜನೆಗೆ ಮುಂದಾಗಿದ್ದಲ್ಲವೇ?.

ವೀರಶೈವ- ಲಿಂಗಾಯತ ಸಮುದಾಯದ ಸ್ವಾಮೀಜಿಗಳ ಬಗ್ಗೆ ಸಿದ್ದರಾಮಯ್ಯ ಎಂದಾದರೂ ಗೌರವ ವ್ಯಕ್ತಪಡಿಸಿದ ಉದಾಹರಣೆ ಇದೆಯೇ?. ಧರ್ಮ ವಿಭಜನೆಯ ಪ್ರಯತ್ನ ಮಾಡುವಾಗ "ಲಿಂಗಾಯತ ಸ್ವಾಮೀಜಿಗಳು ನೀಡಿದ ಮನವಿ" ಪ್ರಕಾರ, ಪ್ರತ್ಯೇಕ ಧರ್ಮದ ಪ್ರಸ್ತಾಪವನ್ನು ಕೇಂದ್ರಕ್ಕೆ ಕಳುಹಿಸಿದ್ದೆ ಎಂದು ಜಾರಿಕೊಂಡಿದ್ದು ನೆನಪಿಲ್ಲವೇ? ಎಂದು ಬಿಜೆಪಿ ಪ್ರಶ್ನಿಸಿದೆ.

ಬೊಮ್ಮಾಯಿ ಜಾತಿಯವರು ಕಂಬಳಿ ನೇಯ್ತಾರಾ?. ಕಾಗೇರಿ ಜಾತಿಯವರು ಕುರಿ ಕಾಯ್ತಾರಾ? ಎಂದು ಪ್ರಶ್ನಿಸುವ ಮೂಲಕ ಸಮಾಜವನ್ನು ಯಾವ ದಿಕ್ಕಿನತ್ತ ಕೊಂಡೊಯ್ಯುತ್ತಿದ್ದೀರಿ ಸಿದ್ದರಾಮಯ್ಯ? ಹಾಲಿನಂಥ ಸಮಾಜದಲ್ಲಿ ಜಾತಿ ಹುಳಿ ಹಿಂಡಿ ಒಡೆಯುವುದೇ ನಿಮ್ಮ ರಾಜಕೀಯ ಧರ್ಮ. ಸಮಾಜ ಒಟ್ಟಾಗಿದ್ದರೆ ಈ ಮಜವಾದಿಗೆ ಸಂಕಟವಾಗುತ್ತದೆ.

ಸಮಾಜವಾದದ ಹೆಸರಿನಲ್ಲಿ ಜಾತಿವಾದ ನಡೆಸುತ್ತಿರುವ ಸಿದ್ದರಾಮಯ್ಯ ಅವರಿಗೆ ಈಗ ರಾಜ್ಯದ ಯಾವ ಕ್ಷೇತ್ರದಲ್ಲೂ ನೆಲೆಯಿಲ್ಲ. ಮುಂದಿನ ವಿಧಾನಸಭಾ ಚುನಾವಣೆಯ ಹೊತ್ತಿಗೆ ಚಾಮರಾಜಪೇಟೆಗೆ ವಲಸೆ ಹೋಗಲು ಸಿದ್ಧತೆ ನಡೆಸಿರುವ ಅವರು ಈಗ ಒಂದು ವರ್ಗದ ಓಲೈಕೆಗಾಗಿ ಹಿಂದೂ ಧರ್ಮದ ಅವಹೇಳನಕ್ಕೆ ಮುಂದಾಗಿದ್ದಾರೆ ಎಂದು ಲೇವಡಿ ಮಾಡಿದೆ.

  • ರಾಜಕೀಯ ಏಳಿಗೆಗಾಗಿ ಸಿದ್ದರಾಮಯ್ಯ ಹಿಂದೂ ಧರ್ಮ ಒಡೆಯುವ ಪ್ರಯತ್ನ ನಡೆಸಿದರು.

    ಲಿಂಗಾಯತ ಪ್ರತ್ಯೇಕ ಧರ್ಮದ ಅಸ್ತ್ರ ಪ್ರಯೋಗಿಸಿ ಎಂ.ಬಿ.ಪಾಟೀಲರನ್ನು ಬಲಿಪಶುವಾಗಿಸಿದರು.

    ಸಿದ್ದರಾಮಯ್ಯನವರೇ, ವೀರಶೈವ- ಲಿಂಗಾಯಿತ ಸಮುದಾಯ ಬಿಜೆಪಿ ಜೊತೆ ನಿಲ್ಲುವುದನ್ನು ತಡೆಯುವುದಕ್ಕಾಗಿ ಧರ್ಮ ವಿಭಜನೆಗೆ ಮುಂದಾಗಿದ್ದಲ್ಲವೇ?#ಲಿಂಗಾಯತವಿರೋಧಿಸಿದ್ದರಾಮಯ್ಯ

ಓದಿ: ದೀಪಾವಳಿಯ ಬಲಿಪಾಡ್ಯಮಿಯ ಹಬ್ಬದ ದಿನದಂದು"ಗೋಪೂಜೆ": ಸರ್ಕಾರ ಆದೇಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.