ETV Bharat / state

ಗಡಿ ವಿವಾದದಲ್ಲಿ ರಾಜ್ಯದ ನಿಲುವನ್ನು ಸ್ಪಷ್ಟವಾಗಿ ಪ್ರಕಟಿಸಲಾಗಿದೆ: ಸಿಎಂ ಬೊಮ್ಮಾಯಿ - Etv Bharat Kannada

ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಜೊತೆ ಮಾತನಾಡಿರುವುದಾಗಿ ಸಿಎಂ ಬೊಮ್ಮಾಯಿ ತಿಳಿಸಿದರು.

KN_BNG
ಬಸವರಾಜ ಬೊಮ್ಮಾಯಿ
author img

By

Published : Dec 8, 2022, 5:38 PM IST

ಬೆಂಗಳೂರು: ಗಡಿ ವಿವಾದದಲ್ಲಿ ರಾಜ್ಯದ ನಿಲುವನ್ನು ಸ್ಪಷ್ಟವಾಗಿ ಪ್ರಕಟಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡುತ್ತಾ, ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಕನ್ನಡಿಗರ ರಕ್ಷಣೆ, ಅಲ್ಲಿನ ಆಸ್ತಿ ಪಾಸ್ತಿ ರಕ್ಷಣೆ ಮಾಡುವ ಸಲುವಾಗಿ ಕ್ರಮವಹಿಸಿದ್ದೇವೆ. ಮಹಾರಾಷ್ಟ್ರ ಡಿಜಿಪಿ ಹಾಗೂ ಮುಖ್ಯ ಕಾರ್ಯದರ್ಶಿಗಳೊಂದಿಗೆ ಮಾತನಾಡಿದ್ದೇವೆ ಎಂದರು.

ಕರ್ನಾಟಕದಲ್ಲಿಯೂ ಕೂಡ ಸಂಪೂರ್ಣ ಬಂದೋಬಸ್ತ್ ಮಾಡಲಾಗಿದೆ. ನಾನೂ ಕೂಡ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ಮಾತನಾಡಿದ್ದು, ಕನ್ನಡ ನಾಡಿನ ನಿಲುವನ್ನು ಸ್ಪಷ್ಟಪಡಿಸಿದ್ದೇವೆ ಎಂದು ಹೇಳಿದರು. ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ಕರೆ ಮಾಡಿ ಎರಡೂ ಕಡೆ ಸೌಹಾರ್ದತೆಯನ್ನು ಕಾಪಾಡಿಕೊಳ್ಳಲು ಹೇಳಿದ್ದಾರೆ. ನಿಮ್ಮ ಭಾಗದಲ್ಲಿ ಶಾಂತಿ ಸೌಹಾರ್ದತೆಯನ್ನು ನೀವು ಕಾಪಾಡಿಕೊಳ್ಳಿ, ನಮ್ಮ ಭಾಗದಲ್ಲಿ ನಾವು ನೋಡಿಕೊಳ್ಳುತ್ತೇವೆ ಎಂದು ತಿಳಿಸಲಾಗಿದೆ. ಯಾವುದೇ ಕಾರಣಕ್ಕೂ ಆ ಕಡೆಯಿಂದ ಪ್ರಚೋದನೆಯಾಗಕೂಡದು ಎಂದು ಆಗ್ರಹಿಸಲಾಗಿದೆ.‌ಈ ಕುರಿತು ಅಮಿತ್ ಶಾ ಅವರಾಗಲೀ ಅಥವಾ ಬೇರ್ಯಾರೂ ನನ್ನ ಬಳಿ ಮಾತನಾಡಿಲ್ಲ ಎಂದು ಸಿಎಂ ತಿಳಿಸಿದರು.

ಇದನ್ನೂ ಓದಿ: ಗಡಿ ವಿವಾದ: ಬಸ್​ ಸಂಚಾರ ಸ್ಥಗಿತ, ಗಡಿಯಲ್ಲಿ ರೋಗಿಗಳ ಪರದಾಟ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.