ಬೆಂಗಳೂರು : ಮಹಾನಗರ ಸಾರಿಗೆ ಸಂಸ್ಥೆ ವತಿಯಿಂದ 64ನೇ ಕನ್ನಡ ರಾಜ್ಯೋತ್ಸವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಿಎಂಟಿಸಿಯ ಬಸ್ ಪ್ರತ್ಯೇಕ ಪಥದ ಬಗೆಗಿನ ಸ್ತಬ್ಧಚಿತ್ರವನ್ನು ಉದ್ಘಾಟಿಸಲಾಯಿತು.
ಇನ್ನು ಅತೀ ಹೆಚ್ಚು ಅಂಕ ಪಡೆದ ಸಂಸ್ಥೆಯ ಸಿಬ್ಬಂದಿ ಮಕ್ಕಳಿಗೆ ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನ ನೀಡಿ ಗೌರವಿಸಲಾಯಿತು. ಬಸ್ಸುಗಳಲ್ಲಿ ಮತ್ತು ಬಸ್ ನಿಲ್ದಾಣಗಳಲ್ಲಿದ್ದ 5000 ಕ್ಕೂ ಅಧಿಕ ಪ್ರಯಾಣಿಕರಿಗೆ ಸಂಸ್ಥೆಯ ಕನ್ನಡ ಕ್ರಿಯಾ ಸಮಿತಿ ವತಿಯಿಂದ ಪುಸ್ತಕಗಳನ್ನು ವಿತರಿಸಲಾಯಿತು. ಎಲ್ಲಾ 45 ಘಟಕಗಳಲ್ಲಿ ಕನ್ನಡ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.
ಇತ್ತ ಕೆಎಸ್ಆರ್ಟಿಸಿ ಕೇಂದ್ರ ಕಚೇರಿಯಲ್ಲಿ ನಾಡ ದೇವತೆ ಭುವನೇಶ್ವರಿಗೆ ಪುಷ್ಪ ನಮನ ಅರ್ಪಿಸುವ ಮೂಲಕ ರಾಜ್ಯೋತ್ಸವ ಆಚರಿಸಿದರು.