ETV Bharat / state

ವೈದ್ಯರ ಮೇಲೆ ಹಲ್ಲೆ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಮನವಿ - ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಮನವಿ ಪತ್ರ

ಕರ್ತವ್ಯನಿರತ ವೈದ್ಯರ ಮೇಲೆ ದೌರ್ಜನ್ಯ ಎಸಗಿದ ಕರವೇ ಪದಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ಸಂಚಾಲಕ ಡಾ. ಬಸವರಾಜ್,​ ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಮನವಿ ಸಲ್ಲಿಸಿದ್ದಾರೆ.

ಗೃಹ ಸಚಿವ ಬಸವರಾಜ ಬೊಮ್ಮಾಯಿ
author img

By

Published : Nov 6, 2019, 1:22 PM IST

ಬೆಂಗಳೂರು: ನವೆಂಬರ್ 1ರಂದು ಮಿಂಟೋ ಆಸ್ಪತ್ರೆಯಲ್ಲಿ ಕರ್ತವ್ಯನಿರತ ವೈದ್ಯರ ಮೇಲೆ ದೌರ್ಜನ್ಯ ಎಸಗಿದ ಕರವೇ ಪದಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ಸಂಚಾಲಕ ಡಾ. ಬಸವರಾಜ್,​ ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಮನವಿ ಸಲ್ಲಿಸಿದ್ದಾರೆ.

banglore
ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಮನವಿ ಪತ್ರ

ವೈದ್ಯರು ತಮ್ಮ ವೈಯಕ್ತಿಕ ಮತ್ತು ಸಾಮಾಜಿಕ ಜೀವನಕ್ಕೆ ಹೆಚ್ಚು ಆದ್ಯತೆ ಕೊಡದೆ ರಜೆ ದಿನಗಳಲ್ಲೂ ಸೇವೆ ಸಲ್ಲಿಸುತ್ತಿದ್ದಾರೆ. ಅದರಲ್ಲಿಯೂ ಯುವ ವೈದ್ಯರು ಕರ್ತವ್ಯನಿರತರಾಗಿದ್ದಾಗ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ದೌರ್ಜನ್ಯವೆಸಗಿರುವುದು ತೀರಾ ಖಂಡನೀಯವಾಗಿದ್ದು, ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಸವರಾಜ್ ಒತ್ತಾಯಿಸಿದ್ದಾರೆ.

ಇನ್ನು ಇಂತಹ ಘಟನೆಗಳು ಯುವ ವೈದ್ಯರ ಮಾನಸಿಕ ಸ್ಥೈರ್ಯವನ್ನು ಕುಗ್ಗಿಸುತ್ತಿವೆ. ಈ ಘಟನೆಗಳ ಬಗ್ಗೆ ಹೆಚ್ಚು ಮುತುವರ್ಜಿ ವಹಿಸಿ ನಿಮ್ಮ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ಕರ್ತವ್ಯನಿರತ ವೈದ್ಯರ ಮೇಲೆ ದೌರ್ಜನ್ಯ ನಡೆಸುತ್ತಿರುವ ವ್ಯಕ್ತಿಗಳ ವಿರುದ್ಧ ಕಾನೂನಿನ ಚೌಕಟ್ಟಿನಲ್ಲಿ ಸೂಕ್ತ ಹಾಗೂ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶಿಸಬೇಕೆಂದು ಬಿಜೆಪಿ ವೈದ್ಯಕೀಯ ಪ್ರಕೋಷ್ಠ ವತಿಯಿಂದ ತಮ್ಮಲ್ಲಿ ಕಳಕಳಿಯಿಂದ ವಿನಂತಿಸಿಕೊಳ್ಳುತ್ತೇವೆ ಎಂದು ಮನವಿ ಪತ್ರ ನೀಡಿದ್ದಾರೆ.

Intro:

ಬೆಂಗಳೂರು: ನವೆಂಬರ್ 1 ರಂದು ಮಿಂಟೋ ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ದೌರ್ಜನ್ಯ ಎಸಗಿದ ಕರವೇ ಪದಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಜೆಪಿ ವೈದ್ಯಕೀಯ ಪ್ರಕೋಷ್ಠದ ಸಂಚಾಲಕ ಡಾ.ಬಸವರಾಜ ಗೃಹ ಸಚಿವ ಬಸವರಾಜ ಬೊಮ್ಮಾಯಿಗೆ ಮನವಿ ಸಲ್ಲಿಸಿದ್ದಾರೆ.

ವೈದ್ಯರುಗಳು ತಮ್ಮ ವೈಯಕ್ತಿಕ ಮತ್ತು ಸಾಮಾಜಿಕ ಜೀವನಕ್ಕೆ ಹೆಚ್ಚು ಅದ್ಯತೆಯನ್ನು ಕೊಡದ ರಜೆ ದಿನಗಳಲ್ಲೆ ಸೇವೆ ಸಲ್ಲಿಸುತ್ತಿದ್ದಾರೆ. ಅದರಲ್ಲಿಯೂ ಯುವ
ವೈದ್ಯರುಗಳು ಕರ್ತವ್ಯನಿರತರಾಗಿದ್ದಾಗ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳು ದೌರ್ಜನ್ಯವೆಸಗಿರುವುದು ತೀರಾ
ಖಂಡನೀಯವಾಗಿದ್ದು ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಸವರಾಜ್ ಒತ್ತಾಯಿಸಿದರು.

ಈ ರೀತಿಯ ಘಟನೆಗಳಿಂದ ಯುವ ವೈದ್ಯರು ಸಾರ್ವಜನಿಕ ವೈದ್ಯಕೀಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು
ಹಿಂದೇಟು ಹಾಕುತ್ತಿದ್ದರು ಇದು ಈಗಾಗಲೇ ರಾಜ್ಯಾದ್ಯಾಂತ ಬೆಳವಣಿಗೆ ಕಂಡದ್ದು ನಾವೆಲ್ಲರೂ ನೋಡುತ್ತಿರುವ ವಿಷಯವಾಗಿದೆ.ಜೊತೆಗೆ ಇಂತಹ ಘಟನೆಗಳು ಯುವ ವೈದ್ಯರ ಮಾನಸಿಕ ಸ್ಥೈರ್ಯವನ್ನು ಕುಗ್ಗಿಸುತ್ತಿವೆ.ಈ ಘಟನೆಗಳ ಬಗ್ಗೆ ತಾವು ಗಳು ಹೆಚ್ಚು ಮುತುವರ್ಜಿ ವಹಿಸಿ ನಿಮ್ಮ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ಕರ್ತವ್ಯನಿರತ ವೈದ್ಯರ ಮೇಲೆ ದೌರ್ಜನ್ಯ ಸಾಗುತ್ತಿರುವ ವ್ಯಕ್ತಿ ಗಳ ವಿರುದ್ಧ ಕಾನೂನಿನ ಚೌಕಟ್ಟಿನಲ್ಲಿ ಸೂಕ್ತ
ಹಾಗೂ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶಿಸಬೇಕೆಂದು ಬಿಜೆಪಿ ವೈದ್ಯಕೀಯ ಪ್ರಕೋಷ್ಠ ವತಿಯಿಂದ ತಮ್ಮಲ್ಲಿ ಕಳಕಳಿಯಿಂದ ವಿನಂತಿಸಿ ಕೊಳ್ಳುತ್ತೇವೆ ಎಂದು ಮನವಿ ಪತ್ರ ನೀಡಿದ್ದಾರೆ.Body:.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.