ಬೆಂಗಳೂರು: ಇದ್ದಕ್ಕಿದ್ದ ಹಾಗೆ ಬ್ರೇಕ್ ಫೇಲ್ ಆಗಿ ಬಿಎಂಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ದುರಂತ ತಪ್ಪಿರುವ ಘಟನೆ ಮಾಗಡಿ ರಸ್ತೆಯ ದಾಸರಹಳ್ಳಿ ಬಳಿ ನಡೆದಿದೆ.
ಜಾಲಹಳ್ಳಿ ಕ್ರಾಸ್-ಮೆಜೆಸ್ಟಿಕ್ ಮಾರ್ಗದಲ್ಲಿ ಚಲಿಸುವ ಬಿಎಂಟಿಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಒಬ್ಬರಿಗೆ ಗಂಭೀರ ಗಾಯವಾಗಿದ್ದು, ಕೂಡಲೇ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಜಯನಗರ ಸಂಚಾರಿ ಠಾಣೆಯಲ್ಲಿ ಘಟನೆ ಬಗ್ಗೆ ಪ್ರಕರಣ ದಾಖಲಾಗಿದೆ.