ಬೆಂಗಳೂರು : ಶಾಲಾ-ಕಾಲೇಜುಗಳು ಆರಂಭವಾದ ಹಿನ್ನೆಲೆ ಈವರೆಗೆ ಪಾಸ್ಗಾಗಿ ಅರ್ಜಿ ಸಲ್ಲಿಸದ ವಿದ್ಯಾರ್ಥಿಗಳು ಫೆ.28ರೊಳಗೆ ಅರ್ಜಿ ಸಲ್ಲಿಸಿ ಪಾಸ್ ಪಡೆಯುವಂತೆ ಬಿಎಂಟಿಸಿ ಸಂಸ್ಥೆ ತಿಳಿಸಿದೆ.
ವಿದ್ಯಾರ್ಥಿಗಳು ವಾಸಸ್ಥಳದಿಂದ ಶಾಲಾ/ಕಾಲೇಜಿಗೆ ಪ್ರಯಾಣಿಸಲು ತೊಂದರೆಯಾಗಬಾರದೆಂಬ ಉದ್ದೇಶದಿಂದ, ಅವರ ಅನುಕೂಲಕ್ಕಾಗಿ 2019-20ನೇ ಸಾಲಿನಲ್ಲಿ ವಿತರಣೆ ಮಾಡಿರುವ ಸ್ಮಾರ್ಟ್ ಕಾರ್ಡ್ ವಿದ್ಯಾರ್ಥಿ ಪಾಸ್ ಅಥವಾ ಪ್ರಸ್ತುತ ಸಾಲಿನಲ್ಲಿ ಶಾಲಾ/ಕಾಲೇಜಿಗೆ ದಾಖಲಾಗಿರುವ ಶುಲ್ಕದ ರಸೀದಿ ಅಥವಾ ಗುರುತಿನ ಚೀಟಿಯೊಂದಿಗೆ ಸಂಸ್ಥೆಯ ಬಸ್ಗಳಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿತ್ತು.
ಓದಿ: ಆದಷ್ಟು ಬೇಗ ಜಾತಿ ಗಣತಿ ವರದಿ ಪ್ರಕಟ: ಕೋಟಾ ಶ್ರೀನಿವಾಸ ಪೂಜಾರಿ
ಇದೀಗ 2020-21ನೇ ಸಾಲಿನ ವಿದ್ಯಾರ್ಥಿ ಪಾಸ್ಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ಬೆಂಗಳೂರು ಒನ್ ಕೇಂದ್ರಗಳಲ್ಲಿ ಪಾಸ್ ಪಡೆಯಲು ಕಳೆದ ಡಿಸೆಂಬರ್ 21ರಿಂದ ಅವಕಾಶ ಕಲ್ಪಿಸಲಾಗಿತ್ತು. ಶಿಕ್ಷಣ ಸಂಸ್ಥೆಗಳು ಸಂಸ್ಥೆಯ ವೆಬ್‌ಸೈಟ್ (WWW.mybmtc.karnataka.nic.in) ಮೂಲಕ ನೋಂದಣಿಯಾಗದೇ ಇದ್ದಲ್ಲಿ, ನೋಂದಣಿ ಮಾಡಿಕೊಳ್ಳಲು ಸಂಸ್ಥೆಯು ಕೋರಿದೆ.
ಈಗಾಗಲೇ ವಿದ್ಯಾರ್ಥಿಗಳು ಪಾಸಿಗಾಗಿ ಅರ್ಜಿ ಸಲ್ಲಿಸಿ, ಪಾಸ್ ಪಡೆಯದೇ ಇದ್ದಲ್ಲಿ ಬೆಂಗಳೂರಿನ ಒನ್ ಕೇಂದ್ರಗಳಲ್ಲಿ ಪಾಸ್ ಪಡೆಯಬಹುದಾಗಿದೆ.