ಬೆಂಗಳೂರು: ಬಿಎಂಟಿಸಿ ಪ್ರಯಾಣಿಕರಿಗೆ ಶೀಘ್ರದಲ್ಲೇ ಗುಡ್ ನ್ಯೂಸ್ ಸಿಗಲಿದೆ. ಬಿಎಂಟಿಸಿ ಟಿಕೆಟ್ ದರ ಇಳಿಕೆ ಸಂಬಂಧ ಚಿಂತನೆ ನಡೆಯುತ್ತಿದ್ದು, ಬಸ್ ಪ್ರಯಾಣ ದರ ಇಳಿಕೆ ಸಾಧಕ-ಬಾಧಕಗಳ ಬಗ್ಗೆ ಅಧಿಕಾರಿಗಳು ಚರ್ಚೆ ನಡೆಸಿದ್ದಾರೆ.
ಎಲ್ಲಾ ಮಾರ್ಗಗಳ ದರದ ಬಗ್ಗೆ ಮಾಹಿತಿ ಕಲೆಹಾರುತ್ತಿರುವ ಬಿಎಂಟಿಸಿ, ಶೀಘ್ರವೇ ದರ ಇಳಿಕೆ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಿದೆ. ಈ ಕುರಿತು ಮಾಹಿತಿ ನೀಡಿದ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಶಿಖಾ, ಎಷ್ಟು ದರ ಇಳಿಕೆ ಮಾಡಬೇಕು ಎಂಬ ಬಗ್ಗೆ ಚರ್ಚೆ ಮಾಡಿ ತೀರ್ಮಾನ ಮಾಡಲಾಗುವುದು ಎಂದು ತಿಳಿಸಿದರು.