ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಆಡಳಿತ ನಡೆಸಲು ಸಮರ್ಥರಿದ್ದಾರೆ. ಚಾಣಾಕ್ಷ ರಾಜಕಾರಣಿ. ಅವರು-ನಾವು ಒಂದೇ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದೆವು. ಅವರಿಗೆ ರಾಜಕಾರಣದಲ್ಲಿ ಹೆಚ್ಚಿನ ಅನುಭವವಿದೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಅಭಿಪ್ರಾಯಪಟ್ಟಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ನಾಯಕರು ನಿಜವಾಗಲೂ ಒಬ್ಬ ಒಳ್ಳೆಯ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದಾರೆ. ಅವರ ನೇತೃತ್ವದಲ್ಲಿ ರಾಜ್ಯದ ಆಡಳಿತ ಸುಸೂತ್ರವಾಗಿ ನಡೆಯಲಿದೆ ಎಂದು ಆಶಿಸಿದರು.
ಯಡಿಯೂರಪ್ಪ ಅವರ ನಂತರ ಮುಖ್ಯಮಂತ್ರಿ ಸ್ಥಾನ ತುಂಬಲು ಬೊಮ್ಮಾಯಿ ಸಮರ್ಥರಿದ್ದಾರೆ. ಉತ್ತರ ಆಡಳಿತ ನೀಡಲಿದ್ದಾರೆ ಎಂದ ಅವರು, ಮುಂದಿನ ದಿನಗಳಲ್ಲಿ ಸಮಸ್ತ ಆರು ಕೋಟಿ ಜನ ಬಿಜೆಪಿಗೆ ಸಹಕಾರ ನೀಡಲಿ ಎಂದು ಮನವಿ ಮಾಡಿಕೊಂಡರು.
ಇದನ್ನೂ ಓದಿ: ರಾಜ್ಯದ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆ