ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಗದೊಂದು ಬಿಎಂಟಿಸಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಶೇಷಾದ್ರಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ನಗರ ಸಾರಿಗೆ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
2014 ರಲ್ಲಿ 186 ಅಶೋಕ್ ಲೇಲ್ಯಾಂಡ್ ಬಸ್ಗಳನ್ನ ಖರೀದಿ ಮಾಡಲಾಗಿತ್ತು. ಇತ್ತೀಚಿಗೆ ಸೌತ್ ಎಂಡ್ ಸರ್ಕಲ್ ಮತ್ತು ಮಕ್ಕಳ ಕೂಟದ ಬಳಿ ಎರಡು ಮಿನಿ ಬಸ್ಗಳಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ಬಿಎಂಟಿಸಿ ಅಧಿಕಾರಿಗಳು ಅಶೋಕ್ ಲೇಲ್ಯಾಂಡ್ ಕಂಪನಿಗೆ ದೂರು ನೀಡಿದ್ದರು. ಎಂಜಿನಿಯರ್‌ಗಳು ಬಂದು ಎಲ್ಲ ಬಸ್‌ಗಳನ್ನು ತಪಾಸಣೆ ಮಾಡಿ ಸಮಸ್ಯೆ ಬಗಹರಿಸಿದ್ದರು. ಬಳಿಕವೇ ಬಸ್‌ಗಳನ್ನು ಮತ್ತೆ ರೋಡ್‌ಗೆ ಇಳಿಸಲಾಗಿತ್ತು. ಆದರೆ, ಇದೀಗ ಮತ್ತೊಂದು ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಸಾರ್ವಜನಿಕ ವಲಯದಲ್ಲಿ ಆತಂಕದ ಮನೆ ಮಾಡಿದೆ.
ಇದನ್ನೂ ಓದಿ: ಬೆಂಗಳೂರಲ್ಲಿ ಮುಂಜಾನೆವರೆಗೂ ಭರ್ಜರಿ ಪಾರ್ಟಿ: ನಶೆಯಲ್ಲಿದ್ದವರಿಗೆ ಸಿಸಿಬಿ ಶಾಕ್!