ETV Bharat / state

ಬಿಜೆಪಿ ಸಂಸ್ಥಾಪನಾ ದಿನಾಚರಣೆ: ಸರಳವಾಗಿ ಆಚರಿಸಿದ ರಾಜ್ಯ ಘಟಕ - BJP's Founding Day

ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿ ಜಗನ್ನಾಥ ಭವನದಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.

ಬಿಜೆಪಿ ಸಂಸ್ಥಾಪನಾ ದಿನಾಚರಣೆ
ಬಿಜೆಪಿ ಸಂಸ್ಥಾಪನಾ ದಿನಾಚರಣೆ
author img

By

Published : Apr 6, 2020, 5:36 PM IST

ಬೆಂಗಳೂರು: ಲಾಕ್​​ಡೌನ್ ಹಿನ್ನೆಲೆ ಬಿಜೆಪಿ ಸಂಸ್ಥಾಪನಾ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು. ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿ ಜಗನ್ನಾಥ ಭವನದಲ್ಲಿ ಬಿಜೆಪಿ ಸಂಸ್ಥಾಪನಾ ದಿನಾಚರಣೆ ನಿಮಿತ್ತ ಧ್ವಜಾರೋಹಣ ಹಾಗೂ ಪುಷ್ಪಾರ್ಚನೆ ನೆರವೇರಿಸಲಾಯಿತು.

ವಿಧಾನ ಪರಿಷತ್ ಸದಸ್ಯ ರವಿಕುಮಾರ್, ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೇಕಲ್ಲು ಸೇರಿದಂತೆ ಪಕ್ಷದ ಕಚೇರಿಯಲ್ಲೇ ಇರುವ ಸಿಬ್ಬಂದಿ ಮಾತ್ರ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಇನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕರೆಯಂತೆ ಬಿಜೆಪಿ ಕಚೇರಿಯಲ್ಲಿನ‌ ಎಲ್ಲಾ ಸಿಬ್ಬಂದಿ ಇಂದು ಹೊತ್ತಿನ ಉಪವಾಸ ಮಾಡುತ್ತಿದ್ದಾರೆ. ಕೊರೊನಾ ವಾರಿಯರ್ಸ್​ಗೆ ಬೆಂಬಲ ನೀಡುವ ಹಾಗೂ ಗೌರವ ಕೊಡುವ ಕಾಯಕದಲ್ಲಿ ಭಾಗಿಯಾಗುತ್ತಿರುವುದಾಗಿ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.