ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಷನ್ ಲಿಮಿಟೆಡ್ನಲ್ಲಿ (ಬಿಎಂಆರ್ಸಿಎಲ್) ಖಾಲಿ ಇರುವ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಒಟ್ಟು 10 ಹುದ್ದೆಗಳಿವೆ. ನಿಯೋಜನೆ/ನೇರ ನೇಮಕಾತಿ ಆಧಾರದಡಿ ಭರ್ತಿ ನಡೆಸಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಹಾಕಬಹುದು.
ಹುದ್ದೆಗಳ ವಿವರ: ಮ್ಯಾನೇಜರ್ - 4 ಮತ್ತು ಡೆಪ್ಯೂಟಿ ಜನರಲ್ ಮ್ಯಾನೇಜರ್ 6 ಸೇರಿದಂತೆ ಒಟ್ಟು 10 ಹುದ್ದೆಗಳ ಭರ್ತಿಗೆ ಕ್ರಮ.
ವಿದ್ಯಾರ್ಹತೆ: ಬಿಇ/ ಬಿ.ಟೆಕ್ ಪದವಿ.
ವಯೋಮಿತಿ: ಜನರಲ್ ಮ್ಯಾನೇಜರ್ ಹುದ್ದೆಗೆ 50 ವರ್ಷ, ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗೆ 45 ವರ್ಷ ವಯೋಮಿತಿ.
ಆಯ್ಕೆ ಪ್ರಕ್ರಿಯೆ: ಸಂದರ್ಶನದ ಮೂಲಕ ಆಯ್ಕೆ
ವೇತನ: ಜನರಲ್ ಮ್ಯಾನೇಜರ್ಗೆ ₹1,12,610-₹1,60,620 ಮತ್ತು ಡೆಪ್ಯೂಟಿ ಜನರಲ್ ಮ್ಯಾನೇಜರ್ ಹುದ್ದೆಗೆ ₹63,880-₹1,22,540.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಸಕ್ತರು ಈ ಕೆಳಗಿನ ವಿಳಾಸಕ್ಕೆ ನಿಗದಿತ ಅರ್ಜಿ ಸೇರಿದಂತೆ ಸಂಪೂರ್ಣ ದಾಖಲಾತಿ ಸಲ್ಲಿಸಬಹುದು.
ಅರ್ಜಿ ಸಲ್ಲಿಕೆ ವಿಳಾಸ: ಜನರಲ್ ಮ್ಯಾನೇಜರ್ (ಎಚ್ಆರ್), ಬೆಂಗಳೂರು ಮೆಟ್ರೋ ರೈಲ್ ಕಾರ್ಪೋರೇಷನ್ ಲಿಮಿಟೆಡ್, 3ನೇ ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್, ಕೆ.ಎಚ್.ರಸ್ತೆ, ಶಾಂತಿನಗರ, ಬೆಂಗಳೂರು- 560027.
ನವೆಂಬರ್ 16ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಡಿಸೆಂಬರ್ 15. ಹಾರ್ಡ್ ಕಾಪಿ ಸಲ್ಲಿಕೆಗೆ ಡಿಸೆಂಬರ್ 20 ಕಡೇಯ ದಿನ.
ಈ ಕುರಿತು ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು english.bmrc.co.inಗೆ ಭೇಟಿ ನೀಡಿ.
ಇದನ್ನೂ ಓದಿ: BDAನಲ್ಲಿದೆ ಉದ್ಯೋಗಾವಕಾಶ; ಟೈಪಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ