ETV Bharat / state

ಸಿಎಂ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದ ಬಿ ಕೆ ಹರಿಪ್ರಸಾದ್​​ಗೆ ಶೋಕಾಸ್ ನೊಟೀಸ್ - ಬಿ ಕೆ ಹರಿಪ್ರಸಾದ್​​ಗೆ ಶೋಕಾಸ್ ನೋಟಿಸ್

ಕಾರ್ಯಕ್ರಮವೊಂದರಲ್ಲಿ ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾತನಾಡಿದ್ದ ವಿಧಾನ ಪರಿಷತ್ ಸದಸ್ಯ ಬಿ ಕೆ ಹರಿಪ್ರಸಾದ್​ಗೆ ಕಾಂಗ್ರೆಸ್ ಹೈಕಮಾಂಡ್ ಶೋಕಾಸ್ ನೊಟೀಸ್ ಜಾರಿ ಮಾಡಿದೆ

ಬಿ ಕೆ ಹರಿಪ್ರಸಾದ್​​ಗೆ ಶೋಕಾಸ್ ನೋಟಿಸ್
ಬಿ ಕೆ ಹರಿಪ್ರಸಾದ್​​ಗೆ ಶೋಕಾಸ್ ನೋಟಿಸ್
author img

By ETV Bharat Karnataka Team

Published : Sep 12, 2023, 8:47 PM IST

Updated : Sep 12, 2023, 10:55 PM IST

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ಗುಡುಗಿದ್ದ ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್​​ಗೆ ಎಐಸಿಸಿ ಶೋಕಾಸ್ ನೊಟೀಸ್ ಜಾರಿ ಮಾಡಿದೆ. ಎಐಸಿಸಿ ಶಿಸ್ತು ಸಮಿತಿಯಿಂದ ನೊಟೀಸ್ ಜಾರಿ ಮಾಡಿದ್ದು, ಹತ್ತು ದಿನಗಳೊಳಗೆ ಉತ್ತರಿಸುವಂತೆ ತಿಳಿಸಿದೆ. ಕಳೆದ ಶನಿವಾರ ಅತಿ‌ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಸಿಎಂ ವಿರುದ್ಧ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದರು. ಇದು ಸಿಎಂ‌ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷವನ್ನು ತೀವ್ರ ಮುಜುಗರಕ್ಕೀಡು ಮಾಡಿತ್ತು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡ ಎಐಸಿಸಿ ಬಳಿ ತಮ್ಮ ಅಸಮಾಧಾನ ಹೊರಹಾಕಿದ್ದರು. ಈ ಸಂಬಂಧ ಮಲ್ಲಿಕಾರ್ಜುನ‌ ಖರ್ಗೆ ಕೂಡ ಬಿ.ಕೆ.ಹರಿಪ್ರಸಾದ್ ಜೊತೆ ದೂರವಾಣಿ‌ ಕರೆ ಮಾಡಿ ಮಾತನಾಡಿದ್ದರು.

ನೋಟಿಸ್​​ನಲ್ಲಿ ಏನಿದೆ?: ಶೋಕಾಸ್ ನೊಟೀಸ್‌ನಲ್ಲಿ ನಿಮ್ಮ ಹೇಳಿಕೆ ಒಬಿಸಿ ಹಾಗೂ ಎಸ್​ಸಿ ಸಮುದಾಯವರ ಮನಸ್ಸಲ್ಲಿ ವ್ಯತಿರಿಕ್ತ ಮನೋಭಾವನೆ ಉಂಟುಮಾಡಿದೆ. ಒಬ್ಬ ಹಿರಿಯ ನಾಯಕರಾಗಿ ಇಂಥ ಹೇಳಿಕೆಗಳು ಪಕ್ಷಕ್ಕೆ ಹಾಕಿ ಮಾಡುತ್ತದೆ ಎಂಬುದು ನಿಮಗೆ ಗೊತ್ತಿದೆ. ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ. ಹೀಗಾಗಿ ನಿಮ್ಮ ಮೇಲೆ ಏಕೆ ಶಿಸ್ತು ಕ್ರಮ ತೆಗೆದುಕೊಳ್ಳಬಾರದು ಎಂಬ ಬಗ್ಗೆ 10 ದಿನದೊಳಗೆ ಸ್ಪಷ್ಟನೆ ನೀಡುವಂತೆ ಹೈಕಮಾಂಡ್ ಸೂಚಿಸಿದೆ.

ಬೆಂಗಳೂರಿನ‌ ಅರಮನೆ‌ ಮೈದಾನದಲ್ಲಿ ಕಳೆದ ಶನಿವಾರ ನಡೆದ ಈಡಿಗ, ಬಿಲ್ಲವ, ನಾಮಧಾರಿ, ಧೀವರು ಮತ್ತು ಅತಿ ಹಿಂದುಳಿದ ವರ್ಗಗಳ ಸಮಾನ ಮನಸ್ಕರ ಸಭೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ.ಹರಿಪ್ರಸಾದ್ ಸಿಎಂ ಸಿದ್ದರಾಮಯ್ಯ ವಿರುದ್ಧ ಹೆಸರು ಹೇಳದೇ ಹರಿಹಾಯ್ದಿದ್ದರು. ಸಮಾವೇಶ ಉದ್ದೇಶಿಸಿ ಮಾತನಾಡಿದ್ದ ಅವರು, ಯಾರೋ ಕೆಲವರು ಪಂಚೆ ಹಾಕಿಕೊಂಡು ಹೂಬ್ಲೆಟ್ ವಾಚ್ ಕಟ್ಟಿಕೊಂಡು ಒಳಗಡೆ ಖಾಕಿ ಚಡ್ಡಿ ಹಾಕಿಕೊಂಡು ಸಮಾಜವಾದಿ ಅಂತ ಹೇಳಿದರೆ ಆಗೋದಿಲ್ಲ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಹೆಸರು ಉಲ್ಲೇಖಿಸದೇ ಹ್ಯೂಬ್ಲೆಟ್ ವಾಚ್ ಬಗ್ಗೆ ಪ್ರಸ್ತಾಪ ‌ಮಾಡಿ ಮಾಜಾವಾದಿ ಎಂದು ಕಿಡಿಕಾರಿದ್ದರು.

ಹಿಂದಿನ ಯಾವ ಸಿಎಂಗಳೂ ಜಾತಿ ರಾಜಕಾರಣ ಮಾಡಲಿಲ್ಲ. ಬಂಗಾರಪ್ಪ ಅವರು ಎಲ್ಲಾ ಕಾರ್ಯಕ್ರಮಗಳನ್ನು ರೂಪಿಸಿ ಎಲ್ಲಾ ಜಾತಿ, ಬಡವರಿಗೆ ಅನುಕೂಲ ಮಾಡುವ ಕೆಲಸ ಮಾಡಿದ್ದರು. ಕಾಗೋಡು ತಿಮ್ಮಪ್ಪ, ಬಂಗಾರಪ್ಪ ಯಾರೂ ಜಾತಿ ರಾಜಕಾರಣ ಮಾಡಲಿಲ್ಲ. ಕಾಗೋಡು ತಿಮ್ಮಪ್ಪ ಅವರು ಸಮಾಜವಾದದಲ್ಲಿ ಇದ್ದಂತವರು. ಸಮಾಜವಾದದ ಹೋರಾಟ ಮಾಡಿದವರು. ಕಾಗೋಡು ಹೋರಾಟದಲ್ಲಿ ಮುಂಚೂಣಿಯಲ್ಲಿದ್ದವರು. ಸಮಾಜವಾದಿ ಅಂದುಕೊಂಡು ಮಜಾವಾದಿಯಾಗಿರಲಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದರು.

ಬಿ.ಕೆ.ಹರಿಪ್ರಸಾದ್ ಹೇಳಿಕೆ ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್​ಗೆ ಆಹಾರವಾಗಿತ್ತು. ಇದನ್ನೇ ಬಳಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷಗಳು ವಾಗ್ದಾಳಿ ನಡೆಸುತ್ತಿವೆ. ಇದರಿಂದ ಕಾಂಗ್ರೆಸ್ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯಗೆ ತೀವ್ರ ಮುಜುಗರ ಉಂಟಾಗಿದೆ. ಈ ಸಂಬಂಧ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಬಣ ಒತ್ತಾಯ ಮಾಡಿತ್ತು. ಇದೀಗ ಎಐಸಿಸಿ ಮಧ್ಯಪ್ರದೇಶಿಸಿ ಬಿ.ಕೆ.ಹರಿಪ್ರಸಾದ್​ಗೆ ಶೋಕಾಸ್ ನೊಟೀಸ್ ಜಾರಿ ಮಾಡಿದೆ.

ಇದನ್ನೂ ಓದಿ: ಹಿಂದುಳಿದ ವರ್ಗಗಳ ಸಮಾನ ಮನಸ್ಕರ ಸಭೆ: ಸಿಎಂ ವಿರುದ್ಧ ಹರಿಪ್ರಸಾದ್ ಪರೋಕ್ಷ ವಾಗ್ದಾಳಿ

Last Updated : Sep 12, 2023, 10:55 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.