ಬೆಂಗಳೂರು: ಲಾಕ್ಡೌನ್ ಸಡಿಲಿಕೆ ಬಳಿಕ ಹಂತ ಹಂತವಾಗಿ ಬಿಎಂಟಿಸಿ ಬಸ್ಗಳನ್ನು ರಸ್ತೆಗಿಳಿಸುತ್ತಿದ್ದು, ಇಂದಿನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ 23 ವಾಯು ವಜ್ರ (AC Volvo) ಹವಾನಿಯಂತ್ರಿತ ಬಸ್ಗಳು ಕಾರ್ಯಾರಂಭಿಸಲಿವೆ.
ಮೈಸೂರು ರಸ್ತೆ ಸ್ಯಾಟ್ಲೈಟ್ ಬಸ್ ನಿಲ್ದಾಣದಿಂದ ಕೆಂಪೇಗೌಡ ವಿಮಾನ ನಿಲ್ದಾಣ, ಕೆಂಪೇಗೌಡ ಬಸ್ ನಿಲ್ದಾಣದಿಂದ ಕೆಂಪೇಗೌಡ ವಿಮಾನ ನಿಲ್ದಾಣ, ಬನಶಂಕರಿಯಿಂದ ಕೆಂಪೇಗೌಡ ವಿಮಾನ ನಿಲ್ದಾಣ, ಎಲೆಕ್ಟ್ರಾನಿಕ್ ಸಿಟಿಯಿಂದ ಕೆಂಪೇಗೌಡ ವಿಮಾನ ನಿಲ್ದಾಣ ಹಾಗೂ ಬಿಟಿಎಂ ಲೇಔಟ್ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಂಚಾರ ಆರಂಭಿಸಲಿವೆ.