ETV Bharat / state

Weekend Curfew: ಸಾರಿಗೆ ಸೇವೆಯಲ್ಲಿ ಬದಲಾವಣೆ.. ಇಲ್ಲಿದೆ ಮಾಹಿತಿ

Weekend Curfew in Bengaluru: ವಾರಾಂತ್ಯದ ನಿಷೇಧಾಜ್ಞೆ ವೇಳೆ ಸಾರಿಗೆ ಸೇವೆಗಳಲ್ಲಿ ಬದಲಾವಣೆ ಇರಲಿದ್ದು, ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್​​​ ಸಂಚಾರ ಬಂದ್ ಅಗಲಿದೆ. ನಗರದಲ್ಲಿ ಮೆಟ್ರೋ ಓಡಾಟ ಎಂದಿನಂತೆ ಇರಲಿದೆ‌‌.

bmtc-to-shut-down-in-weekend-curfew-at-bengaluru
ವಿಕೆಂಡ್ ಕರ್ಫ್ಯೂ ಇದ್ದರೂ ನಮ್ಮ ಮೆಟ್ರೋ ಓಡಾಟ
author img

By

Published : Jan 5, 2022, 2:28 PM IST

Updated : Jan 5, 2022, 3:09 PM IST

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೋವಿಡ್​ ಆರ್ಭಟ ಜೋರಾಗಿದ್ದು, ನಿನ್ನೆ ಒಂದೇ ದಿನ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಆಗಿದೆ. ಇದರ ಬೆನ್ನಲ್ಲೇ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿ ರಾತ್ರಿ ನಿಷೇಧಾಜ್ಞೆ ಮುಂದುವರೆಸಿ, ವಾರಾಂತ್ಯದ ನಿಷೇಧಾಜ್ಞೆ ಜಾರಿ ಮಾಡಿದೆ. ಜೊತೆಗೆ ಹಲವು ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ‌.

ನಮ್ಮ ಮೆಟ್ರೋ, ಬಿಎಂಟಿಸಿ, ಕೆಎಸ್​ಆರ್​​ಟಿಸಿ ಬಸ್​​ಗಳು ತುರ್ತು ಅಗತ್ಯ ಸೇವೆಗೆ ಒಳಪಡಲಿವೆ. ವಾರಾಂತ್ಯದ ನಿಷೇಧಾಜ್ಞೆ ಹಿನ್ನೆಲೆಯಲ್ಲಿ ಸಾರಿಗೆ ಸೇವೆಗಳಲ್ಲಿ ಕೆಲ ಬದಲಾವಣೆಯಾಗಿದೆ‌. ಬಿಎಂಟಿಸಿ ಬಸ್​​​ ಸಂಚಾರ ಬಂದ್ ಆಗಲಿದ್ದು, ಮೆಟ್ರೋ ಓಡಾಟ ಎಂದಿನಂತೆ ಇರಲಿದೆ‌‌.

ವಾರಾಂತ್ಯದ ಕರ್ಫ್ಯೂ ವೇಳೆ ಮೆಟ್ರೋ ಸಂಚಾರಕ್ಕೆ ಯಾವುದೇ ಅಡ್ಡಿಯಿಲ್ಲ:

ಶನಿವಾರ - ಭಾನುವಾರ ಎಂದಿನಂತೆ ಹಸಿರು ಮತ್ತು ನೇರಳೆ ಎರಡು ಮಾರ್ಗದಲ್ಲೂ ಮೆಟ್ರೋ ಕಾರ್ಯಾಚರಣೆ ಇರಲಿದ್ದು, ಶೇಕಡಾ 50ರಷ್ಟು ಪ್ರಯಾಣಿಕರಿಗೆ ಮಾತ್ರ ಮೆಟ್ರೋದಲ್ಲಿ ಅವಕಾಶ ನೀಡಲಾಗುತ್ತಿದೆ. ಸದ್ಯ ಮೆಟ್ರೋದಲ್ಲಿ ನಿತ್ಯ 1,800 ರಿಂದ 1,900 ಪ್ರಯಾಣಿಕರು ಸಂಚಾರ ಮಾಡುತ್ತಿದ್ದಾರೆ. ಕೋವಿಡ್ ಹೆಚ್ಚಳವಾದ ಕಾರಣ 800 ರಿಂದ 900 ಪ್ರಯಾಣಿಕರ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಕೋವಿಡ್ ನಿಯಮದನ್ವಯ ಮೆಟ್ರೋ ಓಡಿಸಲು ನಿರ್ಧಾರ ಮಾಡಲಾಗಿದ್ದು, ಸಂಚಾರದ ಅವಧಿ ಕಡಿತಗೊಳಿಸಲಾಗಿದೆ.‌

ಸದ್ಯ 10ರಿಂದ 15 ನಿಮಿಷಕ್ಕೊಂದು ಮೆಟ್ರೋ ರೈಲು ಕಾರ್ಯಾಚರಣೆಯಾಗುತ್ತಿದೆ. ಕರ್ಫ್ಯೂ ವೇಳೆ ಅರ್ಧ ಗಂಟೆಗೊಂದು ಮೆಟ್ರೋ ರೈಲು ಓಡಾಡಲಿದೆ ಎಂದು ನಮ್ಮ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್ ಮಾಹಿತಿ ನೀಡಿದ್ದಾರೆ.

ವೀಕೆಂಡ್ ಕರ್ಫ್ಯೂ ವೇಳೆ ಬಿಎಂಟಿಸಿ ಬಸ್ ಸಂಚಾರ ಬಂದ್:

ವಾರಾಂತ್ಯದ ನಿಷೇಧಾಜ್ಞೆ ವೇಳೆ ಶನಿವಾರ, ಭಾನುವಾರ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಓಡಾಟ ಇರುವುದಿಲ್ಲ. ಜೊತೆಗೆ ರಾತ್ರಿ ನಿಷೇಧಾಜ್ಞೆ ವೇಳೆಯೂ ಬಸ್ ಸಂಚರಿಸುವುದಿಲ್ಲ. ಅಗತ್ಯ ಸೇವೆಯಡಿ ಮಾತ್ರ ಬಸ್ ಓಡಾಟ ಇರಲಿದ್ದು, ಸಾರ್ವಜನಿಕ ಸಂಚಾರ ಸೇವೆ ಇರುವುದಿಲ್ಲ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ತಿಳಿಸಿದ್ದಾರೆ.

ಗೋವಾ, ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರ ಮೇಲೆ ಕೆಎಸ್​​ಆರ್​​ಟಿಸಿ ಹದ್ದಿನ ಕಣ್ಣು:

ನಿಷೇಧಾಜ್ಞೆ ಸಮಯದಲ್ಲಿ ಕೆಎಸ್‌ಆರ್​ಟಿಸಿ ಸೇವೆ ಎಂದಿನಂತೆ ಇರಲಿದ್ದು, ಸರ್ಕಾರದ ಮಾರ್ಗಸೂಚಿ ಪಾಲನೆ ಮಾಡಲಾಗುತ್ತಿದೆ. ಅಗತ್ಯಕ್ಕೆ ತಕ್ಕಂತೆ ರಾಜ್ಯಾದ್ಯಂತ ಕೆಎಸ್‌ಆರ್​ಟಿಸಿ ಬಸ್​​ ಸಂಚರಿಸಲಿವೆ. ಅಂತಾರಾಜ್ಯ ಬಸ್ ಸಂಚಾರವೂ ಇರಲಿದ್ದು, ಪ್ರಮುಖವಾಗಿ ಗೋವಾ, ಕೇರಳ ಹಾಗೂ ಮಹಾರಾಷ್ಟ್ರ ಗಡಿ ಭಾಗಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ ಅಂತ ಕೆಎಸ್‌ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Women Doctors Marry: ಮಹಾರಾಷ್ಟ್ರದಲ್ಲಿ ಮಹಿಳಾ ವೈದ್ಯರ ನಿಶ್ಚಿತಾರ್ಥ, ಗೋವಾದಲ್ಲಿ ಮದುವೆಗೆ ಪ್ಲಾನ್​​​!​

Last Updated : Jan 5, 2022, 3:09 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.