ಬೆಂಗಳೂರು : ನಗರದ ವಿನ್ಸೆಂಟ್ ಪಲ್ಲೋಟಿ ಹಾಗೂ ಎಬಿನೈಜರ್ ಇಂಟರ್ ನ್ಯಾಷನಲ್ ಸ್ಕೂಲ್ ಸೇರಿದಂತೆ 6 ಶಾಲೆಗಳಿಗೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ. ಇಂದು ಬೆಳಗ್ಗೆ ಇ ಮೇಲ್ ಮೂಲಕವೇ ಬಾಂಬ್ ಹಾಕುವ ಬೆದರಿಕೆಯೊಡ್ಡಿದ್ದಾರೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿರೋದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.
ಮಹದೇವಪುರದ ಗೋಪಾಲನ್ ಇಂಟರ್ ನ್ಯಾಷನಲ್ ಶಾಲೆ, ವರ್ತೂರಿನ ಡೆಲ್ಲಿ ಪಬ್ಲಿಕ್ ಶಾಲೆ, ಮಾರತ್ ಹಳ್ಳಿ ನ್ಯೂ ಅಕಾಡೆಮಿ ಶಾಲೆ, ಹೆಣ್ಣೂರಿನ ಸೆಂಟ್ ವಿನ್ಸೆಂಟ್ ಸ್ಕೂಲ್, ಇಂಡಿಯನ್ ಪಬ್ಲಿಕ್ ಸ್ಕೂಲ್ ಹಾಗೂ ಹೆಬ್ಬಗೋಡಿ ಎಬಿನೈಜರ್ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ ಬಂದಿತ್ತು. ಇದರಿಂದಾಗಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಶಾಲೆಗಳಿಂದ ಸಿಬ್ಬಂದಿ ಹೊರ ಬಂದಿದ್ದಾರೆ. ಇನ್ನು ಸ್ಥಳಕ್ಕೆ ಬಾಂಬ್ ಸ್ಕ್ವಾಡ್ ಹಾಗೂ ಡಾಗ್ ಸ್ಕ್ವಾಡ್ ಆಗಮಿಸಿ, ಪರಿಶೀಲಿಸುತ್ತಿವೆ.
ಹೊರ ವಲಯದ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದ್ದು, ಸ್ಥಳೀಯರ ಪೊಲೀಸರು ಮತ್ತು ಬಾಂಬ್ ನಿಷ್ಕ್ರೀಯ ದಳ ಸ್ಥಳಕ್ಕೆ ಭೇಟಿ ನೀಡಿ ಕ್ರಮ ಕೈಗೊಂಡಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಆಹಾರ ನೀಡಲು ಹೋದ ಮಗನ ಮೇಲೆ ಆನೆ ದಾಳಿ.. ಎದೆಗುಂದದೆ ಕಂದನನ್ನು ರಕ್ಷಿಸಿದ ತಂದೆ! ವಿಡಿಯೋ