ETV Bharat / state

ಎಸ್ ಎಂ ಕೃಷ್ಣ ಭೇಟಿಯಾಗಿ ಅಭಿನಂದಿಸಿದ ಬಿ.ಎಲ್ ಸಂತೋಷ್, ನಳಿನ್ ಕುಮಾರ್ ಕಟೀಲ್.. - BL Santhosh

ಪದ್ಮವಿಭೂಷಣ ಪಶಸ್ತಿಗೆ ಭಾಜನರಾಗಿರುವ ಎಸ್ ಎಂ ಕೃಷ್ಣ ನಿವಾಸಕ್ಕೆ ಬಿ ಎಲ್ ಸಂತೋಷ್ ಹಾಗೂ ನಳಿನ್ ಕುಮಾರ್ ಕಟೀಲ್ ಭೇಟಿ - ಬಿಜೆಪಿ ಮುಖಂಡರಿಂದ ಎಸ್ ಎಂ ಕೃಷ್ಣಗೆ ಅಭಿನಂದನೆ.

Nalin Kumar Kateel met SM Krishna
ಎಸ್ ಎಂ ಕೃಷ್ಣರನ್ನು ಭೇಟಿಯಾಗಿ ಅಭಿನಂದಿಸಿದ ಬಿ.ಎಲ್ ಸಂತೋಷ್, ನಳಿನ್ ಕುಮಾರ್ ಕಟೀಲ್..
author img

By

Published : Feb 4, 2023, 5:33 PM IST

ಬೆಂಗಳೂರು: ಪದ್ಮವಿಭೂಷಣ ಪಶಸ್ತಿಗೆ ಭಾಜನರಾಗಿರುವ ಕೇಂದ್ರದ ಮಾಜಿ ಸಚಿವ ಎಸ್.ಎಂ ಕೃಷ್ಣ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೃಷ್ಣ ನಿವಾಸಕ್ಕೆ ಭೇಟಿ ನೀಡಿ ಅಭಿನಂದನೆ ಸಲ್ಲಿಸಿದರು. ಸದಾಶಿವನಗರದಲ್ಲಿರುವ ಕೃಷ್ಣ ಅವರ ಶಾಂಭವಿ ನಿವಾಸಕ್ಕೆ ಭೇಟಿ ನೀಡಿದ ಬಿ.ಎಲ್ ಸಂತೋಷ್ ಹಾಗೂ ಕಟೀಲ್ ಅವರನ್ನು ಕೃಷ್ಣ ದಂಪತಿ ಆತ್ಮೀಯವಾಗಿ ಬರಮಾಡಿಕೊಂಡರು. ನಂತರ ಕೃಷ್ಣ ಅವರಿಗೆ ಅಭಿನಂದಿಸಿ ಕೆಲಕಾಲ ಮಾತುಕತೆ ನಡೆಸಿದರು.

ರಾಜಕಾರಣಕ್ಕೆ ಗುಡ್ ಬೈ ಹೇಳಿರುವ ಕೃಷ್ಣ ಅವರ ಮಾರ್ಗದರ್ಶನ ಹಳೆ ಮೈಸೂರು ಭಾಗಕ್ಕೆ ಮುಖ್ಯವಾಗಿದ್ದು, ಈ ಭಾಗದಲ್ಲಿ ಹೆಚ್ಚುನ ಸ್ಥಾನ ಗೆಲ್ಲುವ ಗುರಿ ಹಾಕಿಕೊಂಡಿರುವ ಬಿಜೆಪಿ ನಾಯಕರಿಗೆ ಕೃಷ್ಣ ಅವರ ಭೇಟಿ ರಾಜಕೀಯವಾಗಿ ಮಹತ್ವದ್ದಾಗಿದೆ. ನಿನ್ನೆಯಷ್ಟೇ ಬಿಜೆಪಿ ಹಿರಿಯ ನಾಯಕ, ಕೇಂದ್ರ ಸಂಸದೀಯ ಮಂಡಳಿ ಸದಸ್ಯರಾಗಿರುವ ಬಿ.ಎಸ್.ಯಡಿಯೂರಪ್ಪ ಕೃಷ್ಣ ನಿವಾಸಕ್ಕೆ ಭೇಟಿ ನೀಡಿ ಅವರಿಗೆ ಅಭಿನಂದನೆ ಸಲ್ಲಿಸಿದ್ದರು. ನಂತರ ಕೆಲಕಾಲ ಮಾತುಕತೆ ನಡೆಸಿದ್ದರು.

ರಾಜಕೀಯ ಸಂಧ್ಯಕಾಲದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಎಸ್.ಎಂ ಕೃಷ್ಣ ಯಾವುದೇ ರಾಜಕೀಯ ಸ್ಥಾನಮಾನ ಪಡೆಯದೇ ಪಕ್ಷದಲ್ಲಿ ಮಾರ್ಗದರ್ಶನ ಮಾಡಿಕೊಂಡು ಬಂದಿದ್ದರು. ವಯಸ್ಸಿನ ಕಾರಣದಿಂದಾಗಿ ಇತ್ತೀಚೆಗೆ ಸಕ್ರಿಯ ರಾಜಕಾರಣಕ್ಕೆ ಗುಡ್ ಬೈ ಹೇಳಿದ್ದರು. ಆದರೂ ಅವರ ನಿವಾಸಕ್ಕೆ ಬಿಜೆಪಿ ನಾಯಕರು ಭೇಟಿ ನೀಡಿ ಚುನಾವಣೆಯಲ್ಲಿ ಸಹಕಾರ ನೀಡುವಂತೆ ಮನವಿ ಮಾಡುತ್ತಿದ್ದಾರೆ.

ಈ ಹಿಂದೆ ಮುಖ್ಯಮಂತ್ರಿ, ಸಚಿವರ ಭೇಟಿ: ಇನ್ನು ಸದಾಶಿವ ನಗರದಲ್ಲಿರುವ ಪದ್ಮವಿಭೂಷಣ ಪಶಸ್ತಿಗೆ ಭಾಜನರಾಗಿರುವ ಕೇಂದ್ರದ ಮಾಜಿ ಸಚಿವ ಕೃಷ್ಣ ನಿವಾಸಕ್ಕೆ ಭೇಟಿ ನೀಡಿದ್ದ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವರಾದ ಆರ್.ಅಶೋಕ್ ಮತ್ತು ಸುಧಾಕರ್ ಅವರು, ಕೃಷ್ಣರವರಿಗೆ ಶುಭ ಕೋರಿ ಶಾಲು ಹೊದಿಸಿ ಸನ್ಮಾನಿಸಿದ್ದರು. ನಂತರ ಮಾತನಾಡಿದ್ದ ಬಸವರಾಜ ಬೊಮ್ಮಾಯಿ, "ಕೃಷ್ಣ ಅವರು ಕರ್ನಾಟಕದ ಹೆಮ್ಮೆ, ನಾಡು ಕಂಡ ಅಪ್ರತಿಮ, ಸರಳ ಸಜ್ಜನಿಕೆಯ ರಾಜಕಾರಣಿ, ರಾಜ್ಯದಲ್ಲಿ ಉತ್ತಮ ಆಡಳಿತ ವ್ಯವಸ್ಥೆಗೆ ಹೆಸರಾಗಿರುವ ಎಸ್.ಎಂ.ಕೃಷ್ಣಗೆ ರಾಷ್ಟ್ರಪತಿಗಳು, ಪ್ರಧಾನಿಗಳ ಶಿಫಾರಿಸಿನ ಮೇರೆಗೆ ಪದ್ಮ ವಿಭೂಷಣ ಕೊಟ್ಟಿರೋದು ನಮಗೆಲ್ಲರಿಗೂ ಸಂತಸ ತಂದಿದೆ. ಕೃಷ್ಣ ಅವರ ಆಡಳಿತ ಕಾಲದಲ್ಲಿ ಹತ್ತು ಹಲವು ಸಮಸ್ಯೆ ಎದುರಿಸಿರೋದು ಒಂದು ಕಡೆಯಾದರೆ ವಿಶೇಷವಾಗಿ ಎಲ್ಲ ವರ್ಗದವರಿಗೂ ವಿಶೇಷ ಯೋಜನೆಗಳನ್ನು ಕೊಟ್ಟಿದ್ದಾರೆ" ಎಂದು ಹೇಳಿದ್ದರು.

ಇದಕ್ಕೂ ಮೊದಲು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ, ಮಾಜಿ ಮುಖ್ಯಮಂತ್ರಿ ಎಸ್​ ಎಂ ಕೃಷ್ಣ ಅವರು ನಿವಾಸಕ್ಕೆ ಭೇಟಿ ನೀಡಿ, ಅಭಿನಂದಿಸಿದ್ದರು. ನಂತರ ಮಾತನಾಡಿದ ಅವರು, ಕೃಷ್ಣ ಅವರು ಮುಖ್ಯಮಂತ್ರಿಗಳಾಗಿದ್ದಾಗ ಭೂಮಿ ಸಾಫ್ಟ್‌ವೇರ್ ಜಾರಿಗೊಳಿಸುವ ಮೂಲಕ ಕಂದಾಯ ಇಲಾಖೆಯಲ್ಲಿ ಡಿಜಿಟಲ್ ಕ್ರಾಂತಿ ಮಾಡಿದ್ದರು. ಇಂದು ಇಡೀ ದೇಶವೇ ಡಿಜಿಟಲ್ ಇಂಡಿಯಾ ಆಗಿ ಪರಿವರ್ತಿತವಾಗಿದೆ ಎಂದು ಅವರು ನೆನಪಿಸಿಕೊಂಡರು. ಕೃಷ್ಣ ಅವರು ರಾಜ್ಯದ ಹಿರಿಯ ಮುತ್ಸದ್ದಿ ಆಗಿದ್ದಾರೆ. ಅವರ ದೂರದೃಷ್ಟಿಯ ಫಲವಾಗಿ ಬೆಂಗಳೂರು ಇಂದು ವಿಜ್ಞಾನ ಮತ್ತು ತಂತ್ರಜ್ಞಾನಗಳಲ್ಲಿ ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ ಎಂದು ಅವರು ಬಣ್ಣಿಸಿದ್ದರು.

ಇದನ್ನೂ ಓದಿ:ಬೆಂಗಳೂರಿಗೆ ಪ್ರಧಾನಿ ಮೋದಿ ಬರುವ ಹಿನ್ನೆಲೆ: ಭಾರಿ ವಾಹನಗಳು ನಗರ ಪ್ರವೇಶಿಸಲು ನಿರ್ಬಂಧ..

ETV Bharat Logo

Copyright © 2025 Ushodaya Enterprises Pvt. Ltd., All Rights Reserved.