ಬೆಂಗಳೂರು: ರಾಜಧಾನಿಯ ವಿವಿಧ ಶಾಲೆಗಳಿಗೆ ಇಂದು ಬಾಂಬ್ ಇಟ್ಟಿರುವುದಾಗಿ ಆಗಂತುಕರು ಬೆದರಿಕೆ ಹಾಕಿದ್ದಾರೆ. 15ಕ್ಕೂ ಹೆಚ್ಚು ಶಾಲೆಗಳ ಆಡಳಿತ ಮಂಡಳಿಯ ಇ-ಮೇಲ್ಗೆ ಬೆದರಿಕೆ ಸಂದೇಶ ರವಾನಿಸಲಾಗಿದೆ.
ಈ ಕುರಿತು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಪ್ರತಿಕ್ರಿಯಿಸಿ, ಬೆದರಿಕೆ ಕರೆ ಬಂದಿರುವ ಎಲ್ಲ ಕಡೆ ಸಿಐಡಿ ಹಾಗೂ ಸ್ಕ್ವೈಡ್‌ಗಳನ್ನು ಕಳುಹಿಸಿ ತಪಾಸಣೆ ನಡೆಸಲಾಗುತ್ತದೆ. ಕಟ್ಟೆಚ್ಚರ ವಹಿಸುವಂತೆ ಸಚಿವರು ನಿರ್ದೇಶಿಸಿದ್ದಾರೆ. ಬೆದರಿಕೆ ಬಂದಿರುವ ಶಾಲೆಗಳಲ್ಲಿ ಪೊಲೀಸ್ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. ಕಳೆದ ವರ್ಷ ಕೂಡಾ ಬೆದರಿಕೆ ಬಂದಿತ್ತು. ಆಗ ನಮ್ಮ ಸಿಬ್ಬಂದಿ ಎಚ್ಚೆತ್ತುಕೊಂಡು ಆರೋಪಿಗಳನ್ನು ಪತ್ತೆ ಮಾಡಿದ್ದರು. ಅವುಗಳೆಲ್ಲವೂ ಹುಸಿ ಬೆದರಿಕೆ ಕರೆಗಳಾಗಿದ್ದವು. ಈ ಪ್ರಕರಣವನ್ನೂ ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದರು.
ಮೂಲ ಪತ್ತೆ ಹಚ್ಚುವವರೆಗೂ ಬಿಡುವುದಿಲ್ಲ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ನಗರ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಕರೆ ಮಾಡಿ ಮಾಹಿತಿ ಪಡೆದಿದ್ದೇನೆ. ಬಾಂಬ್ ಬೆದರಿಕೆಯ ಇಮೇಲ್ ಬಗ್ಗೆ ಪರಿಶಿಲೀಸುವಂತೆ ಸಿಐಡಿ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಮೂಲ ಪತ್ತೆ ಹಚ್ಚುವವರೆಗೂ ಬಿಡುವುದಿಲ್ಲ. ತುಮಕೂರಿನಿಂದ ಬೆಂಗಳೂರಿಗೆ ವಾಪಸ್ ಆದ ನಂತರ ಇಲಾಖೆಯ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆಯುತ್ತೇನೆ. ಪೋಷಕರು ಮತ್ತು ಮಕ್ಕಳು ಆತಂಕಪಡುವುದು ಬೇಡ ಎಂದು ತಿಳಿಸಿದ್ದಾರೆ.
-
ಬೆಂಗಳೂರಿನ ಕೆಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಸದಾಶಿವ ನಗರದ ನೀವ್ ಸ್ಕೂಲ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ವೇಳೆ ಪೋಲಿಸ್ ಅಧಿಕಾರಿಗಳಿಂದ ಘಟನೆಯ ಬಗ್ಗೆ ಮಾಹಿತಿ ಪಡೆದು ಸೂಕ್ತ ತನಿಖೆ ನಡೆಸಲು ಸೂಚಿಸಿದೆ. pic.twitter.com/MBxp1tA6i2
— DK Shivakumar (@DKShivakumar) December 1, 2023 " class="align-text-top noRightClick twitterSection" data="
">ಬೆಂಗಳೂರಿನ ಕೆಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಸದಾಶಿವ ನಗರದ ನೀವ್ ಸ್ಕೂಲ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ವೇಳೆ ಪೋಲಿಸ್ ಅಧಿಕಾರಿಗಳಿಂದ ಘಟನೆಯ ಬಗ್ಗೆ ಮಾಹಿತಿ ಪಡೆದು ಸೂಕ್ತ ತನಿಖೆ ನಡೆಸಲು ಸೂಚಿಸಿದೆ. pic.twitter.com/MBxp1tA6i2
— DK Shivakumar (@DKShivakumar) December 1, 2023ಬೆಂಗಳೂರಿನ ಕೆಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಸದಾಶಿವ ನಗರದ ನೀವ್ ಸ್ಕೂಲ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ವೇಳೆ ಪೋಲಿಸ್ ಅಧಿಕಾರಿಗಳಿಂದ ಘಟನೆಯ ಬಗ್ಗೆ ಮಾಹಿತಿ ಪಡೆದು ಸೂಕ್ತ ತನಿಖೆ ನಡೆಸಲು ಸೂಚಿಸಿದೆ. pic.twitter.com/MBxp1tA6i2
— DK Shivakumar (@DKShivakumar) December 1, 2023
ಡಿಸಿಎಂ ಶಿವಕುಮಾರ್ ಪ್ರತಿಕ್ರಿಯಿಸಿ, ಹಿರಿಯ ಪೊಲೀಸ್ ಅಧಿಕಾರಿಗಳು ಸದಾಶಿವ ನಗರದ ನೀವ್ ಸ್ಕೂಲ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸೂಕ್ತ ತನಿಖೆ ನಡೆಸಲು ಸೂಚಿಸಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.
ಪ್ರತಿಪಕ್ಷದ ನಾಯಕ ಆರ್.ಅಶೋಕ್ ಪ್ರತಿಕ್ರಿಯೆ: ಬಸವೇಶ್ವರನಗರದ ಎನ್ಎಎಫ್ಎಲ್ ಶಾಲೆಗೆ ಭೇಟಿ ನೀಡಿದ ಬಳಿಕ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮಾತನಾಡಿ, ಪೊಲೀಸ್ ಕಮೀಷನರ್ ಜೊತೆ ಮಾತನಾಡಿದ್ದೇನೆ. ಟೈಪ್ ಮಾಡಿದ್ದನ್ನು ನೋಡಿದರೆ ಹೈ ಲೆವೆಲ್ ಟೆರರಿಸ್ಟ್ ರೀತಿ ಕಾಣುತ್ತಿದೆ. ಇವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಇಲ್ಲಿ ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್ ಬಂದಿದ್ದು, ಏನೂ ಸಿಕ್ಕಿಲ್ಲ. ಸದ್ಯ 15 ಶಾಲೆಗೆ ಬಾಂಬ್ ಮೇಲ್ ಬಂದಿದೆ. ಜನರಲ್ಲಿ ಆತಂಕ ಶುರುವಾಗಿದೆ. ಹೀಗಾಗಿ ನಾನು ಕೂಡ ಭೇಟಿ ಮಾಡಿದ್ದೇನೆ ಎಂದರು.
ಯಾವ್ಯಾವ ಶಾಲೆಗಳಿಗೆ ಬೆದರಿಕೆ?: ಬಸವೇಶ್ವರ ನಗರದ ನ್ಯಾಷನಲ್, ವಿದ್ಯಾಶಿಲ್ಪ, ಎನ್‌ಪಿಎಸ್, ಹೆಬ್ಬಗೋಡಿಯ ಎಬಿನೈಜರ್ ಸೇರಿದಂತೆ ಒಟ್ಟು 15ಕ್ಕೂ ಹೆಚ್ಚು ಶಾಲೆಗಳಿಗೆ ಬೆದರಿಕೆ ಸಂದೇಶ ಬಂದಿದೆ. ಇಂದು ಎಂದಿನಂತೆ ಶಾಲೆಗಳು ಆರಂಭವಾಗಿತ್ತು.
ಪ್ರತಿದಿನದಂತೆ ಶಾಲೆಗಳ ಇಮೇಲ್ ಪರಿಶೀಲಿಸಲಾಗಿತ್ತು. ಆಗ ಬಾಂಬ್ ಬೆದರಿಕೆ ಸಂದೇಶ ಬಂದಿರುವುದು ಗೊತ್ತಾಗಿದೆ. ಕೂಡಲೇ ಆಡಳಿತ ಮಂಡಳಿಗಳು ಮಕ್ಕಳನ್ನು ಶಾಲೆಯಿಂದ ಹೊರಗೆ ಕಳುಹಿಸಿ ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ಕೈಗೊಂಡಿದ್ದಾರೆ. ಬಾಂಬ್ ನಿಷ್ಕ್ರಿಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯ ನಡೆಸುತ್ತಿದ್ದಾರೆ.
ಬಾಂಬ್ ಬೆದರಿಕೆ ಸಂದೇಶ ತಿಳಿಯುತ್ತಿದ್ದಂತೆ ಪೋಷಕರು ಆತಂಕ ವ್ಯಕ್ತಪಡಿಸಿ ಸ್ಥಳಕ್ಕೆ ಬಂದು ತಮ್ಮ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದಾರೆ. ಆಗಂತುಕರು ಯಾವ ಕಾರಣಕ್ಕಾಗಿ ಬಾಂಬ್ ಬೆದರಿಕೆ ಸಂದೇಶ ರವಾನಿಸಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಸಿದ ಬಳಿಕ ಸತ್ಯಾಂಶ ಗೊತ್ತಾಗಲಿದೆ.
ಇದನ್ನೂ ಓದಿ: ಬೆಂಗಳೂರು: ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ; ಮಕ್ಕಳನ್ನು ಮನೆಗೆ ಕರೆದೊಯ್ದ ಪೋಷಕರು