ಬೆಂಗಳೂರು : ಆಗಸ್ಟ್ 23 (ಸೋಮವಾರ)ರಿಂದಲೇ 9 ರಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ಸಂಸ್ಥೆಯ ಸಾಮಾನ್ಯ ಸೇವೆ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ( ಬಿಎಂಟಿಸಿ) ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ನಿರ್ದೇಶನದಂತೆ 2021-22ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು 9 ರಿಂದ 12ನೇ ತರಗತಿಗಳು ಸೋಮವಾರದಿಂದ ಪ್ರಾರಂಭಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳಿಗೆ ಅನುಕೂಲ ಮಾಡಲಾಗ್ತಿದೆ.
ವಿದ್ಯಾರ್ಥಿಗಳು 2020-21ನೇ ಸಾಲಿನಲ್ಲಿ ವಿತರಣೆ ಮಾಡಿರುವ ಸ್ಟಾರ್ಟ್ ಕಾರ್ಡ್ ವಿದ್ಯಾರ್ಥಿ ಪಾಸ್ ಅಥವಾ ಪ್ರಸಕ್ತ ಸಾಲಿನಲ್ಲಿ ಶಾಲಾ-ಕಾಲೇಜಿಗೆ ದಾಖಲಾಗಿರುವ ಶುಲ್ಕ ರಸೀದಿ ಅಥವಾ ಶಾಲಾ- ಕಾಲೇಜಿನ ಗುರುತಿನ ಚೀಟಿಯಿದ್ರೆ ಉಚಿತವಾಗಿ ಪ್ರಯಾಣಿಸಬಹುದು.
ಆಗಸ್ಟ್ 23ರಿಂದ ಮುಂದಿನ ಆದೇಶದವರೆಗೂ ಸಂಸ್ಥೆಯ ಸಾಮಾನ್ಯ ಸಾರಿಗೆ ಬಸ್‌ಗಳಲ್ಲಿ ವಿದ್ಯಾರ್ಥಿಗಳ ವಾಸಸ್ಥಳದಿಂದ ಶಾಲೆ/ಕಾಲೇಜಿನವರೆಗೆ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ : ಚಿನ್ನದ ಹಾಲ್ಮಾರ್ಕಿಂಗ್ಗೆ ಗಡುವು ವಿಸ್ತರಣೆ ಇಲ್ಲ.. ಶುದ್ಧ ಚಿನ್ನ ಮಾರಾಟ ಕಡ್ಡಾಯ: ಬಿಐಎಸ್