ETV Bharat / state

ಬೊಮ್ಮಾಯಿ ಸಂಪುಟ ಸಚಿವರು, ಸಿಎಂ ಕಚೇರಿಗಳಲ್ಲಿ ನಿಯೋಜನೆಗೊಂಡ ಸಿಬ್ಬಂದಿ ಕಾರ್ಯಮುಕ್ತಗೊಳಿಸಿ ಆದೇಶ

author img

By

Published : May 16, 2023, 9:12 PM IST

ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಿದ್ದು, ಸಂಪುಟ ಸಚಿವರು, ಸಿಎಂ ಕಚೇರಿಗಳಲ್ಲಿ ನಿಯೋಜನೆಗೊಂಡ ಸಿಬ್ಬಂದಿಗಳನ್ನು ಕಾರ್ಯಮುಕ್ತಗೊಳಿಸಿ ಆದೇಶಿಸಲಾಗಿದೆ.

bommai-cabinet-ministers-and-staffs-are-released-from-govt
ಬೊಮ್ಮಾಯಿ ಸಂಪುಟ ಸಚಿವರು, ಸಿಎಂ ಕಚೇರಿಗಳಲ್ಲಿ ನಿಯೋಜನೆಗೊಂಡ ಸಿಬ್ಬಂದಿ ಕಾರ್ಯಮುಕ್ತಗೊಳಿಸಿ ಆದೇಶ

ಬೆಂಗಳೂರು : ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ವಿಸರ್ಜನೆಯಾಗಿದ್ದು, ಸಚಿವರು, ಸಿಎಂ ಕಚೇರಿಗಳಲ್ಲಿ ನಿಯೋಜನೆಗೊಂಡಿದ್ದ ಅಧಿಕಾರಿ, ನೌಕರರನ್ನು ಕಾರ್ಯಮುಕ್ತಗೊಳಿಸಿ ಆದೇಶಿಸಲಾಗಿದೆ. ಈ ಸಂಬಂಧ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ. ಚುನಾವಣೆಯಲ್ಲಿ ಬಿಜೆಪಿ ಸೋಲುನುಭವಿಸಿದ ಹಿನ್ನೆಲೆ ಸಿಎಂ ಬೊಮ್ಮಾಯಿ ಈಗಾಗಲೇ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಅಂಗೀಕರಿಸಲಾಗಿದ್ದು, ಅವರ ನೇತೃತ್ವದ ಸಚಿವ ಸಂಪುಟವನ್ನು ಸಹ ವಿಸರ್ಜಿಸಲಾಗಿದೆ.

ಮುಖ್ಯಮಂತ್ರಿ, ಸಂಪುಟ ದರ್ಜೆ ಸಚಿವರು, ರಾಜ್ಯ ಸಚಿವರ ರಾಜೀನಾಮೆ ಅಂಗೀಕಾರವಾದ ಹಿನ್ನೆಲೆ ಸಚಿವರ ಆಪ್ತ ಶಾಖೆ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯವರ ಆಪ್ತ ಶಾಖೆ, ಮುಖ್ಯಮಂತ್ರಿಯವರ ಸಲಹೆಗಾರರ ಆಪ್ತ ಶಾಖೆ, ಸಂಪುಟ ಸಚಿವರ ಸ್ಥಾನಮಾನ ಹೊಂದಿರುವ ಪ್ರಾಧಿಕಾರಿಗಳ ಆಪ್ತ ಶಾಖೆಗಳಲ್ಲಿ, ಸ್ಥಳ ನಿಯುಕ್ತಿ ನಿಯೋಜನೆಯಾಗಿರುವ, ಒಪ್ಪಂದ ಹಾಗು ಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ನೌಕರರನ್ನು ಕಾರ್ಯಮುಕ್ತಗೊಳಿಸಲು ಆದೇಶಿಸಲಾಗಿದೆ.

ಈ ಹಿನ್ನೆಲೆ ಕಚೇರಿಗಳಲ್ಲಿ ಪ್ರಸ್ತುತ ಬಾಕಿಯಿರುವ ಎಲ್ಲಾ ಭೌತಿಕ ಕಡತಗಳು ಮತ್ತು ಇ-ಆಫೀಸ್ ಕಡತಗಳನ್ನು ಸಂಬಂಧಪಟ್ಟ ಇಲಾಖೆಯ ಕಾರ್ಯದರ್ಶಿಯವರಿಗೆ ಹಿಂದಿರುಗಿಸುವಂತೆ ಸೂಚಿಸಲಾಗಿದೆ. ಕಚೇರಿ, ಉಪಯೋಗಕ್ಕಾಗಿ ಒದಗಿಸಿರುವ ಲೇಖನಿ, ಸಾಮಾಗ್ರಿಗಳು, ಗಣಕಯಂತ್ರಗಳು, ಪೀಠೋಪಕರಣಗಳು ಹಾಗೂ ಇತ್ಯಾದಿ ಸಾಮಾಗ್ರಿಗಳನ್ನು ಕೂಡಲೇ ಸಂಬಂಧಪಟ್ಟವರಿಗೆ ಹಿಂದಿರುಗಿಸುವಂತೆ ಸೂಚಿಸಲಾಗಿದೆ.

ಗುರುತಿನ ಚೀಟಿ ಹಾಗೂ ವಾಹನ ಪಾಸ್ ಇತ್ಯಾದಿ ಪಾಸ್‌ಗಳನ್ನು ಹಿಂತಿರುಗಿಸಬೇಕು. ಯಾವುದೇ ಕಡತ/ಸ್ವೀಕೃತಿ/ದಾಖಲಾತಿಗಳು ಇನ್ನಿತರೆ ಸಾಮಗ್ರಿಗಳು ಪೀಠೋಪಕರಣಗಳು/ಗಣಕಯಂತ್ರಗಳು ಕಳೆದುಹೋದಲ್ಲಿ, ಸಂಬಂಧಪಟ್ಟ ಸಚಿವರ ಆಪ್ತ ಕಾರ್ಯದರ್ಶಿಯವರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ತಿಳಿಸಲಾಗಿದೆ.

ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​​ 135 ಸ್ಥಾನಗಳನ್ನು ಪಡೆದು ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಆಡಳಿತಾರೂಢ ಬಿಜೆಪಿಯನ್ನು ಸೋಲಿಸಿದೆ. ಬಿಜೆಪಿ ಕೇವಲ 66 ಸ್ಥಾನಗಳಿಗೆ ಕುಸಿದಿದೆ. ಕಾಂಗ್ರೆಸ್​ ಬಹುಮತ ಹಿನ್ನಲೆ ಮುಖ್ಯಮಂತ್ರಿ ಘೋಷಣೆಗೆ ಕಸರತ್ತು ಮುಂದುವರೆದಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ಪೈಪೋಟಿ ಮುಂದುವರೆದಿದೆ.

ವಿಧಾನಸೌಧದ ಮುಂಭಾಗದಲ್ಲಿ ಮೇ 18ರ ಗುರುವಾರ ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಕಾಂಗ್ರೆಸ್ ಆಡಳಿತ ಇರುವ ರಾಜ್ಯಗಳ ಮುಖ್ಯಮಂತ್ರಿಗಳು ಈ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ : ಮೇ 18 ಕ್ಕೆ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ?: ವಿಧಾನಸೌಧದಲ್ಲಿ ಚುರುಕಾಗಲಿದೆ ಆಡಳಿತ ಯಂತ್ರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.