ಬೆಂಗಳೂರು: ಸಿಲಿಕಾನ್ ಸಿಟಿಯ ರಾಜರಾಜೇಶ್ವರಿ ನಗರ ಬಿಎಂಟಿಸಿ ಘಟಕ 21ರ ನಿರ್ವಾಹಕ ರಂಗನಾಥ್ ಅವರು ಡೆತ್ನೋಟ್ ಬರೆದಿಟ್ಟು, ಡಿಪೋದಲ್ಲೆ ಆತ್ಮಹತ್ಯೆಗೆ ಪ್ರಯತ್ನ ಪಟ್ಟಿರುವ ಘಟನೆ ನಡೆದಿದೆ. ಅಲ್ಲಿದ್ದ ಸಿಬ್ಬಂದಿ ನಿರ್ವಾಹಕನನ್ನು ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದಿದ್ದಾರೆ. ಅಧಿಕಾರಿಗಳ ಕಿರುಕುಳದಿಂದ ಈ ರೀತಿ ಮಾಡಿಕೊಂಡಿದ್ದಾರೆ ಎಂದು ಸಿಬ್ಬಂದಿ ಆರೋಪಿಸಿದೆ.
ಈ ಹಿಂದೆಯೂ ಕೂಡ ಅದೇ ಘಟಕದಲ್ಲಿ ಒಬ್ಬ ಚಾಲಕ, ಇದೇ ರೀತಿ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಡೆತ್ನೋಟ್ ಬರೆದಿಟ್ಟು, ಘಟಕದ ಆವರಣದ ಒಳಗೆ ಇರುವ ಮರಕ್ಕೆ ನೇಣು ಹಾಕಿಕೊಂಡು ಮೃತಪಟ್ಟಿದ್ದರು. ಇದನ್ನು ವಿರೋಧಿಸಿ ಸುಮಾರು ಎರಡು ದಿನಗಳ ಕಾಲ ಪ್ರತಿಭಟನೆ ನಡೆದಿತ್ತು. ಈಗಲೂ ಕೂಡ ಅದೇ ಘಟಕದಲ್ಲಿ ಈ ರೀತಿ ಅಧಿಕಾರಿ ಕಿರುಕುಳದಿಂದ ಆತ್ಮಹತ್ಯೆಗೆ ಯತ್ನ ಮಾಡಿ ಆಸ್ಪತ್ರೆ ಸೇರಿದ್ದಾರೆ ಎಂದು ಕಾರ್ಮಿಕ ಮುಖಂಡ ಆನಂದ್ ದೂರಿದ್ದಾರೆ.
ಸರ್ಕಾರದ ನಿರ್ಲಕ್ಷ್ಯ: ಈ ಹಿಂದೆ ಇಂತಹ ಘಟನೆ ನಡೆದಾಗ ಸರ್ಕಾರ ಯಾವುದೇ ತನಿಖೆ ನಡೆಸದೆ, ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದೆ. ಆಗಲೇ ಸರ್ಕಾರ ಎಚ್ಚೆತ್ತುಕೊಳ್ಳದೇ ಇದ್ದದ್ದು, ಈ ರೀತಿ ಘಟನೆ ಮರುಕಳಿಸಲು ಕಾರಣವಾಗಿದೆ. ಇದನ್ನು ನಾವು ಖಂಡಿಸುತ್ತೇವೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ: ಉಡುಪಿ: ಕೊಲೆ ಯತ್ನ ನಡೆಸಿದ್ದಾತನೇ ಆತ್ಮಹತ್ಯೆ ಮಾಡಿಕೊಂಡ