ಬೆಂಗಳೂರು: ರಾಜ್ಯಾದ್ಯಂತ ನಾಲ್ಕನೇ ಹಂತದ ಲಾಕ್ಡೌನ್ ಘೋಷಣೆಯಾಗಿದೆ. ಈ ನಡುವೆ ಬಿಎಂಟಿಸಿ ಹಾಗೂ ಕೆಎಸ್ಆರ್ಟಿಸಿ ಬಸ್ಗಳನ್ನು ರಸ್ತೆಗಿಳಿಸಲು ಎಲ್ಲಾ ರೀತಿಯ ತಯಾರಿ ನಡೆದಿದೆ.
ಬಿಎಂಟಿಸಿ ಬಸ್ ಸಂಚಾರಕ್ಕೆ ಸರ್ಕಾರ ಅವಕಾಶ ನೀಡುತ್ತಾ ಎನ್ನುವುದು ಇನ್ನೂ ಬಹಿರಂಗವಾಗಿಲ್ಲ. ಈ ನಡುವೆ ನಡುವೆ ಡಿಪೋಗಳಲ್ಲಿ ಬಸ್ಗಳ ಸ್ವಚ್ಛತಾ ಕಾರ್ಯ ಹಾಗೂ ಮೆಜೆಸ್ಟಿಕ್ ನಿಲ್ದಾಣದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ನೆಲಕ್ಕೆ ಬಣ್ಣದ ಮಾರ್ಕ್ಗಳನ್ನು ಹಾಕಲಾಗಿದೆ.
ಕೇಂದ್ರ ಸರ್ಕಾರ ನಾಲ್ಕನೇ ಹಂತದ ಲಾಕ್ಡೌನ್ಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಎಲ್ಲಾ ಅಧಿಕಾರವನ್ನು ಆಯಾ ರಾಜ್ಯ ಸರ್ಕಾರಗಳಿಗೆ ಬಿಟ್ಟಿದೆ. ಈ ನಿಟ್ಟಿನಲ್ಲಿ ಈಗಾಗಲೇ ರಾಜ್ಯ ಮಟ್ಟದ ಅಧಿಕಾರಿಗಳ ಜೊತೆಗೆ ರಾಜಕೀಯ ನಾಯಕರುಗಳು ಸಭೆ ನಡೆಸುತ್ತಿದ್ದಾರೆ.