ETV Bharat / state

ರೌಡಿ ಶೀಟರ್​ಗಳಿಗೆ ಬಿಜೆಪಿ ಮನ್ನಣೆ ನೀಡಲ್ಲ: ಸಿಎಂ ಬೊಮ್ಮಾಯಿ - CM tweet

ನಮ್ಮ ಪಕ್ಷವು ಯಾವುದೇ ರೌಡಿ ಶೀಟರ್​ಗಳಿಗೆ ಮನ್ನಣೆ ಕೊಡುವುದಿಲ್ಲ ಹಾಗೂ ಅವರನ್ನು ಸಹಿಸುವುದಿಲ್ಲ. ನಮ್ಮ ಪಕ್ಷದ ಅಧ್ಯಕ್ಷರು ಈಗಾಗಲೇ ತಿಳಿಸಿರುವಂತೆ ಸೈಲೆಂಟ್ ಸುನೀಲ್​ರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಸಿಎಂ ಟ್ವೀಟ್​ ಮಾಡಿದ್ದಾರೆ.

BJP will not give importance to rowdy sheeters
ಕೇಂದ್ರ ಸಚಿವರ ಭೇಟಿಯಾದ ಸಿಎಂ
author img

By

Published : Nov 29, 2022, 7:26 PM IST

ನವದೆಹಲಿ/ಬೆಂಗಳೂರು: ರೌಡಿಶೀಟರ್​ ಸೈಲೆಂಟ್ ಸುನೀಲ್ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಬಿಜೆಪಿಯ ಕೆಲ ನಾಯಕರು ಭಾಗಿಯಾದ ವಿಷಯಕ್ಕೆ ಸಂಬಂಧಿಸಿದಂತೆ, ಈಗಾಗಲೇ ಪಕ್ಷದ ರಾಜ್ಯಾಧ್ಯಕ್ಷರು ಸ್ಟಷ್ಟೀಕರಣ ನೀಡಿದ್ದಾರೆ. ಸುನೀಲ್​ನನ್ನು ಬಿಜೆಪಿಗೆ ಸೇರಿಸಿಕೊಳ್ಳಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ವಿಷಯವನ್ನು ಇಲ್ಲಿಗೆ ಸೀಮಿತವಾಗಿ ನೋಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷದ ಟ್ವೀಟ್​ಗೆ ಸಂಬಂಧಿಸಿದಂತೆ ರೌಡಿ ಶೀಟರ್​ಗಳ ಕುರಿತಾದ ಪತ್ರಕರ್ತರ ಪ್ರಶ್ನೆಗೆ ನಾನು ಉತ್ತರಿಸಿದ್ದೇನೆ. ಇದನ್ನು ಇಷ್ಟಕ್ಕೆ ಸೀಮಿತವಾಗಿ ನೋಡಬೇಕು. ನಮ್ಮ ಪಕ್ಷವು ಯಾವುದೇ ರೌಡಿ ಶೀಟರ್​ಗಳಿಗೆ ಮನ್ನಣೆ ಕೊಡುವುದಿಲ್ಲ ಹಾಗೂ ಅವರನ್ನು ಸಹಿಸುವುದಿಲ್ಲ. ನಮ್ಮ ಪಕ್ಷದ ಅಧ್ಯಕ್ಷರು ಈಗಾಗಲೇ ತಿಳಿಸಿರುವಂತೆ ಸೈಲೆಂಟ್ ಸುನೀಲ್​ರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಸಿಎಂ ಟ್ವೀಟ್ ಮಾಡಿ ಸಮಜಾಯಿಷಿ ನೀಡಿದ್ದಾರೆ.

BJP will not give importance to rowdy sheeters
ಕೇಂದ್ರ ಸಚಿವರ ಭೇಟಿಯಾದ ಸಿಎಂ

ಕೇಂದ್ರ ಸಚಿವರ ಭೇಟಿಯಾದ ಸಿಎಂ: ಎರಡು ದಿನಗಳ ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಕೇಂದ್ರ ಜವಳಿ ವಾಣಿಜ್ಯ ಮತ್ತು ಕೈಗಾರಿಕೆ ಗ್ರಾಹಕ ವ್ಯವಹಾರಗಳ ಸಚಿವಾಲಯ ಹಾಗೂ ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿದರು. ಇಲಾಖೆ ಯೋಜನೆಗಳ ಕುರಿತು ಸಮಾಲೋಚನೆ ನಡೆಸಿದರು.

  • ಇಂದಿನ ದೆಹಲಿ ಪ್ರವಾಸದ ಸಂದರ್ಭದಲ್ಲಿ ಕೇಂದ್ರ ಜವಳಿ ವಾಣಿಜ್ಯ & ಕೈಗಾರಿಕೆ ಗ್ರಾಹಕ ವ್ಯವಹಾರಗಳ ಸಚಿವಾಲಯ ಹಾಗೂ ಆಹಾರ & ಸಾರ್ವಜನಿಕ ವಿತರಣಾ ಸಚಿವ @PiyushGoyal ಅರವರನ್ನು ಭೇಟಿ ಮಾಡಿ, ಚರ್ಚಿಸಿದೆನು. ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಗೋವಿಂದ ಕಾರಜೋಳ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. pic.twitter.com/DdGT7Qz1S4

    — Basavaraj S Bommai (@BSBommai) November 29, 2022 " class="align-text-top noRightClick twitterSection" data=" ">

ಇದನ್ನೂ ಓದಿ: ಮಹಾರಾಷ್ಟ್ರ ಕರ್ನಾಟಕ ಗಡಿ ವಿವಾದ.. ರಾಜ್ಯದ ಪರ ಸಮರ್ಥ ವಾದ ಮಂಡನೆ: ಸಿಎಂ ಬೊಮ್ಮಾಯಿ

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ಬೃಹತ್ ಮತ್ತು ಮಧ್ಯಮ ನೀರಾವರಿ, ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಹಾಗೂ ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಉಪಸ್ಥಿತರಿದ್ದರು. ಅಷ್ಟೇ ಅಲ್ಲದೇ ಸಿಎಂ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ, ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿದರು. ಇಲಾಖೆ ಯೋಜನೆಗಳ ಕುರಿತು ಮಾತುಕತೆ ನಡೆಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.