ಬೆಂಗಳೂರು: ಬೈಕ್ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಪೊಲೀಸ್ ಹೆಡ್ಕಾನ್ಸ್ಟೇಬಲ್ ಬಲಿಯಾಗಿರುವ ದುರ್ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಸಿಟಿ ಮಾರ್ಕೆಟ್ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ರಾಮಾಚಾರಿ (47) ಸಾವನ್ನಪ್ಪಿದ ದುರ್ದೈವಿ. ಇವರು ರಾತ್ರಿ ಪಾಳಿ ಮುಗಿಸಿಕೊಂಡು ಇಂದು ಮಧ್ಯಾಹ್ನ ಮಾಗಡಿ ರೋಡ್ನಲ್ಲಿ ಮನೆಗೆ ತೆರಳುತ್ತಿದ್ದಾಗ ಹಿಂಬದಿಯಿಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ.
ಅಪಘಾತ ರಭಸಕ್ಕೆ ತಲೆಗೆ ತೀವ್ರ ಪೆಟ್ಟಾಗಿದ್ದು ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಚಲಿಸುತ್ತಿದ್ದ ಮಾರುತಿ ವ್ಯಾನ್ಗೆ ಆಕಸ್ಮಿಕ ಬೆಂಕಿ: ಕಾರು ಸುಟ್ಟು ಭಸ್ಮ